ತಿರುವನಂತಪುರಂ : ಬಿಜೆಪಿಯಿಂದ ಮೊದಲ ಬಾರಿಗೆ ತಿರುವನಂತಪುರಂ ನಗರ ಮೇಯರ್ ಆಗಿ ಆಯ್ಕೆಯಾಗುವ ಮೂಲಕ ವಿ.ವಿ.ರಾಜೇಶ್ ಇತಿಹಾಸ ನಿರ್ಮಿಸಿದ್ದಾರೆ.
49 ವರ್ಷದ ರಾಜೇಶ್ ತಿರುವನಂತಪುರ ಸಿಟಿ ಕಾರ್ಪೋರೇಷನ್ ನಲ್ಲಿ ನಾಲ್ಕು ದಶಕಗಳ ಎಡ ಪ್ರಜಾಸತ್ತಾತ್ಮಕ ರಂಗದ (ಎಲ್‌ಡಿಎಫ್) ಆಳ್ವಿಕೆಗೆ ಅಂತ್ಯ ಹಾಡಿದ್ದಾರೆ. ರಾಜೇಶ್ ಚುನಾವಣೆಯಲ್ಲಿ 51 ಮತಗಳನ್ನು ಪಡೆದರು. ಎರಡು ಮತಗಳನ್ನು ಅಮಾನ್ಯವೆಂದು ಘೋಷಿಸಲಾಯಿತು. ಪ್ರಮಾಣವಚನ ಸಮಾರಂಭವನ್ನು ವೀಕ್ಷಿಸಲು ನೂರಾರು ಪಕ್ಷದ ಕಾರ್ಯಕರ್ತರು ಕಾರ್ಪೊರೇಷನ್ ಹಾಲ್ ಮತ್ತು ಅದರ ಆವರಣದಲ್ಲಿ ಜಮಾಯಿಸಿದ್ದರು. ಬಿಜೆಪಿಯ ಜಿ.ಎಸ್. ಅಶಾನಾಥ್ ಮಧ್ಯಾಹ್ನ ನಡೆದ ಚುನಾವಣೆಯಲ್ಲಿ ಉಪ ಮೇಯರ್ ಆಗಿ ಆಯ್ಕೆಯಾದರು.
ಇದನ್ನು ಓದಿ: ಗುರುಪುರದ ಬಳಿ ಮತ್ತೆ ಹುಲಿ ಪ್ರತ್ಯಕ್ಷ : ಸ್ಥಳೀಯರಲ್ಲಿ ಹೆಚ್ಚಿದ ಆತಂಕ
ಇತ್ತೀಚಿನ ಚುನಾವಣೆಯಲ್ಲಿ ಒಟ್ಟು 101 ಸ್ಥಾನಗಳಲ್ಲಿ 50 ಸ್ಥಾನಗಳನ್ನು ಪಡೆಯುವ ಮೂಲಕ ಬಿಜೆಪಿ ಏಕೈಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು. ಇಬ್ಬರು ಸ್ವತಂತ್ರ ಅಭ್ಯರ್ಥಿಗಳಲ್ಲಿ ಒಬ್ಬರಾದ ಕಣ್ಣಮೂಲ ವಾರ್ಡ್‌ನಿಂದ ಗೆದ್ದ ಪಟ್ಟೂರ್ ರಾಧಾಕೃಷ್ಣನ್ ಅವರ ಬೆಂಬಲವನ್ನು ಪಡೆಯುವಲ್ಲಿ ಬಿಜೆಪಿ ಯಶಸ್ವಿಯಾಯಿತು. ಇದರೊಂದಿಗೆ ಸರಳ ಬಹುಮತ ಪಡೆಯಿತು.
ಎಲ್‌ಡಿಎಫ್ ಮತ್ತು ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ ಕ್ರಮವಾಗಿ 29 ಮತ್ತು 19 ಸ್ಥಾನಗಳನ್ನು ಗೆದ್ದವು. ಹಿಂದಿನ ಕೌನ್ಸಿಲ್‌ನಲ್ಲಿ ಕಾಂಗ್ರೆಸ್‌ನಿಂದ ಆಯ್ಕೆಯಾಗಿದ್ದ ವಿಳಿಂಜಮ್ ವಾರ್ಡ್‌ನ ಸ್ವತಂತ್ರ ಅಭ್ಯರ್ಥಿಯ ಮರಣದ ಕಾರಣ ಚುನಾವಣೆಯನ್ನು ಮುಂದೂಡಲಾಗಿತ್ತು.
