ದೇಶ- ವಿದೇಶ

ಬಿಹಾರ | ರಸ್ತೆ ಬದಿ ವಿವಿಪ್ಯಾಟ್‌ ಚೀಟಿಗಳ ರಾಶಿ ಪತ್ತೆ ; ಅಧಿಕಾರಿ ಅಮಾನತು

ಬಿಹಾರ : ನವೆಂಬರ್‌ 6ರಂದು ಬಿಹಾರದಲ್ಲಿ ಮೊದಲ ಹಂತದ ಚುನಾವಣೆ ನಡೆದಿದ್ದು, ಇದೇ 11 ರಂದು ಎರಡನೇ ಹಂತದ ಚುನಾವಣೆ ನಡೆಯಲಿದೆ. ಈ ನಡುವೆ ಮೊನ್ನೆ ನಡೆದ ಚುನಾವಣೆಯ ವಿವಿಪ್ಯಾಟ್‌ ಚೀಟಿಗಳ ರಾಶಿಗಳು ಬಿಹಾರದ ಸಮಸ್ತಿಪುರ ಜಿಲ್ಲೆಯ ರಸ್ತೆ ಬದಿಯಲ್ಲಿ ಪತ್ತೆಯಾಗಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಹಾಯಕ ಚುನಾವಣಾ ಅಧಿಕಾರಿಯನ್ನು ಶನಿವಾರ ಅಮಾನತುಗೊಳಿಸಿದಲಾಗಿದ್ದು, ಅವರ ವಿರುದ್ಧ ಪ್ರಕರಣ ದಾಖಲಾಗಿದೆ.

ಸಮಸ್ತಿಪುರ ಜಿಲ್ಲೆಯ ಸರಾಯ್‌ರಂಜನ್‌ ವಿಧಾನಸಭಾ ಕ್ಷೇತ್ರದ ಕಾಲೇಜು ಬಳಿ ರಸ್ತೆ ಬದಿಯಲ್ಲಿ ಚೀಟಿಗಳು ಬಿದ್ದಿರುವುದು ಕಂಡು ಬಂದಿದೆ. ಇದರ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದೆ. ಬಳಿಕ ಚುನಾವಣಾ ಆಯೋಗ ಅಧಿಕಾರಿ ವಿರುದ್ಧ ಕ್ರಮ ಕೈಗೊಂಡಿದೆ.

ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ಚುನಾವಣಾ ಆಯೋಗ, ವಿಡಿಯೊದಲ್ಲಿ ಹರಿದಾಡಿರುವ ವಿವಿಪ್ಯಾಟ್‌ ಅಣಕು ಮತದಾನದ ಸ್ಲಿಪ್‌ಗಳಾಗಿದ್ದು, ಮತದಾನ ಪ್ರಕ್ರಿಯೆಗೆ ಯಾವುದೇ ಧಕ್ಕೆ ಉಂಟಾಗಿಲ್ಲ. ಆದರೂ, ನಿರ್ಲಕ್ಷ್ಯ ವಹಿಸಿದ್ದಕ್ಕಾಗಿ ಸಂಬಂಧಪಟ್ಟ ಅಧಿಕಾರಿಯನ್ನು ಅಮಾನತುಗೊಳಿಸಲಾಗಿದೆ. ಪ್ರಕರಣದ ಬಗ್ಗೆ ತನಿಖೆ ಆರಂಭವಾಗಿದೆ ಎಂದು ಸ್ಪಷ್ಟಪಡಿಸಿದೆ.

