ನಾಗ್ಪುರ: ಕೋಲ್ಕತ್ತಾಗೆ ಹೊರಟಿದ್ದ ಇಂಡಿಗೋ ವಿಮಾನಕ್ಕೆ ಹಕ್ಕಿ ಡಿಕ್ಕಿಯಾಗಿದ್ದು, ಭಾರೀ ಅನಾಹುತವೊಂದು ತಪ್ಪಿದಂತಾಗಿದೆ.
160-165 ಪ್ರಯಾಣಿಕರಿದ್ದ 6E 812 ಇಂಡಿಗೋ ವಿಮಾನ ನಾಗ್ಪುರದಿಂದ ಕೋಲ್ಕತ್ತಾಗೆ ಹೊರಟಿತ್ತು. ವಿಮಾನ ಟೇಕ್ ಆಫ್ ಆದ ಕೆಲ ಸಮಯದಲ್ಲೇ ಹಕ್ಕಿಯೊಂದು ಡಿಕ್ಕಿ ಹೊಡೆದಿದೆ. ಮುಂಜಾಗ್ರತಾ ಕ್ರಮವಾಗಿ ಪೈಲಟ್ ವಿಮಾನವನ್ನು ನಾಗ್ಪುರಕ್ಕೆ ವಾಪಸ್ ತಂದು ಸುರಕ್ಷಿತವಾಗಿ ಲ್ಯಾಂಡ್ ಮಾಡಿದ್ದಾರೆ. ಎಲ್ಲಾ ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಸಲಾಗಿದೆ.
ಅಲ್ಲದೇ ವಿಮಾನ ಹಾರಾಟವನ್ನು ರದ್ದುಗೊಳಿಸಲಾಗಿದ್ದು, ಪ್ರಯಾಣಿಕರಿಗೆ ಬೇರೆ ವ್ಯವಸ್ಥೆ ಮಾಡಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.





