Lawrence Bishnoi
ಹಾಪುರ: ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್‌ನ ಶಾರ್ಪ್ ಶೂಟರ್ ನವೀನ್ ಕುಮಾರ್ ಎನ್‌ಕೌಂಟರ್‌ಗೆ ಬಲಿಯಾಗಿದ್ದಾನೆ.
ಉತ್ತರ ಪ್ರದೇಶದ ಕೊತ್ವಾಲಿ ಪ್ರದೇಶದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಶಾರ್ಪ್ ಶೂಟರ್ ನವೀನ್ ಕುಮಾರ್‌ನನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಉತ್ತರ ಪ್ರದೇಶದ ವಿಶೇಷ ಕಾರ್ಯಪಡೆ ಹಾಗೂ ದೆಹಲಿ ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ಎನ್‌ಕೌಂಟರ್ ನಡೆದಿದೆ. ಶಾರ್ಪ್ ಶೂಟರ್ ನವೀನ್ ವಿರುದ್ಧ ದೆಹಲಿ, ಮಹಾರಾಷ್ಟ್ರ ಹಾಗೂ ಉತ್ತರ ಪ್ರದೇಶದಲ್ಲಿ ಸುಮಾರು 20ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದವು.
ಕೊತ್ವಾಲಿ ಪ್ರದೇಶದಲ್ಲಿ ನವೀನ್ ಹಾಗೂ ಆತನ ಗ್ಯಾಂಗ್ ಇರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು. ಈ ವೇಳೆ ನವೀನ್ ಗ್ಯಾಂಗ್ ಪೊಲೀಸರ ಮೇಲೆ ದಾಳಿ ನಡೆಸಿದೆ. ಪೊಲೀಸರು ಪ್ರತಿ ದಾಳಿ ನಡೆಸಿದ್ದು, ಗುಂಡೇಟಿನಿಂದ ಗಾಯಗೊಂಡಿದ್ದ ನವೀನ್‌ನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವೇಳೆ ಮಾರ್ಗಮಧ್ಯೆಯೇ ಆತ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ.
ಮಂಡ್ಯ: ವಿಸಿ ಫಾರ್ಮ್‌ನ ಕೃಷಿ ಮೇಳದ ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಶ್ರೀಗಳ ಸಮ್ಮುಖದಲ್ಲೇ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಬಹಿರಂಗವಾಗಿ ಕ್ಷಮೆಯಾಚಿಸಿದ್ದಾರೆ.…
ಬೆಂಗಳೂರು: ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಸರ್ಕಾರದ ವೈಫಲ್ಯಗಳ ವಿರುದ್ಧ ಕಾಂಗ್ರೆಸ್ ಶಾಸಕರೇ ಅವಿಶ್ವಾಸ ನಿರ್ಣಯ ಮಂಡಿಸಿದರೂ ಅಚ್ಚರಿ ಇಲ್ಲ ಎಂದು…
ಹುಣಸೂರು: ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಗುರುಪುರದ ಬಳಿಯ ಜಮೀನೊಂದರಲ್ಲಿ ಓಡಾಡುತ್ತಿದ್ದ ಒಂದು ವರ್ಷದ ಹುಲಿ ಮರಿಯನ್ನು ಅರಣ್ಯಾಧಿಕಾರಿಗಳು ಸೆರೆ…
ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಹಾಗೂ ಯಂಗ್ ಇಂಡಿಯಾ ಸಂಸ್ಥೆಗಳಿಗೆ ದೇಣಿಗೆ ನೀಡಿದ್ದಕ್ಕೆ ಇಡಿ ಸಮನ್ಸ್ ನೀಡಿದೆ. ಆ ಮೂಲಕ ನಮಗೆ…
ಚಿಕ್ಕಮಗಳೂರು: ಜಿಲ್ಲೆಯ ಕಡೂರು ತಾಲ್ಲೂಕಿನ ಸಖರಾಯಪಟ್ಟಣದಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಕೆ.ಜೆ.ಜಾರ್ಜ್ ಪ್ರತಿಕ್ರಿಯೆ ನೀಡಿದ್ದಾರೆ. ಕೊಲೆಯಾದ…
ಚಿಕ್ಕಮಗಳೂರು: ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದು ಕಾಂಗ್ರೆಸ್ ಕಾರ್ಯಕರ್ತ ಮೃತಪಟ್ಟ ಘಟನೆ ಕಡೂರು ತಾಲ್ಲೂಕಿನ ಸಖರಾಪಟ್ಟಣದ ಸಮೀಪದ ಕಲ್ಮುರುಡೇಶ್ವರ…