rahulgandhi
ಬೆಂಗಳೂರು: ಕಳೆದ ವಿಧಾನಸಭಾ ಚುನಾವಣೆ ವೇಳೆ ಬಿಜೆಪಿ ಸರ್ಕಾರದ ವಿರುದ್ಧ ಅಪಪ್ರಚಾರದ ಜಾಹೀರಾತು ನೀಡಿದ ಪ್ರಕರಣದಲ್ಲಿ ಲೋಕಸಭೆಯ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಮೇಲೆ ದಾಖಲಾಗಿದ್ದ ದೂರನ್ನು ಹೈಕೋರ್ಟ್ ರದ್ದುಪಡಿಸಿದೆ.
ಅವರ ವಿರುದ್ಧ ದಾಖಲಾಗಿದ್ದ ಖಾಸಗಿ ದೂರನ್ನು ಕರ್ನಾಟಕ ಹೈಕೋರ್ಟ್ ಮಂಗಳವಾರ ರದ್ದುಪಡಿಸಿ ಆದೇಶಿಸಿದೆ. ಇದರೊಂದಿಗೆ ರಾಹುಲ್ ಗಾಂಧಿ ನಿರಾಳರಾದಂತಾಗಿದೆ.
ಕರ್ನಾಟಕ ವಿಧಾನಸಭೆ ಚುನಾವಣೆಗೂ ಮುನ್ನ ಮುಖ್ಯ ವಾಹಿನಿಯ ಆಂಗ್ಲ ಮತ್ತು ಕನ್ನಡ ದಿನಪತ್ರಿಕೆಗಳ ಮುಖಪುಟದಲ್ಲಿ ಅಂದಿನ ಬಿಜೆಪಿ ಸರ್ಕಾರದ ವಿರುದ್ಧ ಸರಣಿ ಆರೋಪಗಳನ್ನು ಮಾಡಿ ಕಾಂಗ್ರೆಸ್ ಜಾಹೀರಾತು ನೀಡಿದ್ದನ್ನು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಹಂಚಿಕೊಂಡ ಆರೋಪದ ಕುರಿತು ಬಿಜೆಪಿಯು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಹೂಡಿದ್ದ ಮಾನಹಾನಿ ಪ್ರಕರಣವನ್ನು ರದ್ದುಪಡಿಸಿದೆ.
ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಸಂಜ್ಞೇ ಪರಿಗಣಿಸಿರುವ ಆದೇಶ ರದ್ದತಿ ಕೋರಿ ರಾಹುಲ್ ಗಾಂಧಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಸ್ ಸುನೀಲ್ ದತ್ ಯಾದವ್ ಅವರ ಏಕಸದಸ್ಯ ಪೀಠ ಪುರಸ್ಕರಿಸಿದೆ.
ವಿಚಾರಣಾಧೀನ ನ್ಯಾಯಾಲಯದಲ್ಲಿನ ಪ್ರಕ್ರಿಯೆ ಮುಂದುವರಿಕೆಯು ಕಾನೂನು ಪ್ರಕ್ರಿಯೆಯ ದುರ್ಬಳಕೆಯಾಗಲಿದೆ. ಹೀಗಾಗಿ, 4ನೇ ಆರೋಪಿ ರಾಹುಲ್ ಗಾಂಧಿ ವಿರುದ್ಧದ ಪ್ರಕ್ರಿಯೆ ಬದಿಗೆ ಸರಿಸಲಾಗಿದೆ” ಎಂದು ನ್ಯಾಯಾಲಯ ಆದೇಶಿಸಿತು.
ಕಾಡುವುದು ಅನುಮಾನ! ಈಗ ಎಲ್ಲೆಲ್ಲೂ ಕೃತಕ ಬುದ್ಧಿಮತ್ತೆಯದೆ ಸುದ್ದಿ! ಕೃತಕ ಬುದ್ಧಿಮತ್ತೆಗೆ ನೈಜ ಬುದ್ಧಿಮತ್ತೆ ಮೂಲವಾದರೂ ಕಾಡುವುದು ಅನುಮಾನ ಕೃತಕ…
ಇಂದಿನ ತಾಂತ್ರಿಕ ಯುಗದಲ್ಲಿ ಸರ್ಕಾರಗಳು ಕೇವಲ ನಿಯಂತ್ರಕರಾಗಿ ಉಳಿಯದೆ, ಮಾರ್ಗದರ್ಶಕ ಶಕ್ತಿಯಾಗಿಯೂ ಕಾರ್ಯನಿರ್ವಹಿಸಬೇಕಿದೆ. ಮೊದಲನೆಯದಾಗಿ ಶಿಕ್ಷಣ ವ್ಯವಸ್ಥೆಯಲ್ಲಿ ಮೂಲಭೂತ ಬದಲಾವಣೆ…
ಉಚಿತ ಕೊಡುಗೆ ಪ್ರಕಟಿಸುವ ರಾಜಕೀಯ ಪಕ್ಷಗಳ ನಡೆಗೆ ಕಳೆದ ಗುರುವಾರ ಸುಪ್ರೀಂ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿರುವುದು ಸ್ವಾಗತಾರ್ಹವಾಗಿದೆ. ಚುನಾವಣೆ ವೇಳೆ…
ಪ್ರಶಾಂತ್ ಎನ್.ಮಲ್ಲಿಕ್ ಇಂದಿನಿಂದ ಬಂಡೀಪುರ-ನಾಗರಹೊಳೆ ರಾಷ್ಟ್ರೀಯ ಉದ್ಯಾನವನಗಳಲ್ಲಿ ವನ್ಯಜೀವಿ ಸಫಾರಿ ಪುನರಾರಂಭ ಮೈಸೂರು: ಬಂಡೀಪುರ ಹಾಗೂ ನಾಗರಹೊಳೆ ರಾಷ್ಟ್ರೀಯ ಉದ್ಯಾನವನಗಳಲ್ಲಿ…
ಮಹಾದೇಶ್ ಎಂ.ಗೌಡ ಮಲೆ ಮಹದೇಶ್ವರ ಬೆಟ್ಟಕೆ ಆಗಮಿಸಿದ ಲಕ್ಷಾಂತರ ಭಕ್ತಾದಿಗಳಿಂದ ಕಾಣಿಕೆ ಅರ್ಪಣೆ ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ…
ಕೆ.ಬಿ.ರಮೇಶನಾಯಕ ಮೈಸೂರು ಜಿಲ್ಲೆಯಲ್ಲಿ ೫೧ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಅಳವಡಿಕೆ ಪರೀಕ್ಷಾ ಕೇಂದ್ರಗಳ ವೀಕ್ಷಣೆಗೆ ೧೦ ಉಪನ್ಯಾಸಕರ ತಂಡ ರಚನೆ…