ನವದೆಹಲಿ: ರಾಜ್ಯಸಭೆ ಚುನಾವಣೆಗೆ ಬಿಜೆಪಿ 9 ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರು ಬಿಹಾರದಿಂದ ರಾಜ್ಯಸಭೆ ಚುನಾವಣೆಗೆ ಸ್ಪರ್ಧೆ ಮಾಡಲಿದ್ದಾರೆ.
ರಾಜ್ಯಸಭೆ ಚುನಾವಣೆಗೆ ನಾಮಪತ್ರ ಸಲ್ಲಿಕೆ ಮಾಡಲು ಮಾರ್ಚ್.5ರಂದು ಕೊನೆಯ ದಿನವಾಗಿದೆ.
ನಿತಿನ್ ನಬಿನ್ ಅವರು ಪ್ರಸ್ತುತ ಬಿಜೆಪಿ ಅಧ್ಯಕ್ಷರು. ಆದ್ದರಿಂದ ಅವರು ದೆಹಲಿಯಲ್ಲಿ ಇರಲು ಅನುಕೂಲವಾಗುವಂತೆ ಅವರನ್ನು ರಾಜ್ಯಸಭಾ ಚುನಾವಣೆಗೆ ಅಭ್ಯರ್ಥಿಯನ್ನಾಗಿ ಮಾಡಲಾಗಿದೆ. ಬಿಹಾರದಲ್ಲಿ ಎನ್‌ಡಿಎ ಮೈತ್ರಿಕೂಟದ ಸರ್ಕಾರವಿದ್ದು, ನಿತಿನ್ ಸುಲಭವಾಗಿ ರಾಜ್ಯಸಭೆಗೆ ಆಯ್ಕೆಯಾಗಲಿದ್ದಾರೆ.
ಬಿಹಾರದ ರಾಜಕೀಯದಲ್ಲಿ ಅವರು 5 ಬಾರಿ ಶಾಸಕರಾಗಿ ಮತ್ತು ರಾಜ್ಯ ಸರ್ಕಾರದಲ್ಲಿ ಸಚಿವರಾಗಿ ಕೆಲಸ ಮಾಡಿದ್ದಾರೆ. ಈಗ ರಾಜ್ಯಸಭೆ ಮೂಲಕ ನಿತಿನ್ ನಬಿನ್ ರಾಷ್ಟ್ರ ರಾಜಕೀಯಕ್ಕೆ ಪಾದಾರ್ಪಣೆ ಮಾಡಲಿದ್ದಾರೆ.




