ದೇಶ- ವಿದೇಶ

Loksabha Election Results 2024: ರಾಮನ ಅಂಗಳದಲ್ಲಿ ಸೋತ ಬಿಜೆಪಿ ಅಭ್ಯರ್ಥಿ!

ಉತ್ತರ ಪ್ರದೇಶ/ ಅಯೋಧ್ಯೆ: ಬಿಜೆಪಿಯ ಮಹತ್ವಾಕಾಂಕ್ಷೆಯ ರಾಮಮಂದಿರ ನಿರ್ಮಾಣ ಮಾಡಿದ ಅಯೋಧ್ಯೆ(ಫರಿದಾಬಾದ್‌)ಯಲ್ಲಿಯೇ ಬಿಜೆಪಿ ಠೇವಣಿ ಕಳೆದುಕೊಂಡು ತೀವ್ರ ಮುಖಭಂಗ ಅನುಭವಿಸಿದೆ.

ಸಮಾಜವಾದಿ ಪಾರ್ಟಿಯ ಅವದೇಶ್‌ ಪ್ರಸಾದ್‌ ಅವರ ವಿರುದ್ಧ ಬಿಜೆಪಿಯಿಂದ ಸ್ಪರ್ಧಿಸಿರುವ ಲಲ್ಲುಸಿಂಗ್‌ ಅವರು ಹೀನಾಯ ಸೋಲು ಕಂಡಿದ್ದಾರೆ.

1980ರ ದಶಕದಿಂದಲೂ ರಾಮ ಮಂದಿರ ಹೆಸರನ್ನು ಪ್ರಸ್ತಾಪಿಸಿ ಜನಾಂದೋಲನ ಮಾಡುತ್ತಾ ಉತ್ತರ ಪ್ರದೇಶದಲ್ಲಿ ಬಿಜೆಪಿ ಅಧಿಕಾರದ ಗದ್ದುಗೆ ಹಿಡಿಯುತ್ತಿತ್ತು. ಇದರ ಬೆನ್ನಲ್ಲೇ ಇದೇ ವರ್ಷ ಜನವರಿಯಲ್ಲಿ ರಾಮ ಮಂದಿರವನ್ನು ಸಹ ಉದ್ಘಾಟನೆ ಮಾಡಿದ್ದರು. ಇದು ಭಾರತೀಯರ ಅಸ್ಮಿತೆ, ಭಾರತೀಯರ ಶತಮಾನದ ಕನಸು ಎಂದೆಲ್ಲಾ ಘೋಷ ವಾಕ್ಯಗಳನ್ನು ಬೀರುತ್ತಾ ಅಧಿಕಾರ ನಡೆಸುತ್ತಿದ್ದ ಬಿಜೆಪಿಗೆ ರಾಮನ ಅಂಗಳದಲ್ಲಿಯೇ ಮುಖಭಂಗ ಉಂಟಾಗಿದೆ.

ಅವದೇಶ್‌ ಪ್ರಸಾದ್‌ ಅವರು 554289 ಮತಗಳನ್ನು ಪಡೆದು ಮುನ್ನಡೆ ಸಾಧಿಸಿದ್ದಾರೆ. ಇತ್ತ ಇವರ ವಿರುದ್ಧ ಠೇವಣಿ ಕಳೆದುಕೊಂಡಿರುವ ಲಲ್ಲು ಸಿಂಗ್‌ 499722 ಮತ ಪಡೆದು 54567 ಮತಗಳ ಅಂತರಿದಂದ ಸೋಲು ಕಂಡಿದ್ದಾರೆ. ಆ ಮೂಲಕ ಈ ಬಾರಿ ಎಸ್‌ಪಿ ಪಕ್ಷಕ್ಕೆ ಬರೋಬ್ಬರಿ 38 ಕ್ಷೇತ್ರಗಳು ಕೈ ಹಿಡಿದಿವೆ. ಕಳೆದ ಬಾರಿಯ 2019 ಚುನಾವಣೆಯಲ್ಲಿ 80 ಲೋಕಸಭಾ ಕ್ಷೇತ್ರಗಳ ಪೈಕಿ ಬಿಜೆಪಿ 71 ಕ್ಷೇತ್ರ ಗೆದ್ದುಬೀಗಿತ್ತು. ಆದರೆ ಈ ಬಾರಿ ಕೇವಲ 36 ಸ್ಥಾನಗಳಿಗೆ ತೃಪ್ತಿಪಟ್ಟುಕೊಂಡಿದೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಮಧ್ಯ ಪ್ರಾಚ್ಯ ಬಿಕ್ಕಟ್ಟು | ವಿದೇಶಾಂಗ ನೀತಿ ಬದಲಿಸಲು ಖರ್ಗೆ ಆಗ್ರಹ

