ದೇಶ- ವಿದೇಶ

ಬಿಜೆಪಿ ದೇಶದ ಧ್ವಜವನ್ನು ಬದಲಾಯಿಸುತ್ತಾರೆ : ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ

ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ಸಂವಿಧಾನ ಮತ್ತು ಧ್ವಜವನ್ನು ಕಿತ್ತುಕೊಂಡಂತೆ ಅವರು (ಬಿಜೆಪಿ) ಈ ದೇಶದ ಧ್ವಜವನ್ನು ಬದಲಾಯಿಸುತ್ತಾರೆ  ಎಂದು ಪೀಪಲ್ಸ್‌ ಡೆಮಾಕ್ರಟಿಕ್‌ ಪಾರ್ಟಿ ಮುಖ್ಯಸ್ಥೆ ಹಾಗೂ ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಹೇಳಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ, ಬಿಜೆಪಿ ದೇಶದ ತ್ರಿವರ್ಣ ಧ್ವಜವನ್ನು ಕೇಸರಿ ಧ್ವಜವನ್ನಾಗಿ ಮಾಡಲು ಪ್ರಯತ್ನಿಸುತ್ತಿದೆ. ಆದರೆ, ನಾವು ನಮ್ಮ ಧ್ವಜ ಮತ್ತು ಸಂವಿಧಾನವನ್ನು ಹಿಂಪಡೆಯುತ್ತೇವೆ ಎಂದು ಪ್ರಮಾಣ ಮಾಡಿದ್ದೇವೆ. ಲಕ್ಷಗಟ್ಟಲೆ ಜನರು ಪ್ರಾಣ ತ್ಯಾಗ ಮಾಡಿದ ಕಾಶ್ಮೀರದ ಸಮಸ್ಯೆಯನ್ನು ಪರಿಹರಿಸುವಂತೆ ನಾವು ಅವರನ್ನು ಒತ್ತಾಯಿಸುತ್ತೇವೆ.ಮುಂಬರುವ ದಿನಗಳಲ್ಲಿ ಬಿಜೆಪಿಯು ಭಾರತ ದೇಶವನ್ನು ನಿರ್ಮಿಸಿರುವ ಸಂವಿಧಾನದ ತಳಹದಿಯನ್ನು ಮತ್ತು ಅದರ ಜಾತ್ಯತೀತತೆಯನ್ನು ನಾಶಪಡಿಸಲಿದೆ ಎಂದು ಅವರು ಹೇಳಿದರು. ಬಿಜೆಪಿ ಇದನ್ನು ಧಾರ್ಮಿಕ ದೇಶವನ್ನಾಗಿ ಮಾಡಲು ಬಯಸುತ್ತಿದೆ. ಜನರು ಇಂದು ಹೆಮ್ಮೆಯಿಂದ ಹಾರಿಸುತ್ತಿರುವ ತ್ರಿವರ್ಣ ಧ್ವಜವನ್ನು ಕೇಸರಿ ಧ್ವಜವನ್ನಾಗಿ ಪರಿವರ್ತಿಸಲು ಬಿಜೆಪಿ ಬಯಸುತ್ತಿದೆ ಎಂದು ಕಿಡಿಕಾರಿದರು.

2019 ಆಗಸ್ಟ್‌ 5 ರಾಜ್ಯದ ಪಾಲಿಗೆ ಕಪ್ಪು ದಿನ ಎಂದು ಹೇಳಿದ್ದಾರೆ. ಆ ದಿನ ಕೇಂದ್ರ ಸರ್ಕಾರ, ಜಮ್ಮು ಕಾಶ್ಮೀರಕ್ಕೆ ನೀಡಿದ್ದ ವಿಶೇಷಾಧಿಕಾರವನ್ನು ರದ್ದು ಮಾಡುವ ಮಹತ್ವದ ನಿರ್ಧಾರ ತೆಗೆದುಕೊಂಡಿತ್ತು. ಶ್ರೀನಗರದಲ್ಲಿ ಶುಕ್ರವಾರ ಈ ಕುರಿತಾಗಿ ಪ್ರತಿಭಟನೆ ನಡೆಸಿದ ಪಿಡಿಪಿ, ಸರ್ಕಾರಿ ವಿರೋಧಿ ಘೋಷಣೆಗಳನ್ನು ಕೂಗಿತು. ಪ್ರತಿಭಟನೆಯ ಮುಂದಾಳತ್ವ ವಹಿಸಿಕೊಂಡಿದ್ದ ಮೆಹಬೂಬಾ ಮುಫ್ತಿ, ಆಗಸ್ಟ್‌ 5 ಇಡೀ ಜಮ್ಮು ಕಾಶ್ಮೀರದ ಪಾಲಿಗೆ ಕಪ್ಪು ದಿನ. 370ನೇ ವಿಧಿಯನ್ನು ರದ್ದು ಮಾಡಿದ್ದು ಸರ್ಕಾರದ ಕಪ್ಪು ನಿರ್ಧಾರ ಎಂದು ಟೀಕೆ ಮಾಡಿದರು. ಮೂರು ವರ್ಷದ ಹಿಂದೆ ಮೋದಿ ಸರ್ಕಾರ ಜಮ್ಮು ಕಾಶ್ಮೀರದಲ್ಲಿ 370ನೇ ವಿಧಿಯನ್ನು ರದ್ದು ಮಾಡುವ ತೀರ್ಮಾನ ಮಾಡಿತ್ತು. ಅದರೊಂದಿಗೆ ಜಮ್ಮು ಕಾಶ್ಮೀರವನ್ನು ಇಬ್ಬಾಗ ಮಾಡುವ ನಿರ್ಧಾರವನ್ನು  ಮಾಡಲಾಗಿತ್ತು. ಜಮ್ಮು ಮತ್ತು ಕಾಶ್ಮೀರವನ್ನು ಎರಡು ಭಾಗ ಮಾಡಿ ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್‌ ಎನ್ನುವ ಎರಡು ಕೇಂದ್ರಾಡಳಿತ ಪ್ರದೇಶವನ್ನಾಗಿ ಮಾಡಿತ್ತು. ಪ್ರಸ್ತುತ ಜಮ್ಮು ಕಾಶ್ಮೀರಕ್ಕೆ ಚುನಾವಣೆ ನಡೆಸಿ ಅಲ್ಲಿನ ರಾಜ್ಯಾಧಿಕಾರವನ್ನು ವಾಪಾಸ್‌ ನೀಡುವ ಪ್ರಕ್ರಿಯೆಯಲ್ಲಿ ಕೇಂದ್ರ ಸರ್ಕಾರವಿದೆ.

