ದೇಶ- ವಿದೇಶ

ಲೋಕಸಭೆ ಚುನಾವಣೆ ಹಿನ್ನಡೆ ನಡುವೆಯೂ ನಡ್ಡಾಗೆ ಲಕ್:‌ ಡಿಸೆಂಬರ್‌ವರೆಗೂ ನಡ್ಡಾನೇ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಸರ್ಕಾರದಲ್ಲಿ ನಡ್ಡಾಗೆ ಆರೋಗ್ಯ, ರಾಸಾಯನಿಕಗಳು ಮತ್ತು ರಸಗೊಬ್ಬರಗಳ ಮಹತ್ವದ ಖಾತೆಯನ್ನು ನೀಡಲಾಗಿದ್ದು, ಬಿಜೆಪಿಗೆ ಈಗ ಅಧ್ಯಕ್ಷರ ಹುಡುಕಾಟ ನಡೆದಿದೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಅಧಿಕಾರಾವಧಿ ಜೂನ್‌ಗೆ ಮುಕ್ತಾಯವಾಗಿದೆ. ಇನ್ನು ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಮೂರನೇ ಬಾರಿಗೆ ಕೇಂದ್ರದಲ್ಲಿ ಸರ್ಕಾರ ರಚಿಸಿದೆ. ಪ್ರಧಾನಿ ನರೇಂದ್ರ ಮೋದಿ ಸರ್ಕಾರದಲ್ಲಿ ನಡ್ಡಾಗೆ ಆರೋಗ್ಯ, ರಾಸಾಯನಿಕಗಳು ಮತ್ತು ರಸಗೊಬ್ಬರಗಳ ಮಹತ್ವದ ಖಾತೆಯನ್ನು ನೀಡಲಾಗಿದೆ. ಹೀಗಾಗಿ ಬಿಜೆಪಿಗೆ ಈಗ ಅಧ್ಯಕ್ಷರ ಹುಡುಕಾಟ ನಡೆದಿದೆ.

ಈ ವರ್ಷದ ಡಿಸೆಂಬರ್‌ ವೇಳೆಗೆ ಹೊಸ ರಾಷ್ಟ್ರೀಯ ಅಧ್ಯಕ್ಷರನ್ನು ನೇಮಕ ಮಾಡುವ ಗುರಿಯನ್ನು ಬಿಜೆಪಿ ಹೊಂದಿದೆ. ಹೀಗಾಗಿ ಅಲ್ಲಿಯವರೆಗೂ ಜೆ.ಪಿ.ನಡ್ಡಾ ಅವರೇ ರಾಷ್ಟ್ರಾಧ್ಯಕ್ಷರಾಗಿ ಮುಂದುವರೆಯಲಿದ್ದಾರೆ.

ಬಿಜೆಪಿ ಪ್ರಕಾರ, ಪ್ರತಿಯೊಬ್ಬ ಸದಸ್ಯರು 9 ವರ್ಷಗಳಿಗೊಮ್ಮೆ ತಮ್ಮ ಸದಸ್ಯತ್ವವನ್ನು ನವೀಕರಿಸಬೇಕಾಗುತ್ತದೆ. ಈ ವರ್ಷ ಸದಸ್ಯತ್ವ ಅಭಿಯಾನವು ಪ್ರಧಾನಿ, ಅಧ್ಯಕ್ಷರು ಮತ್ತು ಎಲ್ಲಾ ಪಕ್ಷದ ನಾಯಕರು ತಮ್ಮ ಸದಸ್ಯತ್ವವನ್ನು ನವೀಕರಿಸುವ ಅಗತ್ಯವಿದೆ. ನವೆಂಬರ್.‌1ರಿಂದ ನವೆಂಬರ್.‌15 ರವರೆಗೆ ಬಿಜೆಪಿ ಮಂಡಲ ಅಧ್ಯಕ್ಷರ ಚುನಾವಣೆಯನ್ನು ನಡೆಸಲಿದೆ. ಇದಾದ ನಂತರ ನವೆಂಬರ್.‌16ರಿಂದ ನವೆಂಬರ್.‌30 ರವರೆಗೆ ಜಿಲ್ಲಾಧ್ಯಕ್ಷರ ಚುನಾವಣೆ ನಡೆಯಲಿದೆ.

