ದೇಶ- ವಿದೇಶ

Bihar exit poll : ಸಮೀಕ್ಷೆ ಬಿಡುಗಡೆ ; ಯಾರಿಗೆಷ್ಟು ಸೀಟು?

ಪಾಟ್ನಾ : ಭಾರೀ ಜಿದ್ದಾಜಿದ್ದಿನಿಂದ ಕೂಡಿದ್ದ ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಮತಗಟ್ಟೆ ಸಮೀಕ್ಷೆ ಹೊರಬಿದ್ದಿದ್ದು ಆಡಳಿತ ವಿರೋಧಿ ಅಲೆಯ ನಡುವೆಯೂ ಮತ್ತೊಮ್ಮೆ ಎನ್‌ಡಿಎ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ ಎಂದು ಭವಿಷ್ಯ ಹೇಳಿದೆ.

ರಾಜ್ಯದಲ್ಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಸರ್ಕಾರಕ್ಕೆ ದಾರಿ ಮಾಡಿಕೊಟ್ಟಿದೆ. ತೇಜಸ್ವಿ ಯಾದವ್ ನೇತೃತ್ವದ ಮಹಾಘಟಬಂಧನ್ ಬಣವು ಎನ್‌ಡಿಎಗಿಂತ ಹಿಂದುಳಿದಿದೆ ಎಂದು ಸಮೀಕ್ಷೆಗಳು ತಿಳಿಸಿವೆ.

ಎರಡನೇ ಹಂತದ ಮತದಾನ ಬೆನ್ನಲ್ಲೇ ವಿವಿಧ ಖಾಸಗಿ ಸಂಸ್ಥೆಗಳು ನಡೆಸಿರುವ ಮತಗಟ್ಟೆ ಸಮೀಕ್ಷೆಯಲ್ಲಿ ಬಹುತೇಕ ಸಮೀಕ್ಷೆಗಳು ಎನ್‌ಡಿಎ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಹೇಳಿದೆ.

ಇಟಿಜಿ ಖಾಸಗಿ ಸಂಸ್ಥೆ ಮಾತ್ರ ಮಹಾಘಟ್ ಬಂಧನ್ ಅಧಿಕಾರಕ್ಕೆ ಬರಲಿದೆ ಎಂದು ಹೇಳಿದೆ.

ಒಟ್ಟು ಹತ್ತಕ್ಕೂ ಹೆಚ್ಚು ಸಂಸ್ಥೆಗಳು ನಡೆಸಿರುವ ಮತಗಟ್ಟೆ ಸಮೀಕ್ಷೆಯಲ್ಲಿ ಎನ್‌ಡಿಎ ಅಧಿಕಾರಕ್ಕೆ ಬರಲಿದ್ದು ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಹಾರ್ ಮುಖ್ಯಮಂತ್ರಿ, ನಿತೀಶ್ ಕುಮಾರ್ ಜನಪ್ರಿಯತೆ ಹಾಗೂ ಚುನಾವಣೆಗೂ ಮುನ್ನ ಘೋಷಣೆ ಮಾಡಿದ್ದ ಜನಪ್ರಿಯ ಕಾರ್ಯಕ್ರಮಗಳು ಕೈಹಿಡಿದಿವೆ ಎಂಬುದು ಸಮೀಕ್ಷೆಯಿಂದ ಗೊತ್ತಾಗಿದೆ. ವಿಶೇಷವಾಗಿ ಮಹಿಳಾ ಮತದಾರರು ಈ ಬಾರಿ
ಎನ್ ಡಿಎ ಗೆ ಹೆಚ್ಚಿನ ಪ್ರಮಾಣದಲ್ಲಿ ಮತದ ಮತದಾನ ಮಾಡಿದ್ದಾರೆ. ಚುನಾವಣೆಗೆ ಮುನ್ನ ಮಹಿಳೆಯರ ಖಾತೆಗಳಿಗೆ 10,ಸಾವಿರ ಖಾತೆಗಳಿಗೆ ಹಾಕಿದ್ದು ಮತದಾನದ ಮೇಲೆ ಹೆಚ್ಚಿನ ಪರಿಣಾಮ ಬೀರಿದೆ.
ಈ ಬಾರಿ ಬಿಹಾರ ವಿಧಾನಸಭೆಯಲ್ಲಿ ಎಲ್ಲರ ರಾಜಕೀಯ ಲೆಕ್ಕಾಚಾರಗಳನ್ನು ಬುಡಮೇಲು ಮಾಡಬಹುದೆಂದು ಹೇಳಲಾಗಿದ್ದ ಚುನಾವಣೆ ಚಾಣಕ್ಯ ಪ್ರಶಾಂತ್ ಕಿಶೋರ್ ನೇತ್ರತ್ವದ ಜಿಎಸ್‌ಪಿ ಎರಡಂಕಿ ದಾಟುವುದಿಲ್ಲ ಎಂದು ಸಮೀಕ್ಷೆಯಲ್ಲಿ ಗೊತ್ತಾಗಿದೆ.

