Mysore
18
scattered clouds

Social Media

ಬುಧವಾರ, 10 ಡಿಸೆಂಬರ್ 2025
Light
Dark

ಹರಿಯಾಣದಲ್ಲಿ ಹ್ಯಾಟ್ರಿಕ್‌ ಗೆಲುವು ಸಾಧಿಸಿದ ಬಿಜೆಪಿ

ಚಂಡೀಗಢ: ಹರಿಯಾಣ ವಿಧಾನಸಭಾ ಚುನಾವಣೆ ಫಲಿತಾಂಶ ಇಂದು ಪ್ರಕಟಗೊಂಡಿದ್ದು, ಆಡಳಿತಾರೂಢ ಬಿಜೆಪಿ ಹ್ಯಾಟ್ರಿಕ್‌ ಗೆಲುವು ಸಾಧಿಸಿದೆ.

90 ಸದಸ್ಯ ಬಲದ ಹರಿಯಾಣ ವಿಧಾನಸಭೆಯಲ್ಲಿ ಬಹುಮತಕ್ಕೆ ಬೇಕಾಗಿದ್ದ ಮ್ಯಾಜಿಕ್‌ ನಂಬರ್ 46ನ್ನು ಬಿಜೆಪಿ ದಾಟಿದ್ದು, ಹ್ಯಾಟ್ರಿಕ್‌ ಗೆಲುವಿನತ್ತ ಹೆಜ್ಜೆ ಹಾಕಿದೆ.

ಆರಂಭಿಕ ಟ್ರೆಂಡ್‌ ಪ್ರಕಾರ ಕಾಂಗ್ರೆಸ್‌ ಮುನ್ನಡೆಯಲ್ಲಿತ್ತು. ಕಾಂಗ್ರೆಸ್‌ 51ಕ್ಕೂ ಹೆಚ್ಚು ಸ್ಥಾನಗಳಲ್ಲಿ ಮುನ್ನಡೆ ಗಳಿಸಿ ಕಾಂಗ್ರೆಸ್‌ ಪಾಳಯದಲ್ಲಿ ಸಂಭ್ರಮಾಚರಣೆ ಕೂಡ ಶುರುವಾಗಿತ್ತು.

ಆದರೆ ಕೆಲವೇ ಹೊತ್ತಿನಲ್ಲಿ ಟ್ರೆಂಡ್‌ ಬದಲಾಗಿದ್ದು, ಕಾಂಗ್ರೆಸ್‌ನ್ನು ಹಿಂದಿಕ್ಕಿದ ಬಿಜೆಪಿ ಮುನ್ನಡೆ ಸಾಧಿಸಿ ಸರಳ ಬಹುಮತ ಪಡೆದು ಗೆಲುವಿನ ನಗೆ ಬೀರಿದೆ.

ಬಿಜೆಪಿ 50ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದರೆ, ಕಾಂಗ್ರೆಸ್‌ 35 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.

ಹರಿಯಾಣದಲ್ಲಿ ಬಿಜೆಪಿ ಹ್ಯಾಟ್ರಿಕ್‌ ಗೆಲುವಿನತ್ತ ದಾಪುಗಾಲಿಟ್ಟಿರುವ ಹಿನ್ನೆಲೆಯಲ್ಲಿ ಸಂಜೆ 7 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿಯ ಬಿಜೆಪಿ ಕಚೇರಿಯಲ್ಲಿ ಕಾರ್ಯಕರ್ತರನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.

 

Tags:
error: Content is protected !!