ದೇಶ- ವಿದೇಶ

ಬಿಜೆಪಿ ಅಥವಾ ಆರ್‌ಎಸ್‌ಎಸ್‌ ಹಿಂದೂ ಸಮಾಜದ ಪ್ರತಿನಿಧಿಯಲ್ಲ: ರಾಹುಲ್‌ ಗಾಂಧಿ

ನವದೆಹಲಿ: ವಿರೋಧ ಪಕ್ಷದ ನಾಯಕನಾಗಿ ಮೊದಲ ಬಾರಿಗೆ ಆಯ್ಕೆಯಾದ ರಾಹುಲ್‌ ಗಾಂಧಿ ಅವರು ತಮ್ಮ ಮೊದಲ ಭಾಷಣವನ್ನು ನವದೆಹಲಿಯ ಸಂಸತ್‌ನಲ್ಲಿಂದು (ಜುಲೈ. 1) ಮಾಡಿದರು.

ಹಿಂದು ಎಂದು ಹೇಳಿಕೊಂಡು ತಿರುಗಾಡುವವರು ದಿನದ 24 ಗಂಟೆಯೂ ಕೇವಲ ಹಿಂಸೆ, ಹಿಂಸೆ ಹಿಂಸೆ ಮಾಡುವುದರಲ್ಲಿಯೇ ತೊಡಗಿಸಿಕೊಂಡಿದ್ದಾರೆ. ದೇಶದಲ್ಲಿ ಹಿಂದೂ ಧರ್ಮ, ಮುಸ್ಲಿಂ, ಸಿಖ್‌ ಧರ್ಮ ಸೇರಿದಂತೆ ಎಲ್ಲಾ ಧರ್ಮಗಳು ಧೈರ್ಯ ಮತ್ತು ನಿರ್ಭೀತರಾಗಿರುವುದರ ಬಗ್ಗೆ ಹೇಳುತ್ತವೆ. ಆದರೆ ಹಿಂದೂ ಎಂದು ಹೇಳಿಕೊಂಡು ತಿರುಗಾಡುವವರು ಹಿಂಸಾಚಾರದಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ತಮ್ಮ ಮೊದಲ ಭಾಷಣದಲ್ಲಿಯೇ ರಾಹುಲ್‌ ಗಾಂಧಿ ಬಿಜೆಪಿ ನೇತೃತ್ವದ ಎನ್‌ಡಿಎಗೆ ಕ್ಲಾಸ್‌ ತೆಗೆದುಕೊಂಡರು.

ಲೋಕಸಭೆಯಲ್ಲಿ ಹಿಂದೂ ದೇವರಾದ ಶಿವನ ಫೋಟೋ ಹಿಡಿದು, ಶಿವನ ಸಂದೇಶವು ನಿರ್ಭಯತೆ ಮತ್ತು ಅಹಿಂಸೆಯನ್ನು ಸೂಚಿಸುತ್ತದೆ ಎಂದು ರಾಹುಲ್‌ ಗಾಂಧಿ ಹೇಳಿದರು.

ಇದರ ಜೊತೆಗೆ ಇಸ್ಲಾಂ, ಕ್ರಿಶ್ಚಿಯನ್‌, ಬೌದ್ಧ, ಜೈನ, ಸಿಖ್‌ ಸೇರಿದಂತೆ ಎಲ್ಲಾ ಧರ್ಮಗಳು ಧೈರ್ಯದ ಬಗ್ಗೆ ಮಾತನಾಡುತ್ತವೆ ಹಾಗೂ ನಿರ್ಭಯತೆಯ ಪ್ರಾಮುಖ್ಯತೆಯನ್ನು ಎತ್ತಿ ಹಿಡಿಯುತ್ತದೆ ಎಂದು ಪ್ರಸ್ತಾಪಿಸಿದರು.

