ಹೊಸದಿಲ್ಲಿ : ಸೋಮವಾರ ಸಂಜೆ ದೆಹಲಿಯ ಐತಿಹಾಸಿಕ ಕೆಂಪುಕೋಟೆ ಬಳಿ ಕಾರು ಸ್ಫೋಟಗೊಂಡಿದ್ದು, ಪ್ರದೇಶದಲ್ಲಿ ತೀವ್ರ ಆತಂಕ ಸೃಷ್ಟಿಸಿದೆ. ಸ್ಫೋಟಕ್ಕೆ ನಿಖರ ಕಾರಣ ಇನ್ನೂ ಸ್ಪಷ್ಟವಾಗಿಲ್ಲ.
ವರದಿಗಳ ಪ್ರಕಾರ ಸೋಮವಾರ ಸಂಜೆ ದೆಹಲಿಯ ಐತಿಹಾಸಿಕ ಕೆಂಪು ಕೋಟೆ ಬಳಿ ನಿಲ್ಲಿಸಿದ್ದ ಕಾರಿನಲ್ಲಿ ಸಂಭವಿಸಿದ ಪ್ರಬಲ ಸ್ಫೋಟವು ಕೋಲಾಹಲಕ್ಕೆ ಕಾರಣವಾಗಿದ್ದು, ಇದರ ಹತ್ತಿರದ ಬಳಿ ಇದ್ದ ಮೂರು ವಾಹನಗಳಿಗೆ ಬೆಂಕಿ ಕಾಣಿಸಿಕೊಂಡಿದೆ. ಇದರೊಂದಿಗೆ ಸ್ಪೋಟವಾದ ಕಾರಿನ ಹತ್ತಿರವಿದ್ದ ಅಂಗಡಿಯ ಬಾಗಿಲು ಮತ್ತು ಕಿಟಕಿಗಳು ಒಡೆದು ಆ ಪ್ರದೇಶದಲ್ಲಿ ಭೀತಿಯನ್ನುಂಟುಮಾಡಿದೆ.
ಇದನ್ನೂ ಓದಿ:-ವಿಧಾನಸೌಧದಲ್ಲಿ ಉಗ್ರರಿದ್ದಾರೆ : ತಮ್ಮ ಹೇಳಿಕೆ ಸಮರ್ಥಿಸಿಕೊಂಡ ಎಚ್.ಡಿ. ಕುಮಾರಸ್ವಾಮಿ ಮಾರ್ಮಿಕವಾಗಿ ಹೇಳಿದ್ದೇನು..?
ಸ್ಫೋಟದ ನಿಖರವಾದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ. ದೆಹಲಿ ಪೊಲೀಸರು ಮತ್ತು ಬಾಂಬ್ ನಿಷ್ಕ್ರಿಯ ದಳ ತಂಡಗಳು ಸ್ಥಳದಲ್ಲಿದ್ದು ತನಿಖೆ ನಡೆಸುತ್ತಿವೆ. ಯಾವುದೇ ಸಾವುನೋವುಗಳು ವರದಿಯಾಗಿಲ್ಲ, ಆದರೆ ಭದ್ರತೆಯನ್ನು ಹೈ ಅಲರ್ಟ್ ಮಾಡಲಾಗಿದೆ.





