ಚೆನ್ನೈ: ಮುಂಬರುವ ವಿಧಾನಸಭಾ ಚುನಾವಣೆಗಾಗಿ ಬಿಜೆಪಿ ಮತ್ತು ಎಐಎಡಿಎಂಕೆ ಪಕ್ಷಗಳು ಮೈತ್ರಿ ಮಾಡಿಕೊಳ್ಳು ಸಾಧ್ಯತೆ ಇದೆ. ಹಾಗಾಗಿ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕೆ.ಅಣ್ಣಾಮಲೈ ರಾಜೀನಾಮೆ ನೀಡುವ ಸಾಧ್ಯತೆಗಳಿದ್ದು, ಆ ಸ್ಥಾನಕ್ಕೆ ಬೇರೆಯವರನ್ನು ಅಧ್ಯಕ್ಷರನ್ನಾಗಿ ಬಿಜೆಪಿ ನೇಮಿಸಲಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.
ತಮಿಳುನಾಡಿನ 2023ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತು ಎಐಎಡಿಎಂಕೆ ವಿಭಜನೆಯಾಗಲು ಅಣ್ಣಾಮಲೈ ಅವರೇ ಕಾರಣವೆಂದು ಹೇಳಲಾಗಿತ್ತು. ಆದರೆ ಇದೀಗ ಪಕ್ಷಗಳ ನಡುವಿನ ಮೈತ್ರಿ ಮಾತುಕತೆಗಳು ಹೆಚ್ಚಾದ ಹಿನ್ನೆಲೆ ಅಣ್ಣಾಮಲೈ ಅವರು ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಇನ್ನೆರಡು ವಾರಗಳಲ್ಲಿ ರಾಜೀನಾಮೆ ನೀಡುವ ಸಾಧ್ಯತೆಗಳಿವೆ ಎಂಬ ಮಾಹಿತಿ ಲಭ್ಯವಾಗಿದೆ.
ಇನ್ನು 2026ಕ್ಕೆ ವಿಧಾನಸಭೆ ಚುನಾವಣೆ ನಡೆಯಲಿದ್ದು, ಈ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಜೆಪಿ-ಎಐಎಡಿಎಂಕೆ ಮೈತ್ರಿಕೂಟ ರಚನೆಯಾಗುವ ಬಗ್ಗೆ ಚರ್ಚೆ ನಡೆಯುತ್ತಿದೆ. ಅಲ್ಲದೇ ಈ ರಾಜ್ಯದಲ್ಲಿ ಬಿಜೆಪಿ ತನ್ನ ಹೆಜ್ಜೆಗುರುತು ಹೆಚ್ಚಿಸಲು ಪ್ರಯತ್ನಿಸುತ್ತಿರುವ ಜಾತಿ ಸಮೀಕರಣಗಳನ್ನು ಪರಿಗಣಿಸಿ ಈ ತೀರ್ಮಾನ ತೆಗೆದುಕೊಳ್ಳಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.





