ಪಾಕ್‌ ಆಕ್ರಮಿತ ಪ್ರದೇಶವನ್ನು ಮರಳಿ ಪಡೆಯುವುದು ಬಿಜೆಪಿ ಬಯಕೆ: ಕಂಗನಾ ರಣಾವತ್‌

ಹೊಸದಿಲ್ಲಿ: ಪಾಕ್‌ ಆಕ್ರಮಿಸಿ ಪ್ರದೇಶವಾದ ಕಾಶ್ಮೀರವನ್ನು ಮರಳಿ ಪಡೆಯುವುದು ಬಿಜೆಪಿಯ ಬಯಕೆಯಾಗಿದೆ ಎಂದು ಬಿಜೆಪಿ ಸಂಸದೆ ಕಂಗನಾ ರಣಾವತ್‌ ತಿಳಿಸಿದ್ದಾರೆ.

ಉತ್ತರ ಪ್ರದೇಶದ ಮುಖ್ಯಮಂತ್ರಿ ಆದಿತ್ಯನಾಥ್‌ ಬಳಿಕ ʻಬಟೇಂಗೆ ತೊ ಕಟೆಂಗೆʼ ಘೋಷಣೆಯ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಯೋಗಿ ಅವರ ಹೇಳಿಕೆಯನ್ನು ಸಮರ್ಥಿಸಿದ್ದಾರೆ.  ಇದು ದೇಶದ ಒಗ್ಗಟ್ಟಿನ ಕರೆಯಾಗಿದೆ. ಒಗ್ಗಟ್ಟಿನಲ್ಲಿ ಬಲವಿದೆಂಬುದನ್ನು ನಮಗೆ ಬಾಲ್ಯದಿಂದಲೂ ಕಲಿಸಲಾಗಿದೆ. ನಾವು ಒಗ್ಗಟ್ಟಾಗಿದ್ದರೆ ನಮ್ಮ ದೇಶ ಸುರಕ್ಷಿತವಾಗಿರಲಿದೆ ಎಂದಿದ್ದಾರೆ.

ದೇಶ ವಿಭಜನೆಯಾದರೆ ತುಂಡರಿಸಿ ಹೋಗುತ್ತದೆ. ಪಾಕಿಸ್ತಾನ ಆಕ್ರಮಿಸಿಕೊಂಡಿರುವ ಕಾಶ್ಮೀರವನ್ನೂ ಮರಳಿ ಪಡೆಯಬೇಕೆಂದು ನಮ್ಮ ಸನಾತನ ಪಕ್ಷ ಬಯಸುತ್ತಿದೆ. ಹೀಗಾಗಿ ವಿಭಜನೆ ಮಾಡುವ ವಿರೋಧ ಪಕ್ಷಗಳ ಪಿತೂರಿಯು ವಿಫಲವಾಗಲಿದೆ ಎಂದು ಹೇಳಿದ್ದಾರೆ.

ಈ ಹಿಂದೆ ಯೋಗಿ ಆದಿತ್ಯನಾಥ್‌ ಅವರು ದೇಶದ ಒಗ್ಗಟ್ಟಿಗೆ ಕರೆ ನೀಡಿದ್ದರು. ನಮ್ಮ ಒಡಕಿನಿಂದಲೇ ರಾಮಮಂದಿರ ಧ್ವಂಸಗೊಳಿಸಿದ್ದರು ಎಂದು ಪ್ರತಿಪಾದಿಸಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಗುಂಡ್ಲುಪೇಟೆ| ಹೊನ್ನೇರು ಕಟ್ಟಿ ಯುಗಾದಿ ಹಬ್ಬ ಮಾಡಿದ ಗ್ರಾಮಸ್ಥರು

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಯುಗಾದಿ ಎಂದರೆ ಭಾರತೀಯರಿಗೆ ಹಿಂದೂ ಸಂಪ್ರದಾಯದಂತೆ ಹೊಸವರ್ಷ ಎಂಬುದು ಪ್ರತೀತಿ ಯುಗಾದಿಯ…

43 seconds ago

ಭಾರತೀಯ ಕರೆನ್ಸಿಗೆ ಐತಿಹಾಸಿಕ ಪೆಟ್ಟು: ಡಾಲರ್‌ ಎದುರು ರೂಪಾಯಿ ಮೌಲ್ಯ ಕುಸಿತ

ನವದೆಹಲಿ: ಜಾಗತಿಕ ರಾಜಕೀಯ ಉದ್ವಿಗ್ನತೆ ಹಾಗೂ ಕಚ್ಚಾ ತೈಲ ಬೆಲೆ ಏರಿಕೆಯ ಪರಿಣಾಮ ಭಾರತೀಯ ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ…

15 mins ago

ಮೈಸೂರಿನಲ್ಲಿ ಹೊಸತೊಡಕು ಸಂಭ್ರಮ: ಮಾಂಸದಂಗಡಿಯಲ್ಲಿ ಜನವೋ ಜನ

ಮೈಸೂರು: ಯುಗಾದಿ ಹಬ್ಬದ ಮಾರನೇ ದಿನವಾದ ಇಂದು ಹೊಸತೊಡಕಿನ ಸಂಭ್ರಮ ಮನೆಮಾಡಿದ್ದು, ಮಾಂಸ ಖರೀದಿಗೆ ಜನರು ಮುಗಿಬಿದ್ದಿದ್ದಾರೆ. ಯುಗಾದಿ ಹಾಗೂ…

59 mins ago

ಹಾಸನ: ಹಣಕಾಸು ವಿಚಾರಕ್ಕೆ ಯುವಕನ ಹತ್ಯೆ

ಹಾಸನ: ಹಣಕಾಸು ವಿಚಾರಕ್ಕೆ ಯುವಕನನ್ನು ಕರೆದೊಯ್ದು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಅರಸೀಕೆರೆ ತಾಲ್ಲೂಕಿನ ಚಿನ್ನೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ವರುಣ್‌ ಎಂಬಾತನೇ…

1 hour ago

ಯುದ್ಧದಲ್ಲಿ ನಾವು ಗೆಲ್ಲುತ್ತಿದ್ದೇವೆ: ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಸಂತಸ

ಜೆರುಸೇಲಂ: ಯುದ್ಧದಲ್ಲಿ ನಾವು ಗೆಲುವು ಸಾಧಿಸುತ್ತಿದ್ದು, ಇರಾನ್‌ ತೀವ್ರ ಹಾನಿಗೊಳಗಾಗುತ್ತಿದೆ ಎಂದು ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಹೇಳಿದ್ದಾರೆ. ಸಾವಿನ…

2 hours ago

ಅಧ್ಯಾಯ ಎರಡು ಇಲ್ಲಿಂದ ಶುರು: ನಟ ರಿಷಬ್‌ ಶೆಟ್ಟಿ ಮಾಹಿತಿ

ಕಾಂತಾರ ಚಾಪ್ಟರ್‌ 1 ಯಶಸ್ಸಿನಲ್ಲಿರುವ ನಟ ಹಾಗೂ ನಿರ್ದೇಶಕ ರಿಷಬ್‌ ಶೆಟ್ಟಿ ಯುಗಾದಿ ದಿನವೇ ಅಧ್ಯಾಯ ಎರಡು ಇಲ್ಲಿಂದ ಶುರು…

5 hours ago