ತಮ್ಮ ಕೈಯಲ್ಲಿ ಬ್ಯಾನರ್‌ ಹಿಡಿದುಕೊಂಡು ಪ್ರತಿಭಟನೆಯಲ್ಲಿ ಮೆಹಬೂಬಾ ಮುಫ್ತಿ ಭಾಗವಹಿಸಿದ್ದರು. ಅವರು ಹಿಡಿದಿದ್ದ ಬ್ಯಾನರ್‌ನಲ್ಲಿ, ‘ಕಾಲೆ ದಿನ್‌ ಕಾ ಕಾಲಾ ನಿಶ್ಚಯ್‌ ನಹೀ ಚಲೇಗಾ, ಸಾಲ್ವ್‌ ದ ಕಾಶ್ಮೀರ್‌ ಇಶ್ಯೂ’ ಎಂದು ಬರೆಯಲಾಗಿತ್ತು. ಅದರರ್ಥ, ಕಪ್ಪು ದಿನದ ಕಪ್ಪು ನಿರ್ಣಯ ನಡೆಯೋದಿಲ್ಲ. ಮೊದಲು ಕಾಶ್ಮೀರ ಸಮಸ್ಯೆ ಬಗೆಹರಿಸಿ ಎನ್ನುವುದಾಗಿತ್ತು.

 

 

andolana

Recent Posts

ಮುಡಾಗೆ ಆರ್ಥಿಕ ಸಂಕಷ್ಟ; 20 ಕೋಟಿ ರೂ ನಷ್ಟ

ಮೈಸೂರು: ಬದಲಿ ನಿವೇಶನ ಹಂಚಿಕೆ, ೫೦:೫೦ ಅನುಪಾತದಲ್ಲಿ ನಿವೇಶನ ಅಕ್ರಮ ಹಂಚಿಕೆ ಹಗರಣದಿಂದಾಗಿ ಇಡೀ ರಾಜ್ಯದ ಗಮನ ಸೆಳೆದಿರುವ ಮೈಸೂರು…

44 mins ago

ಆಂದೋಲನ ಫಲಶ್ರುತಿ: ಕೊನೆಗೂ ತೆರವಾಯ್ತು ಬೃಹತ್‌ ಮರದ ಕಾಂಡ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಜುಂಬೂ ಸವಾರಿ ಸಾಗುವ ಮಾರ್ಗದಲ್ಲಿ ಕಳೆದ ಎರಡೂ ವರ್ಷಗಳಿಂದ ಬಿದ್ದಿದ್ದ ಬೃಹತ್ ಮರದ ಕಾಂಡವನ್ನು…

55 mins ago

ಜಂಬೂ ಸವಾರಿ ಮಾರ್ಗದಲ್ಲಿ ಸಣ್ಣ ಬದಲಾವಣೆ

ಮೈಸೂರು: ಈ ಬಾರಿಯ ದಸರಾ ಮಹೋತ್ಸವದ ಜಂಬೂ ಸವಾರಿಯನ್ನು ವೀಕ್ಷಿಸಲು ಆಗಮಿಸಿದ ಎಲ್ಲರಿಗೂ ಚಿನ್ನದ ಅಂಬಾರಿ ನೋಡುವ ಅವಕಾಶ ಸಿಗಬೇಕು…

1 hour ago

ಪೈಲ್ವಾನರ ಕಸರತ್ತಿಗೆ ಗರಡಿ ಮನೆಗಳು ಸಜ್ಜು

ಮೈಸೂರು: ಸಾಂಸ್ಕೃತಿಕ ರಾಜಧಾನಿ, ಅರಮನೆಗಳ ನಗರಿ ಎಂದು ಕರೆಯುವ ಮೈಸೂರನ್ನು ಗರಡಿ ಮನೆಗಳ ನಗರಿ ಎಂದೂ ಇತ್ತೀಚಿನ ವರ್ಷಗಳಲ್ಲಿ ಕರೆಯುವುದು…

1 hour ago

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

9 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

11 hours ago