ದೇಶ- ವಿದೇಶ

ಸಂಸತ್‌ನಲ್ಲಿ ರಾಹುಲ್‌ ಗಾಂಧಿ ಭಾಷಣಕ್ಕೆ ಕತ್ತರಿ, ವಿವಾದಾತ್ಮಕ ಮಾತುಗಳನ್ನು ಕಲಾಪದಿಂದ ತೆಗೆಯಲು ಸ್ಪೀಕರ್‌ ಸೂಚನೆ

ನವದೆಹಲಿ: ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಬಿಜೆಪಿ ಹಾಗೂ ಆರ್‌ಎಸ್‌ಎಸ್‌ ಬಗ್ಗೆ ವಿವಾದಾತ್ಮಕ ಮಾತುಗಳನ್ನಾಡಿರುವ ಕಾರಣ ಅವರ ಭಾಷಣವನ್ನು ಕಲಾಪದಿಂದ ತೆಗೆಯುವಂತೆ ಸ್ಪೀಕರ್‌ ಓಂ ಬಿರ್ಲಾ ಸೂಚನೆ ನೀಡಿದ್ದಾರೆ.

ಲೋಕಸಭೆ ಸಚಿವಾಲಯದ ಪತ್ರಿಕಾ ಮತ್ತು ಸಾರ್ವಜನಿಕ ಸಂಪರ್ಕ ಶಾಖೆಯ ಜಂಟಿ ನಿರ್ದೇಶಕ ಬೈಕುಂಠನಾಥ ಮಹಾಪಾತ್ರ ಅವರು ಪತ್ರವೊಂದನ್ನು ಹೊರಡಿಸಿ ಈ ಕುರಿತು ಮಾಹಿತಿ ನೀಡಿದ್ದಾರೆ.

ರಾಯ್‌ ಬರೇಲಿ ಸಂಸದ ರಾಹುಲ್‌ ಗಾಂಧಿ ಲೋಕಸಭೆಯಲ್ಲಿ ತಮ್ಮ ಅಭಿಪ್ರಾಯಗಳನ್ನು ಮಂಡಿಸಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಭಾಷಣದ ಮೇಲಿನ ಚರ್ಚೆಯಲ್ಲಿ ಅವರು ಭಾಗವಹಿಸಿದ್ದರು. ಈ ವೇಳೆ ಅವರು ಇಂತಹ ಹಲವು ವಿಷಯಗಳನ್ನು ಹೇಳಿದ್ದು ಆಡಳಿತ ಪಕ್ಷ ಅದರಲ್ಲೂ ಬಿಜೆಪಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.

ಎರಡು ಬಾರಿ ಪ್ರಧಾನಿ ಮೋದಿ ತಮ್ಮ ಆಸನದಿಂದ ಎದ್ದು ಉತ್ತರಿಸಬೇಕಾಯಿತು. ಸುಮಾರು ಎರಡೂವರೆ ಗಂಟೆಗಳ ಕಾಲ ನಡೆದ ರಾಹುಲ್‌ ಭಾಷಣಕ್ಕೂ ಎನ್‌ಡಿಎ ನಾಯಕರು ಆಕ್ಷೇಪ ವ್ಯಕ್ತಪಡಿಸಿದರು. ಸ್ಪೀಕರ್‌ ಓಂ ಬಿರ್ಲಾ ಅವರೇ ಎಚ್ಚರಿಕೆಯಿಂದ ಮಾತನಾಡುವಂತೆ ಒತ್ತಾಯಿಸಿದ್ದರು. ಹಿಂದೂಗಳ ಕುರಿತ ಅವರ ಹೇಳಿಕೆ ಸೇರಿದಂತೆ ಭಾಷಣದ ಕೆಲವು ಭಾಗಗಳನ್ನು ಈಗ ಸದನದ ಕಲಾಪದಿಂದ ತೆಗೆದುಹಾಕಲಾಗಿದೆ. ರಾಹುಲ್‌ ಗಾಂಧಿ ಅವರ ವಿವಾದಾತ್ಮಕ ಭಾಷಣದ ಕೆಲವು ಸಾಲುಗಳಿಗೆ ಆಕ್ಷೇಪ ವ್ಯಕ್ತಪಡಿಸಿರುವ ಬಿಜೆಪಿ ನಾಯಕರು ಅವರ ಕ್ಷಮೆಯಾಚನೆಗೆ ಒತ್ತಾಯಿಸಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್‌ ಶಾ, ಜೆ.ಪಿ.ನಡ್ಡಾ, ಅಶ್ವಿನಿ ವೈಷ್ಣವ್‌ ಮತ್ತು ಎನ್‌ಡಿಎ ನಾಯಕ ಚಿರಾಗ್‌ ಪಾಸ್ವಾನ್‌ ಸೇರಿದಂತೆ ಆಡಳಿತ ಪಕ್ಷದ ಅನೇಕ ಸಂಸದರು ರಾಹುಲ್‌ ಕ್ಷಮೆಯಾಚಿಸುವಂತೆ ಕೇಳಿಕೊಂಡರು. ರಾಹುಲ್‌ ಭಾಷಣದ ವೇಳೆ ಹಲವು ಬಾರಿ ರಾಜನಾಥ್‌ ಸಿಂಗ್‌, ಪ್ರಧಾನಿ ಮೋದಿ, ಕಿರಣ್‌ ರಿಜಿಜು ತಮ್ಮ ಆಸನಗಳಿಂದ ಎದ್ದು ರಾಹುಲ್‌ ಮಾತಿಗೆ ಆಕ್ಷೇಪ ವ್ಯಕ್ತಪಡಿಸಿದರು.

