ದೇಶ- ವಿದೇಶ

Bihar Result | ಜೈಲಿನಲ್ಲಿದ್ದುಕೊಂಡೇ ಭಾರೀ ಮತಗಳಿಂದ ಗೆದ್ದ ಬಿಜೆಪಿ ಬೆಂಬಲಿತ ಅಭ್ಯರ್ಥಿ

ಪಾಟ್ನಾ : ಜೈಲಿನಲ್ಲಿರುವ ಜೆಡಿಯು ಅಭ್ಯರ್ಥಿ ಅನಂತ್ ಕುಮಾರ್‌ ಸಿಂಗ್ 28,206 ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಮೊಕಾಮಾ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಅವರು 91,416 ಮತಗಳನ್ನು ಪಡೆದರೆ ಆರ್‌ಜೆಡಿಯ ವೀಣಾ ದೇವಿ ಅವರು 63,210 ಮತಗಳನ್ನು ಪಡೆದಿದ್ದಾರೆ.

ಜನ್ ಸುರಾಜ್ ಪಾರ್ಟಿ ಬೆಂಬಲಿಗನನ್ನು ಕೊಲೆಗೈದ ಪ್ರಕರಣದಲ್ಲಿ ಅನಂತ್ ಕುಮಾರ್‌ ಸಿಂಗ್ ಈಗ ನ್ಯಾಯಾಂಗ ಬಂಧನದಲ್ಲಿದ್ದಾರೆ. 2005 ರಲ್ಲಿ ಮೊದಲ ಚುನಾವಣೆ ಗೆದ್ದ ಬಳಿಕ ಇಲ್ಲಿಯವರೆಗೆ ಐದು ಬಾರಿ ಮೊಕಾಮಾದಿಂದ ಆಯ್ಕೆ ಆಗುತ್ತಲೇ ಬಂದಿದ್ದಾರೆ. 2010 ರಲ್ಲಿ ಅವರು ಜೆಡಿಯು ಅಭ್ಯರ್ಥಿಯಾಗಿ ಸ್ಪರ್ಧಿಸಿದರೆ 2015 ರಲ್ಲಿ ಜೆಡಿಯು ತೊರೆದು ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದದ್ದರು. 2020 ರ ಚುನಾವಣೆಗೆ ಮೊದಲು ಅವರು ಆರ್‌ಜೆಡಿ ಸೇರಿದ್ದರು.

ಇದನ್ನು ಓದಿ: ಭಾರಿ ಜಯದತ್ತ ಎನ್‌ಡಿಎ ; ಬಿಜೆಪಿ ಅತಿ ದೊಡ್ಡ ಪಕ್ಷ

28 ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿದ್ದರೂ, ಶಸ್ತ್ರಾಸ್ತ್ರ ಪ್ರಕರಣದಲ್ಲಿ ಶಿಕ್ಷೆಗೊಳಗಾದ ನಂತರ ಸಿಂಗ್ 2022 ರಲ್ಲಿ ತಮ್ಮ ವಿಧಾನಸಭಾ ಸದಸ್ಯತ್ವವನ್ನು ಕಳೆದುಕೊಂಡಿದ್ದರು. ನಂತರ ನಡೆದ ಉಪಚುನಾವಣೆಯಲ್ಲಿ ಅವರ ಪತ್ನಿ ನೀಲಂ ದೇವಿ ಸ್ಪರ್ಧಿಸಿ ಜಯಗಳಿಸಿದ್ದರು. ನವೆಂಬರ್ 2 ರಂದು ಜನ ಸುರಾಜ್‌ ಅಭ್ಯರ್ಥಿ ಪ್ರಿಯದರ್ಶಿ ಪಿಯೂಷ್ ಪರ ಪ್ರಚಾರ ನಡೆಸುತ್ತಿದ್ದ ದರೋಡೆಕೋರ, ರಾಜಕಾರಣಿ ದುಲಾರ್ ಸಿಂಗ್ ಯಾದವ್ ಹತ್ಯೆ ನಡೆದಿತ್ತು. ಈ ಪ್ರಕರಣದಲ್ಲಿ ಪೊಲೀಸರು ಅನಂತ್ ಕುಮಾರ್‌ ಸಿಂಗ್ ಅವರನ್ನು ಬಂಧಿಸಿದ್ದು ಕೋರ್ಟ್‌ ನ್ಯಾಯಾಂಗ ಬಂಧನ ವಿಧಿಸಿದೆ.

ಆಂದೋಲನ ಡೆಸ್ಕ್

Recent Posts

ನಿಲ್ಲದ ಚಿನ್ನದ ನಾಗಾಲೋಟ : 1.61ಲಕ್ಷ ರೂ.ತಲುಪಿದ ಬಂಗಾರ

1 ಕೆ.ಜಿ.ಬೆಳ್ಳಿಗೆ 3.30 ಲಕ್ಷ ರೂಪಾಯಿ ಹೈದರಾಬಾದ್ : ಚಿನ್ನ ಮತ್ತು ಬೆಳ್ಳಿ ಬೆಲೆಗಳ ಏರಿಕೆ ನಿಲ್ಲುತ್ತಿಲ್ಲ. ಬುಧವಾರ ಹಳದಿ…

7 hours ago

ಯುವಕನ ಕೊಲೆ ಪ್ರಕರಣ : ಮೂವರು ಆರೋಪಿಗಳ ಬಂಧನ

ಮೈಸೂರು : ಸೋಮವಾರ ತಡರಾತ್ರಿ ಯುವಕನೋರ್ವನನ್ನು ಐವರ ಗುಂಪು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಉದಯಗಿರಿ…

7 hours ago

ಪಾದಯಾತ್ರೆ ವೇಳೆ ಚಿರತೆ ದಾಳಿಗೆ ವ್ಯಕ್ತಿ ಬಲಿ ಪ್ರಕರಣ : ಚಿರತೆ ಸೆರೆಗೆ ಅರಣ್ಯ ಇಲಾಖೆ ಕ್ರಮ

ಹನೂರು : ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ಚಿರತೆ ದಾಳಿ ಮಾಡಿದ ಪರಿಣಾಮ ವ್ಯಕ್ತಿ ಮೃತಪಟ್ಟಿರುವುದರಿಂದ ಚಿರತೆ…

8 hours ago

ಮುಡಾ ನಿವೇಶನ ಹಂಚಿಕೆ ಅಕ್ರಮ ಪ್ರಕರಣ : ಜಿ.ಟಿ.ದಿನೇಶ್‌ಗೆ ಹೈಕೋರ್ಟ್ ಶಾಕ್

ಇಡಿ ಬಂಧನದಿಂದ ಬಿಡುಗಡೆ ಕೋರಿ ಮಾಜಿ ಆಯುಕ್ತ ಸಲ್ಲಿಸಿದ್ದ ಅರ್ಜಿ ತಿರಸ್ಕಾರ ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ…

8 hours ago

ಸಮೀಕ್ಷೆ | ಫೆ.10ರೊಳಗೆ ಸರ್ಕಾರಕ್ಕೆ ವರದಿ ಸಲ್ಲಿಕೆ

ಬೆಂಗಳೂರು : ಜನವರಿ ಅಂತ್ಯ ಅಥವಾ ಫೆಬ್ರವರಿ 10ರೊಳಗೆ ಮಧುಸೂದನ್ ನಾಯಕ್ ಅವರ ನೇತೃತ್ವದ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ…

9 hours ago

ಅಕ್ರಮ ರೆಸಾರ್ಟ್‌ ವಿರುದ್ದದ ಅನಿರ್ದಿಷ್ಟ ಪ್ರತಿಭಟನೆ ಅಂತ್ಯ

ಹೆಚ್.ಡಿ.ಕೋಟೆ : ತಾಲ್ಲೂಕಿನ ಕಬಿನಿ ಹಿನ್ನೀರು ಪ್ರದೇಶ, ನಾಗರಹೊಳೆ-ಬಂಡೀಪುರ ಅರಣ್ಯ ವ್ಯಾಪ್ತಿ ಹಾಗೂ ಪರಿಸರ ಸಂವೇದಿ ವಲಯಗಳಲ್ಲಿ ನಿಯಮಗಳನ್ನು ಉಲ್ಲಂಘಿಸಿ…

9 hours ago