ನನ್ನ ಮೇಲೆ ಆರೋಪ ಮಾಡುತ್ತಿದ್ದ ಬಿಜೆಪಿಯವರೆಲ್ಲಾ ಈಗ ಸಂವಿಧಾನಕ್ಕೆ ಜೈಕಾರ ಹಾಕುತ್ತಿದ್ದಾರೆ ಇದು ನನಗೆ ಬಹಳ ಸಂತೋಷವಾಗಿದೆ. ವಿರೋಧ ಪಕ್ಷದ ನಾಯಕನಾಗಿರುವುದಕ್ಕೆ ನನಗೆ ಬಹಳ ಹೆಮ್ಮೆಯಿದೆ. ಆದರೆ ನನಗೆ ಅಧಿಕಾರಕ್ಕಿಂತ ಜನರ ಒಳಿತೆ ಮುಖ್ಯ ಎಂದು ಸ್ಪಷ್ಟಪಡಿಸಿದರು.

ಇನ್ನು ರಾಹುಲ್‌ ಗಾಂಧಿ ಅವರು ಹಿಂದೂ ಹೆಸರೇಳಿಕೊಂಡು ಹಿಂಸೆ ಮಾಡುತ್ತಾರೆ ಎಂದು ಹೇಳಿದ ಹೇಳಿಕೆ ಉಲ್ಲೇಖಿಸಿದ ಪ್ರಧಾನಿ ಮೋದಿ, ಹಿಂದೂ ಸಮುದಾಯವನ್ನು ಹಿಂಸಾಚಾರಿಗಳು ಎಂದು ಕರೆದಿರುವುದು ಸಹಿಸಲಾಗದ ವಿಷಯವಾಗಿದೆ ಎಂದು ಧನಿ ಎತ್ತಿದರು.

ಇದಕ್ಕೆ ಸ್ಥಳದಲ್ಲೇ ಇದ್ದ ರಾಹುಲ್‌ ಗಾಂಧಿ, ಹಿಂಸಾಚಾರಿಗಳು ಎಂದು ಕರೆದಿರುವುದು ಪ್ರಧಾನಿ ಮೋದಿ ಅವರನ್ನು, ಆರ್‌ಎಸ್‌ಎಸ್‌ ಅನ್ನು, ನರೇಂದ್ರ ಮೋದಿ ಎಂದರೇ ಇಡೀ ಹಿಂದೂ ಸಮಾಜವಲ್ಲ, ಆರ್‌ಎಸ್‌ಎಸ್‌ ಎಂದರೇ ಇಡೀ ಹಿಂದೂ ಸಮಾಜವಲ್ಲ. ಬಿಜೆಪಿ ಹಾಗೂ ಆರ್‌ಎಸ್‌ಎಸ್‌ ಹಿಂದೂ ಸಮುದಾಯದ ಪ್ರತಿನಿಧಿಯಲ್ಲ ಎಂದು ತಿರುಗೇಟು ನೀಡಿದರು.

ರಾಗಾ ತೀಕ್ಷ್ಣ ಬಾಣಗಳಿಗೆ ಉತ್ತರ ನೀಡಲಾಗದೇ ಪ್ರಧಾನಿ ಮೋದಿ ಮೌನವಾಗಿ ಕುಳಿತರು.

ರಾಗಾ ಕ್ಷಮೆಯಾಚಿಸಬೇಕು: ರಾಹುಲ್‌ ಮಾತಿಗೆ ಕಿಡಿಕಾರಿರುವ ಕೇಂದ್ರ ಗೃಹಸಚಿವ ಅಮಿತ್‌ ಶಾ, ಈ ದೇಶದ ಕೋಟ್ಯಂತರ ಜನರು ತಮ್ಮನ್ನು ತಾವು ಹಿಂದೂ ಎಂದು ಹೆಮ್ಮೆಯಿಂದ ಕರೆದುಕೊಳ್ಳುತ್ತಾರೆ, ಅವರೆಲ್ಲರೂ ಹಿಂಸೆ ಮಾಡುತ್ತಾರೆಯೇ? ಹಿಂಸೆಯ ಮನೋಭಾವವನ್ನು ಯಾವುದೇ ಧರ್ಮದೊಂದಿಗೆ ಜೋಡಿಸುವುದು ತಪ್ಪು. ಇದಕ್ಕಾಗಿ ರಾಹುಲ್‌ ಗಾಂಧಿ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

2.20ಕೋಟಿ ರೂ.ಮೌಲ್ಯದ ಚಿನ್ನಾಭರಣ ವಶ ; 26 ಮಂದಿ ಬಂಧನ.

