ದೇಶ- ವಿದೇಶ

ಮುಂಬೈ ಮಹಾನಗರ ಪಾಲಿಕೆಯ ನೂತನ ಮೇಯರ್‌ ಆಗಿ ಬಿಜೆಪಿಯ ರಿತು ತಾವ್ಡೆ ಆಯ್ಕೆ

ಮುಂಬೈ: ದೇಶದ ಅತ್ಯಂತ ಶ್ರೀಮಂತ ಮಹಾನಗರ ಪಾಲಿಕೆಯಾದ ಬೃಹತ್‌ ಮುಂಬೈ ಮಹಾನಗರ ಪಾಲಿಕೆಯಲ್ಲಿ ಐತಿಹಾಸಿಕ ಬದಲಾವಣೆ ಸಂಭವಿಸಿದೆ. ಕಳೆದ 25 ವರ್ಷಗಳಿಂದ ಪಾಲಿಕೆಯನ್ನು ಆಳುತ್ತಿದ್ದ ಶಿವಸೇನೆಯ ಕೈಯಿಂದ ಮೇಯರ್‌ ಪಟ್ಟ ಇದೀಗ ಬಿಜೆಪಿಯ ಪಾಲಾಗಿದೆ.

ಬಿಜೆಪಿ ರಿತುತಾವ್ಡೆ ಅವರು ಮುಂಬೈನ್‌ ನೂತನ ಮೇಯರ್‌ ಆಗಿ ಆಯ್ಕೆಯಾಗಿದ್ದಾರೆ.

1997ರಿಂದ ಸತತವಾಗಿ ಬಿಎಂಸಿಯಲ್ಲಿ ಅಧಿಕಾರ ಚಲಾಯಿಸುತ್ತಿದ್ದ ಶಿವಸೇನೆ ಕಾಲು ಶತಮಾನದ ನಂತರ ಮೊದಲ ಬಾರಿಗೆ ಮೇಯರ್‌ ಪಟ್ಟವನ್ನು ಕಳೆದುಕೊಂಡಿದೆ.

ಘಾಟ್ಕೋಪರ್‌ನ ಎರಡು ಬಾರಿಯ ಪಾರ್ಪೋರೇಟರ್‌ ಆಗಿರುವ ರಿತು ತಾವ್ಡೆ ಅವರು ಈ ಹಿಂದೆ ಬಿಎಂಸಿ ಶಿಕ್ಷಣ ಸಮಿತಿಯ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ. ಇದೀಗ ರಿತು ತಾವ್ಡೆ ಅವರು ಮುಂಬೈನ ನೂತನ ಮೇಯರ್‌ ಆಗಿ ಆಯ್ಕೆಯಾಗಿದ್ದಾರೆ.

ಇನ್ನು ಶಿವಸೇನೆಯ(ಏಕನಾಥ್‌ ಶಿಂಧೆ ಬಣ) ಸಂಜಯ್‌ ಶಂಕರ್‌ ಅವರು ಉಪಮೇಯರ್‌ ಆಗಿ ಆಯ್ಕೆಯಾಗಿದ್ದಾರೆ. ಅವರು 15 ತಿಂಗಳ ಕಾಲ ಈ ಹುದ್ದೆಯಲ್ಲಿ ಇರಲಿದ್ದು, ಶಿವಸೇನೆಯ ತನ್ನ ನಾಲ್ವರು ಕಾರ್ಪೋರೇಟರ್‌ಗಳಿಗೆ ಅವಕಾಶ ನೀಡಲು ಅಧಿಕಾರಾವಧಿಯನ್ನು ಹಂಚಿಕೆ ಮಾಡಿದೆ.

 

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಶುಶ್ರೂಷೆ ವೃತ್ತಿಗೆ ಮೆರುಗು ನೀಡಿದ ಫ್ಲಾರೆನ್ಸ್ ನೈಟಿಂಗೇಲ್

ಎನ್.ಹರೀಶ್ ಕುಮಾರ್ ಆರೋಗ್ಯ ಕ್ಷೇತ್ರದಲ್ಲಿ ಪ್ರಮುಖವಾಗಿ ಮುಂಚೂಣಿಯಲ್ಲಿ ಬರುವ ಹೆಸರೆಂದರೆ ಅದು ವೈದ್ಯ ವೃತ್ತಿ. ಆದರೆ ಒಬ್ಬ ರೋಗಿಯು ಗುಣಮುಖ…

3 hours ago

ಜನಮೆಚ್ಚುಗೆ ಗಳಿಸಿದ ರಾಜ್ಯಮಟ್ಟದ ಯಿಫಾ ಹಾಕಿ

ಲಕ್ಷ್ಮೀಕಾಂತ್ ಕೊಮಾರಪ್ಪ ಉತ್ತಮ ಪ್ರದರ್ಶನ ನೀಡಿದ ಎಜಿಒಆರ್‌ಸಿ ತಂಡ ಚಾಂಪಿಯನ್; ಸದರ್ನ್ ಕಮಾಂಡ್ ತಂಡಕ್ಕೆ ದ್ವಿತೀಯ ಬಹುಮಾನ ಸೋಮವಾರಪೇಟೆ: ಸುಮಾರು…

3 hours ago

ಮಾರುಕಟ್ಟೆ ಬಂದ್ ಭೀತಿ; ಹೊಗೆಸೊಪ್ಪು ತಂದ ರೈತರ ಪರದಾಟ

ಮಂಜು ಕೋಟೆ ಕೋಟೆ: ಹೆಬ್ಬಾಳ ತಂಬಾಕು ಹರಾಜು ಮಾರುಕಟ್ಟೆಯಲ್ಲಿ ಬೇಲ್‌ಗಳ ರಾಶಿ; ಮಳೆ ಬಂದರೆ ನಷ್ಟದ ಆತಂಕ ಎಚ್.ಡಿ.ಕೋಟೆ: ಮಾರುಕಟ್ಟೆ…

3 hours ago

ಬಂಡೀಪಾಳ್ಯದಲ್ಲಿ ರೇಷ್ಮೆಗೂಡು ಮಾರುಕಟ್ಟೆ ನಿರ್ಮಾಣ ಶೀಘ್ರ ಆರಂಭ

ಕೆ.ಬಿ.ರಮೇಶನಾಯಕ ಮೈಸೂರು, ಮಂಡ್ಯ, ಚಾಮರಾಜನಗರ ಜಿಲ್ಲೆಗಳ ರೈತರಿಗೆ ಅನುಕೂಲ ರೈತರು ರೇಷ್ಮೆ ಬೆಳೆಯತ್ತ ಮುಖ ಮಾಡಿರುವ ಪರಿಣಾಮ ಉತ್ಪಾದನೆಯಲ್ಲಿ ಹೆಚ್ಚಳ…

3 hours ago

ನೂರು ಸಾವಿರದ ಗಡಿ ದಾಟಿದ ಆಂದೋಲನ ಇನ್ ಸ್ಟಾ ಪೇಜ್ ಹಿಂಬಾಲಕರು

‘ಆಂದೋಲನ’ ಪತ್ರಿಕೆಯ ಹೊಸ ಡಿಜಿಟಲ್ ಮೈಲಿಗಲ್ಲಿಗೆ ಹರಿದು ಬಂದ ಹಾರೈಕೆಗಳು " ಒಂದು ಲಕ್ಷ ಹಿಂಬಾಲಕರು ತಲುಪಿರುವುದು ಕೂಡ ಹೊಸ…

3 hours ago

ದುಸ್ಥಿತಿಯಲ್ಲಿ ಸರ್ಕಾರಿ ಮಹಾರಾಜ ಸಂಸ್ಕೃತ ಪಾಠಶಾಲೆ ಕಟ್ಟಡ

ಪ್ರಶಾಂತ್ ಎಸ್. ಮೈಸೂರು: ಸಂಸ್ಕೃತ, ವೇದ, ಆಗಮ ಮತ್ತು ಶಾಸ್ತ್ರಗಳನ್ನು ಬೋಽಸುವ ಪ್ರಮುಖ ಸಾಂಪ್ರದಾಯಿಕ ಶಿಕ್ಷಣ ನೀಡುತ್ತಿರುವ ನಗರದ ಸರ್ಕಾರಿ…

4 hours ago