ನವದೆಹಲಿ: ಎಎಪಿ ಪಕ್ಷವನ್ನು ಗುರಿಯಾಗಿಸಿ ಕೇಂದ್ರದಲ್ಲಿ ಆಡಳಿತದಲ್ಲಿರುವ ಬಿಜೆಪಿ ಪಕ್ಷವು ಗೂಂಡಾಗಿರಿ ನಡೆಸುತ್ತಿದೆ ಎಂದು ಎಎಪಿ ಸಂಚಾಲಕ ಹಾಗೂ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಆರೋಪಿಸಿದ್ದಾರೆ.
ದೆಹಲಿಯಲ್ಲಿ ಇಂದು (ಫೆ.3) ಚುನಾವಣಾ ಪ್ರಚಾರ ಕೊನೆಗೊಳ್ಳುತ್ತಿದೆ. ಈ ಹಿನ್ನಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದು ಕಡೆ, ಒಂದು ಪಕ್ಷವು ಸಾಮಾನ್ಯ ಜನರಿಗೆ ತಿಂಗಳಿಗೆ ರೂ. 25,000 ಹಣ ಉಳಿಸುತ್ತಿದೆ. ಇನ್ನೊಂದು ಪಕ್ಷವು ಗೂಂಡಾಗಿರಿಯಲ್ಲಿ ತೊಡಗಿದೆ ಎಂದು ಬಿಜೆಪಿ ಪಕ್ಷವನ್ನು ಗುರಿಯಾಗಿಸಿ ಹೇಳಿದ್ದಾರೆ.
ಈ ದೇಶದ ಕಾನೂನಿಗೂ ಹೆದರದೆ, ದೆಹಲಿ ಪೊಲೀಸರನ್ನು ತಮ್ಮ ವಶದಲ್ಲಿ ಇರಿಸಿಕೊಂಡಿರುವವರು ಯಾರು? ಪತ್ರಕರ್ತರನ್ನು ಬಂಧಿಸುವ ಮತ್ತು ವಿರೋಧ ಪಕ್ಷಗಳನ್ನು ಹತ್ತಿಕ್ಕುವ ಕೆಲಸ ಮಾಡುವ ಗೂಂಡಾ ಯಾರು? ಎಂದು ಕೇಜ್ರಿವಾಲ್ ಪ್ರಶ್ನಿಸಿದ್ದಾರೆ.
ಇದೇ ವೇಳೆ ಚುನಾವಣಾ ಆಯೋಗದ ಮುಖ್ಯಸ್ಥ ರಾಜೀವ್ ಕುಮಾರ್ ಅವರನ್ನು ಉಲ್ಲೇಖಿಸಿ, ತಮ್ಮ ವೈಯುಕ್ತಿಕ ಲಾಭಕ್ಕಾಗಿ ಪ್ರಜಾಪ್ರಭತ್ವವನ್ನು ಅಪಾಯಕ್ಕೆ ಸಿಲುಕಿಸಬೇಡಿ, ದೇಶದ ಜನರ ಭವಿಷ್ಯವನ್ನು ಪಣಕ್ಕಿಡಬೇಡಿ ಎಂದು ನಾನು ವಿನಂತಿಸುತ್ತೇನೆ ಎಂದಿದ್ದಾರೆ.