ಪ್ರಮಾಣವಚನ ಸಮಾರಂಭದಲ್ಲಿ ಪಕ್ಷದ ವಿವಿಧ ನಾಯಕರು ,ಬಿಜೆಪಿಯ ರಾಜ್ಯ ಅಧ್ಯಕ್ಷ ರಾಜೀವ್ ಚಂದ್ರಶೇಖರ್, ಕೇಂದ್ರ ಸಚಿವ ಸುರೇಶ್ ಗೋಪಿ, ಮಾಜಿ ಅಧ್ಯಕ್ಷ ಕೆ. ಸುರೇಂದ್ರನ್, ಸಿಕೆ ಪದ್ಮನಾಭನ್ ಮತ್ತು ಸಿಪಿಎಂನ ಮಾಜಿ ಸಚಿವ ಮತ್ತು ಹಾಲಿ ಶಾಸಕ ಕಡಕಂಪಳ್ಳಿ ಸುರೇಂದ್ರನ್ ಭಾಗವಹಿಸಿದ್ದರು.
ಕಾನೂನು ಪದವೀಧರರಾದ ವಿ.ವಿ. ರಾಜೇಶ್ ಪ್ರಸ್ತುತ ಬಿಜೆಪಿಯ ರಾಜ್ಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ತಿರುವನಂತಪುರದ ಜೊತೆ, ತ್ರಿಪುನಿತುರ ಹಾಗೂ ಪಾಲಕ್ಕಾಡ್‌ನಲ್ಲಿ ಬಿಜೆಪಿ ಅಧಿಕಾರಕ್ಕೇರಿದೆ.
ಚಾಮರಾಜನಗರ: ಹೊಸ ವರ್ಷ-೨೦೨೬ರ ಸ್ವಾಗತಕ್ಕೆ ಜಿಲ್ಲೆಯ ಧಾರ್ಮಿಕ ಹಾಗೂ ಪ್ರವಾಸಿ ತಾಣಗಳಿಗೆ ನಾನಾ ಕಡೆಯಿಂದ ಧಾವಿಸುವ ಪ್ರವಾಸಿಗರು ಅದಾಗಲೇ ವಸತಿ…
ಚಿರಂಜೀವಿ ಸಿ.ಹುಲ್ಲಹಳ್ಳಿ ಮೈಸೂರು: ನಗರದಲ್ಲಿ ಸಾರಿಗೆ ಬಸ್‌ನಲ್ಲಿ ಪ್ರಯಾಣಿಸುವ ಸಾರ್ವಜನಿಕರ ಸಂಖ್ಯೆ ಹೆಚ್ಚಾಗಿದೆ. ನಗರ ಸಾರಿಗೆಗೆ ಪ್ರಸಕ್ತ ವರ್ಷ ೯೬…
ಮಂಡ್ಯ : ಪೌತಿ ಖಾತಾ ಅರ್ಜಿಗಳನ್ನು ಶೀಘ್ರ ವಿಲೇವಾರಿ ಮಾಡಬೇಕು. ಮುಂದಿನ ಆರು ತಿಂಗಳುಗಳೊಳಗೆ ಪೌತಿ ಖಾತಾ ಆಂದೋಲನದಲ್ಲಿ ಯಾವುದೇ…
ಬೆಂಗಳೂರು : ಉದ್ಯೋಗ ಖಾತರಿಯನ್ನು ಇಲ್ಲವಾಗಿಸುವ ಮತ್ತು ಒಕ್ಕೂಟ ವ್ಯವಸ್ಥೆಯ ಆಶಯಗಳಿಗೆ ವ್ಯತಿರಿಕ್ತವಾಗಿರುವ ವಿಕಸಿತ ಭಾರತ ಉದ್ಯೋಗ ಖಾತರಿ ಮತ್ತು…
ಬೆಂಗಳೂರು : ಜಾರಿ ನಿರ್ದೇಶನಾಲಯ(ಇ.ಡಿ) ದಾಖಲಿಸಿದ್ದ ಕ್ರಿಮಿನಲ್ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಅವರಿಗೆ ಬಿಗ್ ರಿಲೀಫ್…