ದೇಶ- ವಿದೇಶ

ಬಿಜೆಪಿ ಗೂಂಡಾಗಿರಿಯಲ್ಲಿ ತೊಡಗಿದೆ: ಕೇಜ್ರಿವಾಲ್‌ ವಾಗ್ದಾಳಿ

ನವದೆಹಲಿ: ಎಎಪಿ ಪಕ್ಷವನ್ನು ಗುರಿಯಾಗಿಸಿ ಕೇಂದ್ರದಲ್ಲಿ ಆಡಳಿತದಲ್ಲಿರುವ ಬಿಜೆಪಿ ಪಕ್ಷವು ಗೂಂಡಾಗಿರಿ ನಡೆಸುತ್ತಿದೆ ಎಂದು ಎಎಪಿ ಸಂಚಾಲಕ ಹಾಗೂ ಮಾಜಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಆರೋಪಿಸಿದ್ದಾರೆ.

ದೆಹಲಿಯಲ್ಲಿ ಇಂದು (ಫೆ.3) ಚುನಾವಣಾ ಪ್ರಚಾರ ಕೊನೆಗೊಳ್ಳುತ್ತಿದೆ. ಈ ಹಿನ್ನಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದು ಕಡೆ, ಒಂದು ಪಕ್ಷವು ಸಾಮಾನ್ಯ ಜನರಿಗೆ ತಿಂಗಳಿಗೆ ರೂ. 25,000 ಹಣ ಉಳಿಸುತ್ತಿದೆ. ಇನ್ನೊಂದು ಪಕ್ಷವು ಗೂಂಡಾಗಿರಿಯಲ್ಲಿ ತೊಡಗಿದೆ ಎಂದು ಬಿಜೆಪಿ ಪಕ್ಷವನ್ನು ಗುರಿಯಾಗಿಸಿ ಹೇಳಿದ್ದಾರೆ.

ಈ ದೇಶದ ಕಾನೂನಿಗೂ ಹೆದರದೆ, ದೆಹಲಿ ಪೊಲೀಸರನ್ನು ತಮ್ಮ ವಶದಲ್ಲಿ ಇರಿಸಿಕೊಂಡಿರುವವರು ಯಾರು? ಪತ್ರಕರ್ತರನ್ನು ಬಂಧಿಸುವ ಮತ್ತು ವಿರೋಧ ಪಕ್ಷಗಳನ್ನು ಹತ್ತಿಕ್ಕುವ ಕೆಲಸ ಮಾಡುವ ಗೂಂಡಾ ಯಾರು? ಎಂದು ಕೇಜ್ರಿವಾಲ್‌ ಪ್ರಶ್ನಿಸಿದ್ದಾರೆ.

ಇದೇ ವೇಳೆ ಚುನಾವಣಾ ಆಯೋಗದ ಮುಖ್ಯಸ್ಥ ರಾಜೀವ್‌ ಕುಮಾರ್‌ ಅವರನ್ನು ಉಲ್ಲೇಖಿಸಿ, ತಮ್ಮ ವೈಯುಕ್ತಿಕ ಲಾಭಕ್ಕಾಗಿ ಪ್ರಜಾಪ್ರಭತ್ವವನ್ನು ಅಪಾಯಕ್ಕೆ ಸಿಲುಕಿಸಬೇಡಿ, ದೇಶದ ಜನರ ಭವಿಷ್ಯವನ್ನು ಪಣಕ್ಕಿಡಬೇಡಿ ಎಂದು ನಾನು ವಿನಂತಿಸುತ್ತೇನೆ ಎಂದಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಯುವಜನರ ದಾರಿತಪ್ಪಿಸುವ ಸರ್ಕಾರದ ಕುಟಿಲ ನೀತಿ

ಹೊಸ ವರ್ಷದಂದು ಹಲವರು ಬಂಧು,ಬಳಗ, ಸ್ನೇಹಿತರ ಜತೆ ಸೇರಿ ಸಂಭ್ರಮಿಸಿದರು. ಆದರೆ ಸಾಂಸ್ಕ ತಿಕ ನಗರ ಮೈಸೂರಿನಲ್ಲಿ ದಾಖಲೆ ಮದ್ಯ…

4 mins ago

ಓದುಗರ ಪತ್ರ: ಸ್ವಾಗತಾರ್ಹ ನಡೆ!