ಆಡಳಿತ ಪಕ್ಷದ ನಾಯಕರು ಜನರನ್ನು ಕೋಮುವಾದದ ಆಧಾರದ ಮೇಲೆ ವಿಭಜಿಸುತ್ತಿದ್ದಾರೆ ಎಂದು ಕಾಂಗ್ರೆಸ್‌ ನಾಯಕ ಆರೋಪಿಸಿದ್ದರು. ಮೋದಿ, ಬಿಜೆಪಿ, ಆರ್‌ಎಸ್‌ಎಸ್‌ ಮಾತ್ರ ಇಡೀ ಹಿಂದೂ ಸಮುದಾಯವಲ್ಲ ಎಂದು ಲೋಕಸಭೆಯಲ್ಲಿ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಹೇಳಿದ್ದರು.

ಭಾರತದ ಪರಿಕಲ್ಪನೆ, ಸಂವಿಧಾನ, ಸಂವಿಧಾನದ ಮೇಲಿನ ದಾಳಿಯನ್ನು ತಡೆಯಲು ಮುಂದಾದವರ ಮೇಲೆ ವ್ಯವಸ್ಥಿತ ಪೂರ್ಣ ಪ್ರಮಾಣದ ದಾಳಿಗಳು ನಡೆದಿವೆ ಎಂದು ರಾಹುಲ್‌ ಗಾಂಧಿ ಸದನದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದ್ದರು.

ಗುರುನಾನಕ್‌, ಬುದ್ಧ, ಮಹಾವೀರ ಸೇರಿದಂತೆ ಭಾರತದಲ್ಲಿ ಯಾವುದೇ ಮಹಾಪುರುಷನನ್ನು ನೋಡಿದರೂ ಅವರೆಲ್ಲರೂ ಅಹಿಂಸೆಯನ್ನು ಬೋಧಿಸಿದರು. ಹಿಂಸೆಯನ್ನು ವಿರೋಧಿಸಿದವರಾಗಿದ್ದಾರೆ. ಆದರೆ ಕೇಂದ್ರ ಸರ್ಕಾದಲ್ಲಿರುವ ಹಿಂದೂಗಳೆಂದು ಕರೆದುಕೊಳ್ಳುವವರು ಹಿಂದೂ ಧರ್ಮದ ಮೂಲಭೂತವಾದ ಅಂಶ ಅಹಿಂಸೆಗೆ ವಿರುದ್ಧವಾಗಿ ಹಿಂಸೆಯನ್ನು ಪ್ರಚೋದಿಸುತ್ತಿದ್ದಾರೆ ಎಂದು ರಾಹುಲ್‌ ಗಾಂಧಿ ಪ್ರಧಾನಿ ಮೋದಿ, ಬಿಜೆಪಿ, ಆರ್‌ಎಸ್‌ಎಸ್‌ ವಿರುದ್ಧ ಕಟುವಾದ ಮಾತುಗಳನ್ನಾಡಿದ್ದಾರೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

59 ಸಾವಿರ ಶಿಕ್ಷಕರ ಹುದ್ದೆ ಖಾಲಿ: ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾಹಿತಿ

ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…

2 hours ago

ಮೈಸೂರಿಗೆ ತೆರಳಲು ಅನುಮತಿ ಕೋರಿ ಕೋರ್ಟ್‌ ಮೋರಿ ಹೋದ ದರ್ಶನ್‌

ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್‌ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…

2 hours ago

ನಾನು ಅಶ್ಲೀಲ ಪದ ಬಳಸಿಲ್ಲ : ಪೊಲೀಸರ ಬಳಿ ಸಿ.ಟಿ ರವಿ ಹೇಳಿಕೆ

ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್‌ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…

2 hours ago

ವೈದ್ಯ ಮೇಲೆ ಹಲ್ಲೆ: ದೂರು ದಾಖಲು

ಮೈಸೂರು: ನಗರದ ಅಲ್‌ ಅನ್ಸಾರ್‌ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ  ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…

3 hours ago

ವಿಶೇಷ ಚೇತನ ಮಕ್ಕಳು ಸಮಾಜಕ್ಕೆ ಶಾಪವಲ್ಲ, ವರ; ದೀಪಕ್‌ ಅಭಿಮತ

' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…

4 hours ago

ಸಕ್ಕರೆ ನಗರಿ ಅಂದ ಹೆಚ್ಚಿಸಿದ ದೀಪಾಲಂಕಾರ

ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್‌ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…

4 hours ago