Mysore
24
overcast clouds

Social Media

ಶುಕ್ರವಾರ, 04 ಏಪ್ರಿಲ 2025
Light
Dark

ಉತ್ತಮ ಆಡಳಿತ ನಡೆಸಲು ಬಿಜೆಪಿ ಅಸಮರ್ಥ: ವಿಪಕ್ಷ ನಾಯಕಿ ಆತಿಶಿ

ನವದೆಹಲಿ: ಕಳೆದ ತಿಂಗಳು ದೆಹಲಿಯಲ್ಲಿ ಅಧಿಕಾರ ಹಿಡಿದ ಬಿಜೆಪಿ ಪಕ್ಷ ಜನರಿಗೆ ಉತ್ತಮ ಸೇವೆ ಒದಗಿಸುವಲ್ಲಿ ವಿಫಲವಾಗಿದೆ ಎಂದು ವಿರೋಧ ಪಕ್ಷದ ನಾಯಕಿ ಆತಿಶಿ ಆರೋಪಿಸಿದ್ದಾರೆ.

ಇಂದು ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ದೆಹಲಿಯಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಜನರ ಸಮಸ್ಯೆಗಳನ್ನು ಪರಿಹರಿಸಲು ವಿಫಲವಾಗಿದೆ. ದೆಹಲಿಯಲ್ಲಿ ವಿದ್ಯುತ್‌ ಕಡಿತ ಹೆಚ್ಚಾಗಿದೆ. ಇದರಿಂದ ಜನರು ತೊಂದರೆ ಅನುಭವಿಸುತ್ತಿದ್ದಾರೆ. ಆದರೆ, ಕೇಜ್ರಿವಾಲ್‌ ಆಡಳಿತದ ಅವಧಿಯಲ್ಲಿ ವಿದ್ಯುತ್‌ ಸಮಸ್ಯೆ ಇರಲಿಲ್ಲ ಎಂದು ಹೇಳಿದ್ದಾರೆ.

ಎಎಪಿ ಸರ್ಕಾರದ ಅವಧಿಯಲ್ಲಿ ದಿನದ 24 ಗಂಟೆಯೂ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಿದ್ಯುತ್‌ ಸರಬರಾಜು ಇರುತಿತ್ತು ಎಂದು ಅಂಕಿ-ಅಂಶಗಳ ಸಮೇತ ಮಾಹಿತಿ ನೀಡಿದ್ದಾರೆ.

Tags: