ರಾಹುಲ್ ಗಾಂಧಿ ಅವರಿಗೆ ಕೊಲೆ ಬೆದರಿಕೆ, ತೇಜೋವಧೆಗೆ ಸುಳ್ಳಿನ ಸರಮಾಲೆ ಸೃಷ್ಟಿ: ಸಿ.ಎಂ.ಸಿದ್ದರಾಮಯ್ಯ ಪತ್ರಿಕಾಗೋಷ್ಠಿಯಲ್ಲಿ ತೀವ್ರ ಖಂಡನೆ
ತ್ಯಾಗ ಬಲಿದಾನದ ಸಂಸ್ಕೃತಿ ಮತ್ತು ಹುತಾತ್ಮರ ಕುಟುಂಬದಿಂದ ಬಂದ ರಾಹುಲ್ ಗಾಂಧಿ ಅವರು ಇದಕ್ಕೆಲ್ಲಾ ಹೆದರುವವರಲ್ಲ
ಬೆಂಗಳೂರು: ಉನ್ನತ ತ್ಯಾಗ ಬಲಿದಾನದ ಕುಟುಂಬದಿಂದ ಬಂದ ರಾಹುಲ್ ಗಾಂಧಿ ಅವರನ್ನು ಮುಗಿಸಲು ಬಿಜೆಪಿ ಸಂಚು ನಡೆಸುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದರು.
ಪತ್ರಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಇಂಧಿರಾಗಾಂಧಿ, ರಾಜೀವ್ ಗಾಂಧಿ ದೇಶಕ್ಕಾಗಿ ಹುತಾತ್ಮರಾಗಿದ್ದಾರೆ. ಇಂಥಾ ಉನ್ನತ ತ್ಯಾಗ ಬಲಿದಾನದ ಕುಟುಂಬದಿಂದ ಬಂದು ರಾಹುಲ್ ಗಾಂಧಿ ಅವರು ದೇಶಕ್ಕಾಗಿ ಅವಿರತ ಹೋರಾಟ ನಡೆಸುತ್ತಿದ್ದಾರೆ. ಅಜ್ಜಿ ಇಂದಿರಾಗಾಂಧಿ ಅವರಿಗೆ ಆದ ಗತಿಯೇ ನಿಮಗೂ ಆಗುತ್ತದೆ ಎಂದು ರಾಹುಲ್ ಗೆ ಬಿಜೆಪಿ ಬೆದರಿಕೆ ಹಾಕಿದೆ ಎಂದು ದೂರಿದರು.
ಕೇಂದ್ರದ ರೈಲ್ವೆ ಖಾತೆ ರಾಜ್ಯ ಸಚಿವ ರಾಹುಲ್ ಗಾಂಧಿ ಅವರನ್ನು ಭಯೋತ್ಪಾದಕ ಎಂದು ಕರೆದಿದ್ದಾರೆ. ಈ ರೀತಿ ಜೀವ ಬೆದರಿಕೆಗಳ ಮೂಲಕ ಬಿಜೆಪಿಯ ಕಾರ್ಯಕರ್ತರನ್ನು ಎತ್ತಿಕಟ್ಟುವ ಷಡ್ಯಂತ್ರ ನಡೆಯುತ್ತಿದೆ. ರಾಹುಲ್ ಗಾಂಧಿ ನಾಲಗೆ ಕತ್ತರಿಸಿದವರಿಗೆ 11 ಲಕ್ಷ ಬಹುಮಾನ ಕೊಡುವುದಾಗಿ ಶಿವಸೇನೆಯ ಶಿಂಧೆ ಬಣದ ಶಾಸಕ ಸಂಜಯ್ ಗಾಯಕ್ ವಾಡ್ ಕರೆ ನೀಡಿದ್ದಾರೆ. ಇದೂ ಕೂಡ ಕೊಲೆ ಬೆದರಿಕೆಯೇ ಆಗಿದೆ. ಆದ್ದರಿಂದ ಈ ಕೂಡಲೇ ಸಂಜಯ್ ಗಾಯಕ್ ವಾಡ್ ಮೇಲೆ ಕ್ರಿಮಿನಲ್ ಕೇಸು ದಾಖಲಿಸಿ ಜೈಲಿಗೆ ತಳ್ಳಲು ಸಿಎಂ ಆಗ್ರಹಿಸಿದರು.
ಉತ್ತರ ಪ್ರದೇಶದ ಸಚಿವರೊಬ್ಬರು ರಾಹುಲ್ ಗಾಂಧಿ ಈ ದೇಶದ ನಂಬರ್ ಒನ್ ಭಯೋತ್ಪಾದಕ ಎಂದು ಹೇಳಿಕೆ ನೀಡಿದ್ದಾರೆ. ಆದರೆ ಇವತ್ತಿನವರೆಗೂ ಬಿಜೆಪಿ ಪಕ್ಷವಾಗಲಿ, ಬಿಜೆಪಿ ಸರ್ಕಾರವಾಗಲಿ, ಕೇಂದ್ರ ಸರ್ಕಾರವಾಗಲಿ ಕಠಿಣ ಕ್ರಮ ತೆಗೆದುಕೊಂಡಿಲ್ಲ. ಕಾಟಾಚಾರಕ್ಕೆ ಕೇಸು ದಾಖಲಿಸಿ ಕೈ ಚೆಲ್ಲಿದ್ದಾರೆ. ಬಿಜೆಪಿ ವಿರುದ್ಧ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರನ್ನು ಹೂತು ಹಾಕುವುದಾಗಿ ಸಂಜಯ್ ಗಾಯಕ್ ವಾಡ್ ಮತ್ತೆ ಬೆದರಿಕೆ ಹಾಕಿದ್ದಾರೆ ಎಂದು ಹೇಳಿದರು.
ರಾಗಾ ವಿರುದ್ಧ ಜೀವ ಬೆದಿರಿಕೆ ಹಾಕಿರುವವರ ವಿರುದ್ಧ ಕ್ರಿಮಿನಲ್ ಕೇಸು ದಾಖಲಿಸಿ
ರಾಹುಲ್ ಗಾಂಧಿ ಅವರನ್ನು ರಾಜಕೀಯವಾಗಿಯೂ ಮುಗಿಸುವ ಜೊತೆಗೆ ಪ್ರಾಣ ಭಯ ಹುಟ್ಟಿಸುವ ಬಿಜೆಪಿ ಷಡ್ಯಂತ್ರ ಆತಂಕಕಾರಿಯಾದದ್ದು. ರಾಹುಲ್ ಗಾಂಧಿ ಅವರಿಗೆ ಜೀವ ಬೆದರಿಕೆ ಹಾಕಿರುವ ಎಲ್ಲರ ವಿರುದ್ಧ ಕ್ರಿಮಿನಲ್ ಕೇಸು ಹಾಕಿ ತಕ್ಷಣ ಬಂಧಿಸಬೇಕು ಎಂದು ಆಗ್ರಹಿಸಿದರು.
ತ್ಯಾಗ ಬಲಿದಾನದ ಸಂಸ್ಕೃತಿ ಮತ್ತು ಹುತಾತ್ಮರ ಕುಟುಂಬದಿಂದ ಬಂದ ರಾಹುಲ್ ಗಾಂಧಿ ಅವರು ಇದಕ್ಕೆಲ್ಲಾ ಹೆದರುವವರಲ್ಲ ಎಂದು ಹೇಳಿದರು.
ಸಿದ್ದಾಪುರ :- ನಗರದಲ್ಲಿ ನಡೆದ ದರೋಡೆ ಪ್ರಕರಣ ಭೇದಿಸಲು ಜಿಲ್ಲಾ ಹೆಚ್ಚುವರಿ ಪೋಲೀಸ್ ಅಧೀಕ್ಷರ ಮಾರ್ಗದರ್ಶನದಲ್ಲಿ ವಿಶೇಷ ತಂಡ ರಚಿಸಲಾಗಿದೆ…
ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ ಸಮೀಪದ ಸೀರಗೊಡು ಗ್ರಾಮದ ಸೂಳಿಮೇಡು ಅರಣ್ಯ ಪ್ರದೇಶದಲ್ಲಿ ಸುಮಾರು ಆರು ತಿಂಗಳ ಚಿರತೆ ಮರಿಯನ್ನು ಗ್ರಾಮಸ್ಥರು…
ಹುಣಸೂರು : ಹುಣಸೂರು ಪಟ್ಟಣದಲ್ಲಿಂದು ಹಾಡಹಗಲೇ ಚಿನ್ನದಂಗಡಿ ದರೋಡೆ ನಡೆದಿದೆ. ಬಸ್ ನಿಲ್ದಾಣದ ಹಿಂಭಾಗದಲ್ಲಿ ಬೈಪಾಸ್ ರಸ್ತೆಯಲ್ಲಿರುವ ʻಸ್ಕೈ ಗೋಲ್ಡ್…
ಶ್ರೀರಂಗಪಟ್ಟಣ : ತಾಲ್ಲೂಕಿನ ಪಾಲಹಳ್ಳಿಯ ವರುಣಾ ನಾಲೆಯಲ್ಲಿ ಬಟ್ಟೆ ತೊಳೆಯಲು ಬಂದ ಮಹಿಳೆಯೋರ್ವರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಮತಾ…
ಕರಾಚಿ : ಕಳೆದ ಮೇ ತಿಂಗಳಲ್ಲಿ ಆಪರೇಷನ್ ಸಿಂಧೂರ ಕಾರ್ಯಾಚರಣೆಯ ಸಂದರ್ಭದಲ್ಲಿ ರಾವಲ್ಪಿಂಡಿಯ ನೂರ್ ಖಾನ್ ವಾಯುನೆಲೆಯ ಮೇಲೆ ಭಾರತ…
ಚೆನ್ನೈ : ದಳಪತಿ ವಿಜಯ್ ನಟನೆಯ ‘ಜನ ನಾಯಗನ್’ ಸಿನಿಮಾದ ಪ್ರೀ ರಿಲೀಸ್ ಇವೆಂಟ್ ಡಿಸೆಂಬರ್ 27 ಮಲೇಷ್ಯಾನಲ್ಲಿ ಅದ್ಧೂರಿಯಾಗಿ…