ಇನ್ನು ಲೋಕಸಭೆಯ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿಯವರು ದೇಶದಾದ್ಯಂತ ಎಬ್ಬಿಸಿರುವ ಓಟ್ ಚೋರಿ ಮದಾರರ ಮೇಲೆ ಯಾವುದೇ ಪರಿಣಾಮ ಬೀರಿಲ್ಲ‌. ಚುನಾವಣೆಗೂ ಮುನ್ನ ಆರ್ ಜೆ ಡಿ ನಾಯಕ ತೇಜಸ್ವಿ ಯಾದವ್ ಜೊತೆ ನಡೆಸಿದ ಜನ್ ಅಧಿಕಾರ ಯಾತ್ರೆಯೂ ಮಹಾಘಟ್ ಬಂಧನ್ ಗೆ ಕೈ ಹಿಡಿದಿಲ್ಲ.

ಟೈಮ್ಸ್‌ ನೌ ಜೆವಿಸಿ ಎಕ್ಸಿಟ್‌ ಪೋಲ್‌ ಪ್ರಕಾರ, ಬಿಹಾರ ರಾಜ್ಯದ 243 ಸ್ಥಾನಗಳಲ್ಲಿ ಎನ್‌ಡಿಎ 135 ರಿಂದ 150 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ. ಮಹಾಘಟಬಂಧನ್‌ಗೆ 88 ರಿಂದ 103 ಕ್ಷೇತ್ರಗಳಲ್ಲಿ ಗೆಲುವು ಸಿಗಲಿದೆ. ಇತರೆ 3 ರಿಂದ 7 ಸ್ಥಾನಗಳನ್ನು ಪಡೆಯಬಹುದು ಎಂದು ಅಂದಾಜಿಸಿದೆ.

ಇದನ್ನೂ ಓದಿ:-ದಿಲ್ಲಿ ಬೆನ್ನಲ್ಲೇ ಪಾಕ್‌ನಲ್ಲೂ ಬಾಂಬ್ ಸ್ಛೋಟ ; 12 ಮಂದಿ ಸಾವು

ಟೈಮ್ಸ್‌ ನೌ ಜೆವಿಸಿ ಎಕ್ಸಿಟ್‌ ಪೋಲ್‌ ಪ್ರಕಾರ, ಬಿಜೆಪಿ, ಜೆಡಿಯು, ಎಚ್‌ಎಎಂ, ಆರ್‌ಎಲ್‌ಎಂ ಮತ್ತು ಎಲ್‌ಜೆಪಿಆರ್‌ವಿ ಒಳಗೊಂಡ ಎನ್‌ಡಿಎ ಮೈತ್ರಿಕೂಟಕ್ಕೆ ಪೂರ್ಣ ಬಹುಮತ ಸಿಗಲಿದ್ದು, ಮತ್ತೊಮ್ಮೆ ಅಧಿಕಾರಕ್ಕೇರಲಿದೆ ಎಂಬ ಭವಿಷ್ಯ ನುಡಿದಿದೆ.

