ದೇಶ- ವಿದೇಶ

ಬಿಜೆಪಿ ರಾಷ್ಟ್ರಾಧ್ಯಕ್ಷರ ಹೆಸರು ಘೋಷಣೆಗೆ ಮುಹೂರ್ತ ನಿಗದಿ

ನವದೆಹಲಿ: ಕಳೆದ ಹಲವಾರು ತಿಂಗಳಿನಿಂದ ಮುಂದೂಡಲ್ಪಟ್ಟಿದ್ದ ಬಿಜೆಪಿ ರಾಷ್ಟ್ರಾಧ್ಯಕ್ಷರ ಹೆಸರು ಘೋಷಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದೆ. ಜುಲೈ.7ರೊಳಗೆ ಅಂತಿಮ ಹೆಸರು ಘೋಷಣೆಯಾಗುವ ಸಾಧ್ಯತೆ ಇದೆ.

ಬಿಜೆಪಿ ರಾಷ್ಟ್ರಾಧ್ಯಕ್ಷರ ಆಯ್ಕೆಗೆ ಎಂಟು ಕೇಂದ್ರ ಸಚಿವರು ಮತ್ತು ಇತರ ಮೂವರ ನಾಯಕರು ಹೆಸರು ಕೇಳಿ ಬರುತ್ತಿದ್ದರೂ, ಅದರಲ್ಲಿ ಎಂಟು ಮುಖಂಡರು ಮಾತ್ರ ರೇಸಿನಲ್ಲಿ ಇದ್ದಾರೆ ಎಂದು ಹೇಳಲಾಗುತ್ತಿದೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಹೆಸರೂ, ಸದ್ಯ ಕೇಳಿಬರುತ್ತಿರುವ ಸಂಭಾವ್ಯರ ಹೆಸರಿನಲ್ಲಿದೆ. ಬಿಜೆಪಿಯ ದೆಹಲಿ ನಾಯಕರು ಮತ್ತು ಸಂಘ ಪರಿವಾರದ ಜೊತೆಗೆ, ಜೋಶಿ ಉತ್ತಮ ಬಾಂಧವ್ಯವನ್ನು ಹೊಂದಿದ್ದಾರೆ.‌

ಕಳೆದ ದೆಹಲಿ ವಿಧಾನಸಭಾ ಚುನಾವಣೆಯ ವೇಳೆ ಹಲವು ಹೆಸರು ಕೇಳಿಬರುತ್ತಿತ್ತು. ಆದರೆ, ಬಿಜೆಪಿ ವರಿಷ್ಠರು ಅಚ್ಚರಿಯಾಗಿ ರೇಖಾ ಗುಪ್ತಾ ಅವರನ್ನು ಮುಖ್ಯಮಂತ್ರಿಯಾಗಿ ಘೋಷಣೆ ಮಾಡಿದ್ದರು. ಅದೇ ರೀತಿ ರಾಷ್ಟ್ರಾಧ್ಯಕ್ಷ ಹುದ್ದೆಗೂ ಮಹಿಳೆಯ ಹೆಸರನ್ನು ಫೈನಲ್ ಮಾಡಿದರೂ ಮಾಡಬಹುದು. ಹಾಗಾಗಿ, ಇಬ್ಬರು ಮಹಿಳೆಯರ ಹೆಸರು ಸಹ ಕೇಳಿ ಬರುತ್ತಿದೆ.

ಒಟ್ಟಾರೆಯಾಗಿ ಹನ್ನೊಂದು ಸಂಭಾವ್ಯರ ಹೆಸರು ಪಟ್ಟಿಯಲ್ಲಿದ್ದು, ಅದರಲ್ಲಿ ಮೊದಲ ಎಂಟು ನಾಯಕರು ಪ್ರಮುಖವಾಗಿ ರೇಸಿನಲ್ಲಿದ್ದಾರೆ ಎಂದು ಹೇಳಲಾಗುತ್ತಿದೆ.

ಆಂದೋಲನ ಡೆಸ್ಕ್

Recent Posts

ಉಪಟಳ ನೀಡುತ್ತಿದ್ದ ಚಿರತೆ ಸೆರೆ : ನಿಟ್ಟುಸಿರು ಬಿಟ್ಟ ಜನತೆ

ಕೆ.ಆರ್.ಪೇಟೆ : ತಾಲ್ಲೂಕಿನ ಬೂಕನಕೆರೆ ಹೋಬಳಿಯ ಮುದುಗೆರೆ ಗ್ರಾಮದ ಬಳಿ ರೈತರ ಸಾಕು ಪ್ರಾಣಿಗಳನ್ನು ತಿಂದು ಹಾಕುತ್ತಾ ರೈತರಿಗೆ ನಿತ್ಯ…

4 hours ago

ಮೃಗಾಲಯದ ಬೇಟೆ ಚೀತಾ ‘ಬ್ರೂಕ್’ ಇನ್ನಿಲ್ಲ

ಮೈಸೂರು : ವಿಶ್ವವಿಖ್ಯಾತ ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ ಚುರುಕಿನ ಚಟುವಟಿಕೆಯಿಂದ ಸದಾ ಸಂದರ್ಶಕರ ಗಮನ ಸೆಳೆಯುತ್ತಿದ್ದ ಸುಮಾರು ಸುಮಾರು…

5 hours ago

ಸಿಲಿಂಡರ್‌ ಸ್ಫೋಟ ಪ್ರಕರಣ : ತನಿಖೆ ತೀವ್ರ ; ಮೈಸೂರಲ್ಲಿ ಖಾಕಿ ಕಟ್ಟೆಚ್ಚರ

ಮೈಸೂರು : ಗುರುವಾರ ಸಂಜೆ ಮೈಸೂರಿನ ಅಂಬಾವಿಲಾಸ ಅರಮನೆ ಮುಂಭಾಗ ಸಂಭವಿಸಿದ ಹಿಲೀಯಂ ಸಿಲಿಂಡರ್ ಸ್ಪೋಟ ಪ್ರಕರಣ ಸಂಬಂಧ ನಗರದ…

5 hours ago

ಎಚ್.ಡಿ.ಕೋಟೆ | ತಾಲ್ಲೂಕಿನ ಶೈಕ್ಷಣಿಕ ಪ್ರಗತಿಗೆ ಮಾದರಿ ಕಾರ್ಯಕ್ರಮ

ಎಚ್.ಡಿ.ಕೋಟೆ : ತಾಲ್ಲೂಕಿನಲ್ಲಿ ಶೈಕ್ಷಣಿಕ ಪ್ರಗತಿಗೆ ಅಗತ್ಯವಾದ ಮಾದರಿ ಕಾರ್ಯಕ್ರಮಗಳನ್ನು ಹಗಲಿರುಳು ಎನ್ನದೆ ಶಿಕ್ಷಣ ಇಲಾಖೆಯವರು ನಡೆಸುತ್ತಿದ್ದಾರೆ ಎಂದು ಶಾಸಕ…

5 hours ago

ಹೊಗೇನಕಲ್‌ ಜಲಪಾತಕ್ಕೆ ಪ್ರವಾಸಿಗರ ದಂಡು

ಹನೂರು : ಕರ್ನಾಟಕದ ನಯಾಗಾರ ಎಂದೇ ಪ್ರಖ್ಯಾತಿ ಪಡೆದಿರುವ ಹೊಗೇನಕಲ್ ಜಲಪಾತ ನೋಡಲು ತಮಿಳುನಾಡಿನ ಭಾಗದಿಂದ ಪ್ರವಾಸಿಗರ ದಂಡೇ ಹರಿದುಬರುತ್ತಿದ್ದು,…

6 hours ago

ಪುಷ್ಪ-2 ಕಾಲ್ತುಳಿತ ಪ್ರಕರಣ ; ವರ್ಷದ ಬಳಿಕ ಚಾರ್ಜ್‌ಶೀಟ್‌ ಸಲ್ಲಿಕೆ

ಹೈದರಾಬಾದ್‌ : ಪುಷ್ಪ-2 ಸಿನಿಮಾ ವಿಶೇಷ ಪ್ರದರ್ಶನದ ವೇಳೆ ಉಂಟಾದ ಕಾಲ್ತುಳಿತ ಪ್ರಕರಣದಲ್ಲಿ ವರ್ಷದ ಬಳಿಕ ಇದೀಗ ಪೊಲೀಸರು ಕೋರ್ಟ್ಗೆ…

6 hours ago