ಈ ಚುನಾವಣೆಯ ನಂತರವೇ ರಾಜ್ಯಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ಆರಂಭವಾಗಲಿದೆ. ಡಿಸೆಂಬರ್.‌1ರಂದು ರಾಜ್ಯಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ಆರಂಭವಾಗಲಿದ್ದು, ಶೇ.50ರಷ್ಟು ರಾಜ್ಯಗಳಲ್ಲಿ ಚುನಾವಣೆ ಪೂರ್ಣಗೊಂಡ ಬಳಿಕ ರಾಷ್ಟ್ರೀಯ ಅಧ್ಯಕ್ಷರ ಆಯ್ಕೆಗೆ ಅಧಿಕೃತ ಪ್ರಕ್ರಿಯೆ ಆರಂಭವಾಗಲಿದೆ.

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ರಾಜ್ಯದ 2 ವಿಧಾನಸಭಾ ಉಪಚುನಾವಣೆಯ ಮತ ಎಣಿಕೆ ಶುರು

ಬೆಂಗಳೂರು: ರಾಜ್ಯದ ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತ ಎಣಿಕೆ ಕಾರ್ಯ ಶುರುವಾಗಿದೆ. ಅದೇ ರೀತಿ…

3 mins ago

ಭವಾನಿಪುರದಲ್ಲಿ ಭಾರೀ ಭದ್ರತೆ ; ಮತ ಎಣಿಕೆಗೂ ಮುನ್ನ ಗೆಲುವಿಗಾಗಿ ವಿಶೇಷ ಪೂಜೆ ಸಲ್ಲಿಸಿದ ದೀದಿ

ಕೊಲ್ಕತ್ತಾ : ಪಶ್ಚಿಮ ಬಂಗಾಳ ಚುನಾವಣೆ 2026ರ ಫಲಿತಾಂಶ ಹಿನ್ನೆಲೆಯಲ್ಲಿ, ಮಮತಾ ಬ್ಯಾನರ್ಜಿ ಭವಾನಿಪುರದ ಮಾ ಬಾಗಲಮುಖಿ ದೇವಸ್ಥಾನದಲ್ಲಿ ನಿನ್ನೆ…

22 mins ago

ಪಂಚರಾಜ್ಯ ಚುನಾವಣೆ ಫಲಿತಾಂಶ ; ಮತ ಎಣಿಕೆಗೆ ಕ್ಷಣಗಣನೆ

ಬೆಂಗಳೂರು : ಕರ್ನಾಟಕದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಸೇರಿದಂತೆ ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆ ಫಲಿತಾಂಶ ಇಂದು ಪ್ರಕಟವಾಗಲಿದೆ.…

31 mins ago

ವರ್ತನೆ ತಪ್ಪಿದರೆ ದಾಳಿ ನಿಶ್ಚಿತ : ಇರಾನ್‌ಗೆ ಟ್ರಂಪ್ ಖಡಕ್ ಎಚ್ಚರಿಕೆ

ವಾಷಿಂಗ್ಟನ್ : ಇರಾನ್ ತಪ್ಪು ವರ್ತನೆ ತೋರಿದರೆ ಮತ್ತೆ ಸೇನಾ ದಾಳಿ ಆರಂಭವಾಗಬಹುದು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್…

12 hours ago

ನಿಗದಿಗಿಂತ ಮುನ್ನವೇ ಮುಂಗಾರು ಮಳೆ : ಮೇ ಅಂತ್ಯಕ್ಕೆ ಕೇರಳ ಪ್ರವೇಶ

ಬೆಂಗಳೂರು : ಬಿರುಬೇಸಿಗೆಯಿಂದಾಗಿ ಬಳಲಿ ಬೆಂಡಾಗಿರುವ ಜನತೆಗೆ ಕೇಂದ್ರ ಹವಾಮಾನ ಇಲಾಖೆ ಸಿಹಿಸುದ್ದಿ ನೀಡಿದ್ದು, ಈ ಬಾರಿ ನಿಗದಿಗಿಂತ ಮುಂಚಿತವಾಗಿಯೇ…

12 hours ago