ನವದೆಹಲಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಅಂತ್ಯಕ್ರಿಯೆ ವಿಚಾರದಲ್ಲಿ ಕೆಟ್ಟ ರಾಜಕೀಯ ಮಾಡಬೇಡಿ ಎಂದು ರಾಹುಲ್ ಗಾಂಧಿಗೆ ಬಿಜೆಪಿ ತಿರುಗೇಟು ನೀಡಿದೆ.
ಈ ಬಗ್ಗೆ ಮಾತನಾಡಿದ ಬಿಜೆಪಿ ಸಂಸದ ಸಂಬಿತ್ ಪಾತ್ರ ಅವರು ರಾಹುಲ್ ಗಾಂಧಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ದೇಶದ ಶ್ರೇಷ್ಠ ವ್ಯಕ್ತಿಗಳನ್ನು ಕಳೆದುಕೊಂಡಿದ್ದೇವೆ. ಎಲ್ಲರೂ ದುಃಖದಲ್ಲಿರುವಾಗ ರಾಹುಲ್ ಅವರ ಹೇಳಿಕೆ ನಾಚಿಕೆಗೇಡಿನ ಸಂಗತಿಯಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಕಾಂಗ್ರೆಸ್ ಮನಮೋಹನ್ ಸಿಂಗ್ ಅವರ ಸ್ಮಾರಕಕ್ಕೆ ಜಾಗ ನೀಡುವಂತೆ ಮನವಿ ಮಾಡಿತ್ತು. ಅದಕ್ಕೆ ಸರ್ಕಾರ ಒಪ್ಪಿದೆ. ಸಿಂಗ್ ಅವರ ಗೌರವಾರ್ಥವಾಗಿ ಸ್ಮಾರಕ ನಿರ್ಮಿಸುವ ಉದ್ದೇಶವನ್ನು ವ್ಯಕ್ತಪಡಿಸಿದೆ. ಸ್ಮಾರಕ ಮಾಡುವುದರಿಂದ ಇಡೀ ಜಗತ್ತು ಅವರ ಸಕಾರಾತ್ಮ ಕಾರ್ಯಗಳನ್ನು ನೆನಪಿಸಿಕೊಳ್ಳುತ್ತದೆ ಎಂದು ಹೇಳಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಸ್ಮಾರಕ ಮಾಡುವುದಕ್ಕೆ ಕೆಲವು ಕಾರ್ಯವಿಧಾನಗಳಿವೆ. ಆದ್ರೆ ಅಂತ್ಯಕ್ರಿಯೆಯು ಕಾಯಲು ಸಾಧ್ಯವಿಲ್ಲದ ಪ್ರಕ್ರಿಯೆಯಾಗಿದೆ. ಆದ್ದರಿಂದಲೇ ಬೋಧ್ ಘಾಟ್‌ನಲ್ಲಿ ಅವರ ಅಂತ್ಯಕ್ರಿಯೆ ನೆರವೇರಿಸಲಾಯಿತು ಎಂದು ಸ್ಪಷ್ಟಪಡಿಸಿದ್ದಾರೆ.
ಮಳೆ ಸರಿಯಾಗಿ ಆಗದೆ ಜಲವಿದ್ಯುತ್ ಉತ್ಪಾದನೆ ಕಡಿಮೆಯಾಗಿ ವಿದ್ಯುತ್ ಅಭಾವ ಎದುರಾಗಿರುವುದು ನಿಜ. ಆದರೆ ಯಾವುದೇ ಮುನ್ಸೂಚನೆ ಇಲ್ಲದೆ ಇದ್ದಕ್ಕಿದ್ದಂತೆ…
ಮೈಸೂರು ಮಹಾ ನಗರಪಾಲಿಕೆ ವತಿಯಿಂದ ಕಲಾಮಂದಿರದಲ್ಲಿ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ, ಮೈಸೂರು ಸ್ವಚ್ಛ ನಗರಿಯಾಗಲು ಪೌರ ಕಾರ್ಮಿಕರ…
ಸೆಪ್ಟೆಂಬರ್ ಕೊನೆಯಲ್ಲಿ ಆರ್ಥಿಕ ವರ್ಷದ ಅರ್ಧವಾರ್ಷಿಕ ಲೆಕ್ಕಪತ್ರ ಮುಕ್ತಾಯಗೊಳಿಸುವ ಅತ್ಯಂತ ನಿರ್ಣಾಯಕ ಸಮಯದಲ್ಲಿ ಬ್ಯಾಂಕ್ ಒಕ್ಕೂಟಗಳು (ಯುಎಫ್ಬಿ) ಮೂರು ದಿನಗಳ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ದೆಹಲಿ ಸಹಜ ವಿಳಾಸವಾಗಿತ್ತು. ದೇಶದ…
ಕೆ.ಬಿ.ರಮೇಶನಾಯಕ ಕರ್ನಾಟಕ ರಾಜ್ಯದ ಗತವೈಭವ, ದೇಶದ ಅಖಂಡತೆ ಬಿಂಬಿಸುವ ಮಾದರಿಗಳ ಸವಾರಿ ೩೧ ಜಿಲ್ಲೆಗಳ ಬದಲಿಗೆ ಆಯ್ದ ೧೫ ಜಿಲ್ಲೆಗಳ…