narendra modi
ಬೀಜಿಂಗ್: ಪರಸ್ಪರ ನಂಬಿಕೆ, ಗೌರವ ಮತ್ತು ಸೂಕ್ಷ್ಮತೆಯ ಆಧಾರದ ಮೇಲೆ ಭಾರತ-ಚೀನಾ ಸಂಬಂಧಗಳನ್ನು ಮುಂದಕ್ಕೆ ಕೊಂಡೊಯ್ಯಲು ಬದ್ಧರಾಗಿರುವುದಾಗಿ ಪ್ರಧಾನಿ ನರೇಂದ್ರ ಮೋದಿ ಹೇಳಿದರು.
ಚೀನಾದ ಟಯಾಂಜಿನ್‌ನಲ್ಲಿ ನಡೆಯುತ್ತಿರುವ ಶಾಂಘೈ ಸಹಕಾರ ಸಂಸ್ಥೆ ಶೃಂಗಸಭೆಯಲ್ಲಿ ಮೋದಿ ಹಾಗೂ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ದ್ವಿಪಕ್ಷೀಯ ಮಾತುಕತೆ ನಡೆಸಿದರು.
ಕಳೆದ ವರ್ಷ ರಷ್ಯಾದಲ್ಲಿ ನಡೆದ ಬ್ರಿಕ್ಸ್ ಶೃಂಗಸಭೆಯಲ್ಲಿ ಪ್ರಸ್ತಾಪಿಸಿದ ನರೇಂದ್ರ ಮೋದಿ ಅವರು, ಕಜಾನ್‌ನಲ್ಲಿ ನಾವು ಬಹಳ ಫಲಪ್ರದ ಚರ್ಚೆಗಳನ್ನು ನಡೆಸಿದ್ದೇವೆ. ಇದು ನಮ್ಮ ಸಂಬಂಧಗಳಿಗೆ ಸಕಾರಾತ್ಮಕ ನಿರ್ದೇಶನವನ್ನು ನೀಡಿತು. ಗಡಿಯಲ್ಲಿ ಸೇನೆಯನ್ನು ಪರಸ್ಪರ ಹಿಂದಕ್ಕೆ ಪಡೆದ ನಂತರ ಶಾಂತಿ ಮತ್ತು ಸ್ಥಿರತೆಯ ವಾತಾವರಣ ನಿರ್ಮಾಣವಾಗಿದೆ ಎಂದು ಹೇಳಿದರು.
ಭಾರತ ಹಾಗೂ ಚೀನಾದಲ್ಲಿರುವ 2.8 ಬಿಲಿಯನ್ ಜನರ ಯೋಗಕ್ಷೇಮವು ನಮ್ಮ ದೇಶಗಳ ನಡುವಿನ ಸಹಕಾರವನ್ನು ಅವಲಂಬಿಸಿದೆ. ಪರಸ್ಪರ ಗೌರವ, ವಿಶ್ವಾಸ ಮತ್ತು ಸೂಕ್ಷ್ಮತೆಯ ಆಧಾರದ ಮೇಲೆ ನಮ್ಮ ಸಂಬಂಧವನ್ನು ಮುಂದಕ್ಕೆ ಕೊಂಡೊಯ್ಯಲು ಭಾರತ ಬದ್ಧವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ಗೆ ಹೇಳಿದರು.
ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಮಾತನಾಡಿ, ಜಗತ್ತು ಪರಿವರ್ತನೆಯತ್ತ ಸಾಗುತ್ತಿದೆ. ಚೀನಾ ಮತ್ತು ಭಾರತ ಎರಡು ಅತ್ಯಂತ ನಾಗರಿಕ ರಾಷ್ಟ್ರಗಳಾಗಿವೆ. ನಾವು ವಿಶ್ವದಲ್ಲೇ ಅತಿಹೆಚ್ಚು ಜನಸಂಖ್ಯೆ ಹೊಂದಿರುವ ದೇಶಗಳಾಗಿದ್ದೇವೆ. ಸ್ನೇಹಿತರಾಗಿ ಒಳ್ಳೆಯ ನೆರೆಹೊರೆಯವರಾಗಿ ಇರಲ ಡ್ರ್ಯಾಗನ್ ಮತ್ತು ಆನೆ ಒಟ್ಟಿಗೆ ಬರುವುದು ಅತ್ಯಗತ್ಯ ಎಂದು ತಿಳಿಸಿದರು.
ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…
ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…