ಬಿಹಾರದಲ್ಲಿ ಬಿಜೆಪಿ, ಜೆಡಿಯು, ಎಚ್‌ಎಎಂ, ಆರ್‌ಎಲ್‌ಎಂ ಮತ್ತು ಎಲ್‌ಜೆಪಿಆರ್‌ವಿ ಒಳಗೊಂಡ ಎನ್‌ಡಿಎ ಮೈತ್ರಿಕೂಟ ಮತ್ತು ಆರ್‌ಜೆಡಿ, ಕಾಂಗ್ರೆಸ್, ಎಡ ಪಕ್ಷಗಳ ನಡುವೆ ರಾಜಕೀಯ ಪೈಪೋಟಿ ಜೋರಾಗಿದೆ. ಬಿಹಾರ ವಿಧಾನಸಭಾ ಚುನಾವಣೆ 2025 ಎರಡು ಹಂತಗಳಲ್ಲಿ ನಡೆದಿದೆ. ನವೆಂಬರ್ 6 ರಂದು ನಡೆದ ಮೊದಲ ಹಂತದಲ್ಲಿ 65.08% ಮತದಾನ ದಾಖಲಾಗಿದ್ದರೆ, ನವೆಂರ್ 11 ರಂದು ನಡೆದ ಎರಡನೇ ಹಂತದಲ್ಲಿ 67.14% ಮತದಾನ ದಾಖಲಾಗಿದೆ. ಈ ಮೂಲಕ ಬಿಹಾರದಲ್ಲಿ ದಾಖಲೆಯ ಮತದಾನ ನಡೆದಿದೆ. ಮತ ಎಣಿಕೆ ಕಾರ್ಯ ನವೆಂಬರ್ 14 ರಂದು ನಡೆಯಲಿದೆ.

ಬಿಹಾರದ 243 ವಿಧಾನಸಭಾ ಸ್ಥಾನಗಳಲ್ಲಿ ಎನ್‌ಡಿಎ ಮೈತ್ರಿಕೂಟದ ಸೀಟು ಹಂಚಿಕೆ ವ್ಯವಸ್ಥೆಯು ಜೆಡಿಯು ಮತ್ತು ಬಿಜೆಪಿ ಪಕ್ಷಗಳಿಗೆ ತಲಾ 101 ಸ್ಥಾನಗಳನ್ನು ನಿಗದಿಪಡಿಸಿದರೆ, ಎಲ್‌ಜೆಪಿ 29 ಸ್ಥಾನಗಳಲ್ಲಿ ಸ್ಪರ್ಧಿಸಿದೆ. ಎಚ್​​ಎಎಂ ಮತ್ತು ಆರ್​​ಎಲ್ಎಂ ತಲಾ 6 ಸ್ಥಾನಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿವೆ.

ಮಹಾ ಮೈತ್ರಿಕೂಟ (ಮಹಾಘಟಬಂಧನ್)ದೊಳಗೆ, ಆರ್​ಜೆಡಿ 143 ಸ್ಥಾನಗಳಲ್ಲಿ ಸ್ಪರ್ಧಿಸಿದರೆ, ಕಾಂಗ್ರೆಸ್ 61 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಸಿಪಿಐ 9 ಸ್ಥಾನಗಳಲ್ಲಿ ಸ್ಪರ್ಧಿಸಿದೆ. ಸಿಪಿಐ (ಎಂ) ನಾಲ್ಕು ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದರೆ, ಸಿಪಿಐ(ಎಂಎಲ್-ಎಲ್) 20 ಸ್ಥಾನಗಳಲ್ಲಿ ಸ್ಪರ್ಧಿಸಿದೆ. ವಿಐಪಿ 15 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ.

ಒಟ್ಟು 243 ಕ್ಷೇತ್ರಗಳಿಗೆ ಎರಡು ಹಂತದಲ್ಲಿ ಮತದಾನ ನಡೆದಿದೆ. ಯಾವುದೇ ಪಕ್ಷ ಅಥವಾ ಮೈತ್ರಿಕೂಟಕ್ಕೆ ಸರ್ಕಾರ ರಚಿಸಲು ಬಹುಮತವಾಗಿ 122 ಸ್ಥಾನಗಳು ಬೇಕಾಗಿದೆ.

ಆಂದೋಲನ ಡೆಸ್ಕ್

Recent Posts

ದಿಲ್ಲಿ ಗಣರಾಜ್ಯೋತ್ಸವ ಸ್ತಬ್ಧಚಿತ್ರ 2026 : ಕೃಷಿ ಮತ್ತು ತಂತ್ರಜ್ಞಾನದ ಸಮಾಗಮ

ಬೆಂಗಳೂರು : ಭಾರತವನ್ನು ಆತ್ಮನಿರ್ಭರ ರಾಷ್ಟ್ರವನ್ನಾಗಿಸುವ ದಿಶೆಯಲ್ಲಿ ಕರ್ನಾಟಕದಂತಹ ಸ್ವಾವಲಂಬಿ ರಾಜ್ಯಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಕೃಷಿಯಿಂದ ಕೈಗಾರಿಕೆವರೆಗೆ ಹಾಗೂ…

6 hours ago

ಮ.ಬೆಟ್ಟ | ಪಾದಯಾತ್ರಿ ಮೇಲೆ ದಾಳಿ ಮಾಡಿದ್ದ ಚಿರತೆ ಸೆರೆ ; ನಿಟ್ಟುಸಿರು ಬಿಟ್ಟ ಯಾತ್ರಾರ್ಥಿಗಳು

ಹನೂರು : ತಾಲೂಕಿನ ಮಲೆ ಮಹದೇಶ್ವರ ವನ್ಯಜೀವಿಧಾಮ ವ್ಯಾಪ್ತಿಯ ತಾಳುಬೆಟ್ಟದಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ದಾಳಿ…

7 hours ago

ಸರ್ಕಾರಿ ಹುದ್ದೆ ಆಕಾಂಕ್ಷಿಗಳಿಗೆ ಗುಡ್‌ನ್ಯೂಸ್‌ : 5 ವರ್ಷ ವಯೋಮಿತಿ ಸಡಿಲಿಕೆಗೆ ಸಚಿವ ಸಂಪುಟ ಒಪ್ಪಿಗೆ!

ಬೆಂಗಳೂರು : ರಾಜ್ಯದ ಎಲ್ಲಾ ರೀತಿಯ ಸಿವಿಲ್ ಹುದ್ದೆಗಳಿಗೆ 2027ರ ಡಿಸೆಂಬರ್ 31ರವರೆಗೆ ಹೊರಡಿಸುವ ನೇಮಕಾತಿ ಅಧಿಸೂಚನೆಗಳಿಗೆ ಸಂಬಂಧಿಸಿದಂತೆ ಎಲ್ಲಾ…

8 hours ago

ಇವಿ ವಾಹನ ಸವಾರರಿಗೆ ಸಿಹಿ ಸುದ್ದಿ : ಮಂಡ್ಯದಲ್ಲಿ ಮೊದಲ ಇವಿ ಫಾಸ್ಟ್‌ ಚಾರ್ಜಿಂಗ್‌ ಕೇಂದ್ರ ಆರಂಭ

ಮಂಡ್ಯ : ಸಾರ್ವಜನಿಕರಿಗೆ ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್)ವು ಜಿಲ್ಲೆಯಲ್ಲಿ…

9 hours ago

ಜಾ.ದಳ ಓಡಿಸಲು ಚಲುವರಾಯಸ್ವಾಮಿಗೆ ಸಾಧ್ಯವೇ? : ಜೆಡಿಎಸ್‌ ನಾಯಕ ಸುರೇಶ್‌ ಗೌಡ ಪ್ರಶ್ನೆ

ಮಂಡ್ಯ : ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿಯದ್ದು ಬರಿ ಡಬಲ್ ಸ್ಟ್ಯಾಂಡರ್ಡ್ ನಾಟಕವಾಗಿದೆ. ಜಾತ್ಯತೀತ ಜನತಾದಳವನ್ನು ಓಡಿಸುವುದಕ್ಕೆ ಅವರಿಗೆ ತಾಕತ್ತಿದೆಯೇ?.…

9 hours ago

ಜಮೀನು ಕಬಳಿಕೆ ಪ್ರಕರಣ | ಸಚಿವ ಚಲುವರಾಯಸ್ವಾಮಿಯೇ ನೇರ ಹೊಣೆ : ಸುರೇಶ್‌ಗೌಡ ಆರೋಪ

ನಾಗಮಂಗಲ ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಜಮೀನು ಕಬಳಿಕೆ ಪ್ರಕರಣ ಮಂಡ್ಯ : ನಾಗಮಂಗಲ ತಾಲ್ಲೂಕಿನ ನಕಲಿ ದಾಖಲೆ ಸೃಷ್ಟಿ…

9 hours ago