ಸ್ವಾಗತಾರ್ಹ ನಡೆ! ಜಾತಿ ಮೀರಿ ಪ್ರೀತಿಸಿದರೆ ಕುಂದಲ್ಲವದು ಮರ್ಯಾದೆಗೆ ಬದಲಿಗೆ ಹೆಚ್ಚುವುದು ಮರ್ಯಾದೆ ಗೌರವ! ಜಾತಿ ಕಟ್ಟಳೆ ಮುರಿವ ಸಮತೆಯ…

6 mins ago

ಓದುಗರ ಪತ್ರ: ನಿರ್ಲಕ್ಷ್ಯಕ್ಕೆ ಒಳಗಾದ ಬ್ಯಾರಿಕೇಡ್‌ಗಳು

ಸಾಂಸ್ಕ ತಿಕ ನಗರಿ ಮೈಸೂರಿನಲ್ಲಿ ಪೊಲೀಸ್ ಇಲಾಖೆಗೆ ಸೇರಿದ ಬ್ಯಾರಿಕೇಡ್‌ಗಳು ಬಳಕೆಯಾದ ನಂತರ ನಿರ್ಲಕ್ಷ್ಯಕ್ಕೆ ಒಳಪಡುತ್ತಿವೆ. ಅವುಗಳನ್ನು ಸುರಕ್ಷಿತವಾಗಿ ಒಂದೆಡೆ…

8 mins ago

ಸಮರ್ಪಕ ಬಸ್ ವ್ಯವಸ್ಥೆ ಕಲ್ಪಿಸಲು ಆಗ್ರಹ

ಲೊಕ್ಕನಹಳ್ಳಿ ಬಳಿ ಶಾಲಾ-ಕಾಲೇಜು ವಿದ್ಯಾರ್ಥಿಗಳ ಪ್ರತಿಭಟನೆ; ಅಧಿಕಾರಿಗಳ ವಿರುದ್ಧ ಆಕ್ರೋಶ  ಹನೂರು: ಒಂದೆಡೆ ಸಮರ್ಪಕ ಬಸ್ ವ್ಯವಸ್ಥೆ ಕಲ್ಪಿಸುವಂತೆ ಒತ್ತಾಯಿಸಿ ಶಾಲಾ-ಕಾಲೇಜು…

11 mins ago

ಕೊಡಗಿನಲ್ಲಿ ಶೇ.80ರಷ್ಟು ಭತ್ತ ಕಟಾವು ಕಾರ್ಯ ಪೂರ್ಣ

ನವೀನ್ ಡಿಸೋಜ ೧೮,೫೦೦ ಹೆಕ್ಟೇರ್ ಪ್ರದೇಶದಲ್ಲಿ ಭತ್ತ ಬೆಳೆದಿರುವ ರೈತರು; ಹವಾಮಾನ ವೈಪರೀತ್ಯದ ನಡುವೆಯೂ ಕಟಾವು ಕಾರ್ಯ ಚುರುಕು ಮಡಿಕೇರಿ:…

15 mins ago

ಮಳೆಯಿಂದ ತಗ್ಗಿದ ಚಳಿ, ಒಕ್ಕಣೆಗೆ ಪರದಾಟ!

ಚಾಮರಾಜನಗರ: ತೀವ್ರ ಚಳಿಯಿಂದ ತತ್ತರಿಸಿದ್ದ ಜಿಲ್ಲೆಯ ಜನತೆ ಕಳೆದ ೨-೩ ದಿನಗಳಿಂದ ಎದುರಾಗಿರುವ ಮೋಡ ಕವಿದ ವಾತಾವರಣ ಮತ್ತು ಅಲ್ಲಲ್ಲಿ…

19 mins ago