ದೇಶ- ವಿದೇಶ

ಬಿಹಾರ | ಸಂಪುಟ ಸೇರಿದ ನಿತೀಶ್‌ ಪುತ್ರ ನಿಶಾಂತ್‌ ; ಸಚಿವರಾಗಿ 32 ಮಂದಿ ಪ್ರಮಾಣ

ಪಾಟ್ನಾ : ಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ನೇತೃತ್ವದ ಬಿಜೆಪಿ-ಎನ್‌ಡಿಎ ಸರ್ಕಾರವು ನೂತನ ಸಂಪುಟ ವಿಸ್ತರಿಸಿದ್ದು, 31 ಎನ್‌ಡಿಎ ನಾಯಕರು ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ.

ಮಾಜಿ ಸಿಎಂ ನಿತೀಶ್‌ ಕುಮಾರ್‌ ಪುತ್ರ ನಿಶಾಂತ್ ಕುಮಾರ್, ಬಿಜೆಪಿ, ಜೆಡಿಯು, ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ಅವರ ಲೋಕ ಜನಶಕ್ತಿ ಪಕ್ಷ (ರಾಮ್ ವಿಲಾಸ್) ಮತ್ತು ಕೇಂದ್ರ ಸಚಿವ ಜಿತನ್ ರಾಮ್ ಮಾಂಝಿ ನೇತೃತ್ವದ ಹಿಂದೂಸ್ತಾನಿ ಅವಾಮ್ ಮೋರ್ಚಾ (ಜಾತ್ಯತೀತ)ದ 31 ನಾಯಕರೊಂದಿಗೆ ಇಂದು ಸಚಿವರಾಗಿ ಪದಗ್ರಹಣ ಮಾಡಿದ್ದಾರೆ. ರಾಜ್ಯಪಾಲ ಲೆಫ್ಟಿನೆಂಟ್ ಜನರಲ್ (ನಿವೃತ್ತ) ಸೈಯದ್ ಅತಾ ಹಸ್ನೈನ್ ಅವರು ಪ್ರಮಾಣ ವಚನ ಬೋಧಿಸಿದ್ದಾರೆ.

ಈ ಐತಿಹಾಸಿಕ ಕ್ಷಣಕ್ಕೆ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ನಿತೀಶ್ ಕುಮಾರ್ ಸಾಕ್ಷಿಯಾದರು. ಎನ್‌ಡಿಎ ಮೈತ್ರಿಕೂಟದ ಪ್ರಮುಖ ನಾಯಕರೆಲ್ಲರೂ ಒಂದೇ ವೇದಿಕೆಯಲ್ಲಿ ಕಾಣಿಸಿಕೊಳ್ಳುವ ಮೂಲಕ ಮುಂಬರುವ ಚುನಾವಣೆಗೆ ತಮ್ಮ ಒಗ್ಗಟ್ಟಿನ ಸಂದೇಶ ರವಾನಿಸಿದರು. ನೂತನ ಸಂಪುಟದಲ್ಲಿ ಅನುಭವ ಮತ್ತು ಯುವ ಉತ್ಸಾಹಕ್ಕೆ ಆದ್ಯತೆ ನೀಡಲಾಗಿದೆ. ನಿಶಾಂತ್ ಕುಮಾರ್ ಸಂಪುಟ ಸೇರಿರುವುದು ಬಿಹಾರ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ. ಜಿ ಉಪಮುಖ್ಯಮಂತ್ರಿ ವಿಜಯ್ ಕುಮಾರ್ ಸಿನ್ಹಾ, ಅನುಭವಿಗಳಾದ ಶ್ರಾವಣ್ ಕುಮಾರ್ ಮತ್ತು ಅಶೋಕ್ ಚೌಧರಿ ಅವರು ಮತ್ತೆ ಸಂಪುಟ ಸೇರಿದ್ದಾರೆ. ಎನ್‌ಡಿಎ ಮೈತ್ರಿಕೂಟದ ಐದೂ ಪಕ್ಷಗಳಾದ ಬಿಜೆಪಿ, ಜೆಡಿ(ಯು), ಎಲ್‌ಜೆಪಿ (ರಾಮ್ ವಿಲಾಸ್), ಹ್ಯಾಮ್ ಮತ್ತು ಆರ್‌ಎಲ್‌ಎಂ ನಾಯಕರಿಗೆ ಸಂಪುಟದಲ್ಲಿ ಸೂಕ್ತ ಸ್ಥಾನಮಾನ ನೀಡಲಾಗಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ವಿದ್ಯುತ್ ಕಡಿತ ಮುಂಚಿತವಾಗಿ ಪ್ರಕಟಿಸಿ