 

ಆಂದೋಲನ ಡೆಸ್ಕ್

Recent Posts

ನೇಪಾಳದಲ್ಲಿ ಮತ್ತೆ ಪ್ರವಾಹ, ಭೂಕುಸಿತ

ಕಠ್ಮಂಡು: ನೇಪಾಳದಲ್ಲಿ ಮತ್ತೆ ಪ್ರವಾಹ, ಭೂಕುಸಿತದ ಆರ್ಭಟ ಮುಂದುವರಿದಿದ್ದು, ಕೇವಲ 8 ಸೆಕೆಂಡ್‌ಗಳಲ್ಲಿ ಪರ್ವತವೇ ಕುಸಿದು ಬಿದ್ದಿದೆ! ವಿವಿಧೆಡೆ ಸಂಭವಿಸಿದ…

9 hours ago

ಕಾಡುಹಂದಿ ದಾಳಿ: ರೈತನಿಗೆ ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪಳನಿಮೇಡ್ ಗ್ರಾಮದಲ್ಲಿ ರೈತನ ಮೇಲೆ ಕಾಡುಹಂದಿ ದಾಳಿ ಮಾಡಿದ್ದು,…

10 hours ago

ಶೀಘ್ರದಲ್ಲೇ ಅಕ್ರಮ ಸೈಟ್‌ಗಳ ಪಟ್ಟಿ ಬಿಡುಗಡೆ: ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಮುಡಾ 50:50 ಸೈಟ್‌ ವಿಚಾರದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಮಹತ್ವದ ಮಾಹಿತಿ ನೀಡಿದ್ದಾರೆ. ಶೀಘ್ರದಲ್ಲೇ ಅಕ್ರಮ ಸೈಟ್‌ಗಳ…

11 hours ago

ಮೈಸೂರು ದಸರಾ ಉದ್ಘಾಟನೆ ಆಹ್ವಾನ ತಿರಸ್ಕರಿಸಿಲ್ಲ: ಗವಿಸಿದ್ಧೇಶ್ವರ ಶ್ರೀಗಳಿಂದ ಸ್ಪಷ್ಟನೆ

ಕೊಪ್ಪಳ: ಮೈಸೂರು ದಸರಾ ಉದ್ಘಾಟನೆ ಕುರಿತು ಹರಿದಾಡುತ್ತಿದ್ದ ವದಂತಿಗಳಿಗೆ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿ ತೆರೆ ಎಳೆದಿದ್ದಾರೆ. ಮೈಸೂರು ದಸರಾ ಉದ್ಘಾಟನೆಗೆ…

13 hours ago

ಬ್ಯಾಂಕ್‌ ಗ್ರಾಹಕರಿಗೆ ಗುಡ್‌ನ್ಯೂಸ್‌: ಇಂದಿನಿಂದ 3 ದಿನ ಕರೆ ನೀಡಿದ್ದ ಬ್ಯಾಂಕ್‌ ಮುಷ್ಕರ ಮುಂದೂಡಿಕೆ

ನವದೆಹಲಿ: ಬ್ಯಾಂಕ್‌ ಗ್ರಾಹಕರಿಗೆ ಯಾವುದೇ ಆತಂಕ ಬೇಡ. ಇಂದಿನಿಂದ ನಡೆಯಬೇಕಿದ್ದ 3 ದಿನಗಳ ಬ್ಯಾಂಕ್‌ ಮುಷ್ಕರ ಮುಂದೂಡಿಕೆಯಾಗಿದೆ. ಬ್ಯಾಂಕ್‌ ಸೇವೆಗಳಲ್ಲಿ…

13 hours ago

ಎಸ್‌ಐಆರ್: ಜನಾಗ್ರಹಕ್ಕೆ ದೊರೆಯಲಿ ಮನ್ನಣೆ

ಪ್ರಜಾತಂತ್ರ ವ್ಯವಸ್ಥೆಯ ಭಾರತದಲ್ಲಿ ಪ್ರತಿ ಐದು ವರ್ಷಗಳಿಗೊಮ್ಮೆ ಸಂಸತ್ತು ಮತ್ತು ವಿಧಾನಸಭೆಗಳಿಗೆ ಮುಕ್ತ ಮತ್ತು ನಿಷ್ಪಕ್ಷಪಾತ ಚುನಾವಣೆಯನ್ನು ನಡೆಸುವ ಮೂಲಕ…

17 hours ago