ನವದೆಹಲಿ: ಬಿಹಾರ ಕುರುಕ್ಷೇತ್ರಕ್ಕೆ ಮುಹೂರ್ತ ಫಿಕ್ಸ್ ಆಗಿದ್ದು, ಎರಡು ಹಂತದಲ್ಲಿ ಚುನಾವಣೆ ನಡೆಯಲಿದೆ.
ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರು, ಬಿಹಾರದ 243 ವಿಧಾನಸಭಾ ಸ್ಥಾನಗಳಿಗೆ ಒಟ್ಟು ಎರಡು ಹಂತದಲ್ಲಿ ಮತದಾನ ನಡೆಯಲಿದ್ದು, ಮೊದಲ ಹಂತದ ಮತದಾನ ನವೆಂಬರ್.6ರಂದು ನಡೆದರೆ, ಎರಡನೇ ಹಂತದ ಮತದಾನ ನವೆಂಬರ್.11ರಂದು ನಡೆಯಲಿದೆ. ನವೆಂಬರ್.14ರಂದು ಫಲಿತಾಂಶ ಹೊರಬೀಳಲಿದೆ ಎಂದು ಹೇಳಿದರು.
ಬಿಹಾರ ವಿಧಾನಸಭೆ ಚುನಾವಣೆಗೆ ಆಯೋಗ ಸಂಪೂರ್ಣ ಸಜ್ಜಾಗಿದೆ ಎಂದು ಹೇಳಿದ ಅವರು, ಇಡೀ ಪ್ರಕ್ರಿಯೆ ಪಾರದರ್ಶಕವಾಗಿ ನಡೆಯುತ್ತಿದ್ದು, ಯಾವುದೇ ಬಾಹ್ಯ ಒತ್ತಡವಿಲ್ಲದೇ ಕಾರ್ಯನಿರ್ವಹಿಸುತ್ತಿರುವುದಾಗಿ ಸ್ಪಷ್ಟನೆ ನೀಡಿದ್ದಾರೆ.