ಮಳೆ ಸರಿಯಾಗಿ ಆಗದೆ ಜಲವಿದ್ಯುತ್ ಉತ್ಪಾದನೆ ಕಡಿಮೆಯಾಗಿ ವಿದ್ಯುತ್ ಅಭಾವ ಎದುರಾಗಿರುವುದು ನಿಜ. ಆದರೆ ಯಾವುದೇ ಮುನ್ಸೂಚನೆ ಇಲ್ಲದೆ ಇದ್ದಕ್ಕಿದ್ದಂತೆ…

1 hour ago

ಓದುಗರ ಪತ್ರ: ಖುಷಿ ಕೊಡುವ ಮಾತುಗಳಷ್ಟೇ ಸ್ಪಂದನೆಯೂ ಮುಖ್ಯ

ಮೈಸೂರು ಮಹಾ ನಗರಪಾಲಿಕೆ ವತಿಯಿಂದ ಕಲಾಮಂದಿರದಲ್ಲಿ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ, ಮೈಸೂರು ಸ್ವಚ್ಛ ನಗರಿಯಾಗಲು ಪೌರ ಕಾರ್ಮಿಕರ…

1 hour ago

ಓದುಗರ ಪತ್ರ: ಬ್ಯಾಂಕ್ ಒಕ್ಕೂಟಗಳಿಗೆ ಜವಾಬ್ದಾರಿ ಇರಲಿ

ಸೆಪ್ಟೆಂಬರ್ ಕೊನೆಯಲ್ಲಿ ಆರ್ಥಿಕ ವರ್ಷದ ಅರ್ಧವಾರ್ಷಿಕ ಲೆಕ್ಕಪತ್ರ ಮುಕ್ತಾಯಗೊಳಿಸುವ ಅತ್ಯಂತ ನಿರ್ಣಾಯಕ ಸಮಯದಲ್ಲಿ ಬ್ಯಾಂಕ್ ಒಕ್ಕೂಟಗಳು (ಯುಎಫ್ಬಿ) ಮೂರು ದಿನಗಳ…

1 hour ago

ಪ್ರಶಸ್ತಿ ಪ್ರದಾನದಿಂದ ಚಿತ್ರೋತ್ಸವವರೆಗೆ ಹೊಸ ಪಯಣ

ವೈಡ್‌ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ದೆಹಲಿ ಸಹಜ ವಿಳಾಸವಾಗಿತ್ತು. ದೇಶದ…

1 hour ago

ಜಂಬೂಸವಾರಿಯಲ್ಲಿ ಸ್ತಬ್ಧ ಚಿತ್ರಗಳ ‘ತ್ರಿಸಂಗಮ’

ಕೆ.ಬಿ.ರಮೇಶನಾಯಕ ಕರ್ನಾಟಕ ರಾಜ್ಯದ ಗತವೈಭವ, ದೇಶದ ಅಖಂಡತೆ ಬಿಂಬಿಸುವ ಮಾದರಿಗಳ ಸವಾರಿ ೩೧ ಜಿಲ್ಲೆಗಳ ಬದಲಿಗೆ ಆಯ್ದ ೧೫ ಜಿಲ್ಲೆಗಳ…

1 hour ago