ಬೆಂಗಳೂರು : ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮವಾಗಿ ಉಂಟಾಗಿರುವ ಎಲ್‌ಪಿಜಿ ಸಂಕಷ್ಟವನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ತಕ್ಷಣವೇ ವಿದೇಶಾಂಗ…

57 mins ago

ಚಾರಣಕ್ಕೆ ಬಂದಿದ್ದ ಶರಣ್ಯ ಪತ್ತೆಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ: ಸಚಿವ ಈಶ್ವರ್‌ ಖಂಡ್ರೆ

ದಾವಣಗೆರೆ: ಕೊಡಗಿನ ತಡಿಯಾಂಡಮೋಳ್‌ಗೆ ಚಾರಣಕ್ಕೆ ಬಂದಿದ್ದ ಕೇರಳದ ಯುವತಿ ಜಿ.ಎಸ್.ಶರಣ್ಯ (36) ಪತ್ತೆಗೆ ಮುಖ್ಯಮಂತ್ರಿಗಳು ಸೂಚಿಸಿದ್ದು, ಹೆಚ್ಚುವರಿಯಾಗಿ 40 ಸಿಬ್ಬಂದಿಯ…

2 hours ago

ಗೌರವ ಡಾಕ್ಟರೇಟ್ ಪದವಿ ತಿರಸ್ಕರಿಸಿದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ರಾಜಕೀಯ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಹಾವೇರಿ ವಿಶ್ವವಿದ್ಯಾನಿಲಯವು ನೀಡಲು ತೀರ್ಮಾನಿಸಿದ್ದ ಗೌರವ ಡಾಕ್ಟರೇಟ್ ಪದವಿಯನ್ನು ಮಾಜಿ ಮುಖ್ಯಮಂತ್ರಿ…

2 hours ago

ಟಿ.ನರಸೀಪುರ: ಜೂಜಾಟದಲ್ಲಿ ಭಾಗಿಯಾಗಿದ್ದ ಐವರ ಬಂಧನ

ಟಿ.ನರಸೀಪುರ: ಜೂಜಾಟದಲ್ಲಿ ಭಾಗಿಯಾಗಿದ್ದ ಐವರನ್ನು ಬಂಧಿಸುವಲ್ಲಿ ಟಿ.ನರಸೀಪುರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಟಿ.ನರಸೀಪುರ ತಾಲ್ಲೂಕಿನ ವಾಟಾಳು ಗ್ರಾಮದಲ್ಲಿ ಘಟನೆ ನಡೆದಿದ್ದು,…

3 hours ago

ಇರಾನ್‌ನಲ್ಲಿ ಕಾಣೆಯಾಗಿದ್ದ US ವಾಯುಪಡೆಯ ಮತ್ತೋರ್ವ ಪೈಲಟ್‌ ರಕ್ಷಣೆ

ವಾಷಿಂಗ್ಟನ್:‌ ಮಧ್ಯಪ್ರಾಚ್ಯದಲ್ಲಿನ ಯುದ್ಧದ ಭೀಕರತೆ 37ನೇ ದಿನವೂ ಮುಂದುವರಿದಿದೆ. ಯುದ್ಧದ ಮಧ್ಯೆಯೂ ಅಮೇರಿಕಾ ಸೇನೆಯಿಂದ ಸುದ್ದಿಯೊಂದು ಹೊರಬಿದ್ದಿದ್ದು, ಇರಾನ್‌ನಲ್ಲಿ ಕಾಣೆಯಾಗಿದ್ದ…

4 hours ago

ಎಚ್‌ಎಸ್‌ಆರ್‌ಪಿ ಅಳವಡಿಕೆ ಕಡ್ಡಾಯ: ಸಾರಿಗೆ ಇಲಾಖೆ ಸ್ಪಷ್ಟನೆ

ಬೆಂಗಳೂರು: ಹಳೆಯ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ಕಡ್ಡಾಯವಾಗಿ ಅಳವಡಿಸಬೇಕು ಎಂಬ ನಿಯಮದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸಾರಿಗೆ ಇಲಾಖೆ ಸ್ಪಷ್ಟನೆ…

5 hours ago