ಮಂಡ್ಯ : ಜಿಲ್ಲೆಯ ನಾಲ್ಕು ಪೊಲೀಸ್ ಉಪ ವಿಭಾಗಗಳಲ್ಲಿ ನಡೆದಿದ್ದ ಕಳ್ಳತನ ಪ್ರಕರಣಗಳನ್ನು ಪೊಲೀಸರು ಬೇಧಿಸಿದ್ದಾರೆ. 28 ಮಂದಿ ಆರೋಪಿಗಳನ್ನು…

2 hours ago

ತಳಸಮುದಾಯಕ್ಕೆ ಆರ್ಥಿಕ ಸಾಮಾಜಿಕ ಶಕ್ತಿ ಅಗತ್ಯ : ಸಿಎಂ

ಬಾಗಲಕೋಟೆ : ಕಾಂಗ್ರೆಸ್ ಸರ್ಕಾರ ಮಹಿಳೆಯರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು ಸೇರಿದಂತೆ ಶೋಷಿತ ವರ್ಗಗಳ ಏಳಿಗೆಗೆ ಶ್ರಮಿಸುತ್ತಿದೆ. ತಳಸಮುದಾಯದವರಿಗೆ ಆರ್ಥಿಕ…

2 hours ago

ಅಭಿವೃದ್ಧಿ ವಿಷಯದಲ್ಲಿ ರಾಜ್ಯ ಸರ್ಕಾರದ ಜತೆ ನಿಲ್ಲುತ್ತೇನೆ : ಕೇಂದ್ರ ಸಚಿವ ಎಚ್‌ಡಿಕೆ

ರಾಯಚೂರು : ಜಿಲ್ಲೆಯ ಸಿಂಧನೂರು ಪಟ್ಟಣದ ಶ್ರೀ ಕೃಷ್ಣದೇವರಾಯ ವಿದ್ಯಾಸಂಸ್ಥೆಯಲ್ಲಿ ನೂತನವಾಗಿ ಸ್ಥಾಪಿಸಲಾಗಿರುವ ಸೈನಿಕ ಶಾಲೆಯನ್ನು ಕೇಂದ್ರದ ಬೃಹತ್ ಕೈಗಾರಿಕೆ…

2 hours ago

IPL 2026 | ಮುಂಬೈ ವಿರುದ್ಧ ಡೆಲ್ಲಿಗೆ ಭರ್ಜರಿ ಜಯ

ನವದೆಹಲಿ : ಸಮೀರ್ ರಿಜ್ವಿ ಸ್ಫೋಟಕ ಬ್ಯಾಟಿಂಗ್ ಜತೆಗೆ ಸಂಘಟಿತ ಬೌಲಿಂಗ್ ನೆರವಿನಿಂದ ಮುಂಬೈ ಇಂಡಿಯನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್…

2 hours ago

ಇರಾನ್ ಮೇಲೆ ಕ್ಷಿಪಣಿ ದಾಳಿ ; ಬುಶೆಹರ್ ಅಣುಸ್ಥಾವರದ ಬಳಿ ಹಾನಿ

ಟೆಹ್ರಾನ್ : ಅಮೆರಿಕದ ಮಿತ್ರರಾಷ್ಟ್ರಗಳಲ್ಲಿನ ಸೇನಾ ನೆಲೆಗಳ ಮೇಲೆ ಇರಾನ್ ಕ್ಷಿಪಣಿ ದಾಳಿ ಮುಂದುವರಿದಿರುವಂತೆಯೇ ಇತ್ತ ಇರಾನ್ ಮೇಲೆ ಮುಗಿಬಿದ್ದಿರುವ…

3 hours ago

ಇಂಧನ ವ್ಯತ್ಯಯ ಆತಂಕ ; ಎಲೆಕ್ಟ್ರಿಕ್‌ ವಾಹನ ಮಾರಾಟದಲ್ಲಿ ಏರಿಕೆ

ಬೆಂಗಳೂರು : ಯುದ್ಧದ ಪರಿಣಾಮ ಕೆಲ ಉದ್ಯಮಗಳಿಗೆ ಹೊಡೆತ ನೀಡಿದರೆ, ಇನ್ನೂ ಕೆಲವು ಕ್ಷೇತ್ರಗಳಿಗೆ ಅದೇ ಅವಕಾಶವಾಗಿ ಪರಿಣಮಿಸಿದೆ. ಅದರಲ್ಲೂ…

3 hours ago