amith shah
ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಮೊದಲ ಹಂತದ ಚುನಾವಣೆ ನಡೆದ 152 ಸ್ಥಾನಗಳಲ್ಲಿ 110ಕ್ಕೂ ಹೆಚ್ಚು ಸ್ಥಾನಗಳನ್ನು ಬಿಜೆಪಿ ಗೆಲ್ಲಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಕೋಲ್ಕತ್ತಾದಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪಶ್ಚಿಮ ಬಂಗಾಳದಲ್ಲಿ ಈ ಬಾರಿ ದಾಖಲೆಯ ಮತದಾನ ನಡೆದಿದೆ. ಇದು ರಾಜ್ಯದಲ್ಲಿ ಪರಿವರ್ತನೆಯ ಸ್ಪಷ್ಟ ಸಂಕೇತ ಹಾಗೂ ಬಿಜೆಪಿಗೆ ಪೂರಕವಾದ ಜನಾದೇಶವಾಗಿದೆ ಎಂದರು.
ಬಿಜೆಪಿ ಗೆಲ್ಲುವ ಮೂಲಕ ಭಯ ನಿರ್ಗಮಿಸಲಿದೆ, ಭರವಸೆ ಆಗಮಿಸಲಿದೆ. ಬಂಗಾಳ ಅಭಿವೃದ್ಧಿಯನ್ನು ಆಯ್ಕೆ ಮಾಡಿದೆ. ಬಿಜೆಪಿ ಪೂರ್ಣ ಬಹುಮತದೊಂದಿಗೆ ಸರ್ಕಾರ ರಚನೆ ಮಾಡಲು ಸಿದ್ಧವಾಗಲಿದೆ ಎಂದು ಹೇಳಿದರು.
ಬಿಜೆಪಿಯ ಮುಂದಿನ ಸಿಎಂ ಹೊರಗಿನವರಲ್ಲ, ಬದಲಿಗೆ ಬಂಗಾಳದ ಮಣ್ಣಿನ ಮಗನೇ ಆಗಿರುತ್ತಾರೆ. ಬಿಜೆಪಿ ಅಧಿಕಾರಕ್ಕೆ ಬಂದರೆ ಅಕ್ರಮ ವಲಸಿಗರನ್ನು ಆಯ್ದು ಹೊರಹಾಕಲಾಗುವುದು ಮತ್ತು ಗಡಿಯ ಮೂಲಕ ಒಂದು ಅಕ್ರಮ ಹಕ್ಕಿಯೂ ಹಾರದಂತೆ ಅತೀ ಕಟ್ಟುನಿಟ್ಟಿನ ನೀತಿ ಜಾರಿಗೆ ತರುವುದಾಗಿ ಭರವಸೇ ನೀಡಿದ್ದಾರೆ.
ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…
ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…
ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…
ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್‌ಎಸ್‌ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…
ಎಸ್.ಎಸ್.ಭಟ್ ಕೃಷ್ಣಾಪುರ-ದೊಡ್ಡಹುಂಡಿ ಗ್ರಾಮಗಳ ನಡುವೆ ವಿವಾದ ನಂಜನಗೂಡು: ಕೆರೆ ನೀರಿನ ವಿಚಾರವಾಗಿ ನಂಜನಗೂಡು ತಾಲ್ಲೂಕಿನ ಕೃಷ್ಣಾಪುರ ಹಾಗೂ ಗುಂಡ್ಲುಪೇಟೆ ತಾಲ್ಲೂಕಿನ…
ಹೇಮಂತ್‌ಕುಮಾರ್ ಎಚ್ಚರ ತಪ್ಪಿದರೆ ಬಿದ್ದು ಕೈಕಾಲು ಮುರಿದುಕೊಳ್ಳುವುದು ಖಚಿತ ಮಂಡ್ಯ: ನಗರದ ಜಯಚಾಮರಾಜ ವೃತ್ತ(ಸಂಜಯ ಸರ್ಕಲ್)ದಿಂದ ಹೊಳಲು ವೃತ್ತ, ಪೇಟೆ…