ಚಂಡೀಗಢ: ಹರಿಯಾಣ ವಿಧಾನಸಭಾ ಚುನಾವಣೆ ಫಲಿತಾಂಶ ಇಂದು ಪ್ರಕಟಗೊಂಡಿದ್ದು, ಆಡಳಿತಾರೂಢ ಬಿಜೆಪಿ ಹ್ಯಾಟ್ರಿಕ್ ಗೆಲುವು ಸಾಧಿಸಿದೆ.
90 ಸದಸ್ಯ ಬಲದ ಹರಿಯಾಣ ವಿಧಾನಸಭೆಯಲ್ಲಿ ಬಹುಮತಕ್ಕೆ ಬೇಕಾಗಿದ್ದ ಮ್ಯಾಜಿಕ್ ನಂಬರ್ 46ನ್ನು ಬಿಜೆಪಿ ದಾಟಿದ್ದು, ಹ್ಯಾಟ್ರಿಕ್ ಗೆಲುವಿನತ್ತ ಹೆಜ್ಜೆ ಹಾಕಿದೆ.
ಆರಂಭಿಕ ಟ್ರೆಂಡ್ ಪ್ರಕಾರ ಕಾಂಗ್ರೆಸ್ ಮುನ್ನಡೆಯಲ್ಲಿತ್ತು. ಕಾಂಗ್ರೆಸ್ 51ಕ್ಕೂ ಹೆಚ್ಚು ಸ್ಥಾನಗಳಲ್ಲಿ ಮುನ್ನಡೆ ಗಳಿಸಿ ಕಾಂಗ್ರೆಸ್ ಪಾಳಯದಲ್ಲಿ ಸಂಭ್ರಮಾಚರಣೆ ಕೂಡ ಶುರುವಾಗಿತ್ತು.
ಆದರೆ ಕೆಲವೇ ಹೊತ್ತಿನಲ್ಲಿ ಟ್ರೆಂಡ್ ಬದಲಾಗಿದ್ದು, ಕಾಂಗ್ರೆಸ್‌ನ್ನು ಹಿಂದಿಕ್ಕಿದ ಬಿಜೆಪಿ ಮುನ್ನಡೆ ಸಾಧಿಸಿ ಸರಳ ಬಹುಮತ ಪಡೆದು ಗೆಲುವಿನ ನಗೆ ಬೀರಿದೆ.
ಬಿಜೆಪಿ 50ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದರೆ, ಕಾಂಗ್ರೆಸ್ 35 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.
ಹರಿಯಾಣದಲ್ಲಿ ಬಿಜೆಪಿ ಹ್ಯಾಟ್ರಿಕ್ ಗೆಲುವಿನತ್ತ ದಾಪುಗಾಲಿಟ್ಟಿರುವ ಹಿನ್ನೆಲೆಯಲ್ಲಿ ಸಂಜೆ 7 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿಯ ಬಿಜೆಪಿ ಕಚೇರಿಯಲ್ಲಿ ಕಾರ್ಯಕರ್ತರನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.
ದಾ.ರಾ. ಮಹೇಶ್ ವೀರನಹೊಸಹಳ್ಳಿ: ತಾಲ್ಲೂಕಿನ ಬನ್ನಿಕುಪ್ಪೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿತ್ಯ ಅವರೆಕಾಯಿ ಮಾರಾಟದಿಂದಾಗಿ ಟ್ರಾಫಿಕ್ ಜಾಮ್ ಆಗುತ್ತಿದ್ದು, ವಾಹನಗಳ ಸಂಚಾರಕ್ಕೆ…
ಮಂಡ್ಯ: ಇಂದಿನಿಂದ ( ಡಿಸೆಂಬರ್ 20 ) ಮೂರು ದಿನಗಳ ಕಾಲ ನಡೆಯಲಿರುವ 87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ…
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…