lawyer
ಹೊಸದಿಲ್ಲಿ : ಅಂಧ ಮಹಿಳೆ ವಕೀಲರೊಬ್ಬರು ಇದೇ ಮೊದಲ ಬಾರಿಗೆ ಸುಪ್ರೀಂ ಕೋರ್ಟ್ ಕಲಾಪಕ್ಕೆ ಹಾಜರಾಗಿದ್ದಾರೆ. ಇದು ಸುಪ್ರೀಂ ಕೋರ್ಟ್ ಇತಿಹಾಸದಲ್ಲಿ ಅಂಗವಿಕಲರ ಪ್ರಾತಿನಿಧ್ಯಕ್ಕೆ ಮಹತ್ವದ ಮೈಲಿಗಲ್ಲಾಗಿದೆ.
ಹುಟ್ಟುವಾಗಲೇ ದೃಷ್ಟಿ ದೋಷವನ್ನು ಹೊಂದಿದ್ದ ಅಂಚಲ್ ಭತೇಜಾ ನಂತರ ರೆಟಿನೋಪತಿಯಿಂದಾಗಿ ಸಂಪೂರ್ಣವಾಗಿ ದೃಷ್ಟಿಯನ್ನು ಕಳೆದುಕೊಂಡರು. ಜೂನ್ 6 ರಂದು ಅವರು ಅರ್ಜಿದಾರರ ಪರವಾಗಿ ಸುಪ್ರೀಂ ಕೋರ್ಟ್‌ಮುಂದೆ ಹಾಜರಾಗಿದ್ದರು.
ಉತ್ತರಾಖಂಡ ಸಿವಿಲ್ ನ್ಯಾಯಾಧೀಶರ ನೇಮಕಾತಿಗಾಗಿ ಹೊರಡಿಸಲಾದ ಜಾಹೀರಾತಿನ ಸಾಂವಿಧಾನಿಕತೆಯನ್ನು ಪ್ರಶ್ನಿಸುವ ಅರ್ಜಿದಾರರ ಪರವಾಗಿ ಭತೇಜಾ ಮೊದಲ ಬಾರಿಗೆ ಸುಪ್ರೀಂ ಕೋರ್ಟ್ ಮುಂದೆ ಹಾಜರಾಗಿದ್ದರು. ನ್ಯಾಯಮೂರ್ತಿ ಸಂಜಯ್ ಕರೋಲ್ ಮತ್ತು ನ್ಯಾಯಮೂರ್ತಿ ಎಸ್.ಸಿ ಶರ್ಮಾ ಅವರ ಪೀಠದ ಮುಂದೆ ಹಾಜರಾಗಿ ವಿಷಯವನ್ನು ಪ್ರಸ್ತಾಪಿಸಿದರು. ಜೂನ್ 9 ಕ್ಕೆ ಈ ಬಗ್ಗೆ ವಿಚಾರಣೆಗೆ ಪಟ್ಟಿ ಮಾಡುವಂತೆ ನ್ಯಾಯಾಲಯವು ಒಪ್ಪಿಕೊಂಡಿತು.
ಶಾಲಾ ಶಿಕ್ಷಣವನ್ನು ಆಡಿಯೋಬುಕ್‌ಗಳ ಸಹಾಯದಿಂದ ಪರ್ಣಗೊಳಿಸಿದ ಭತೇಜಾ 2023ರಲ್ಲಿ ಕಾನೂನು ಪದವಿಯನ್ನು ಪೂರ್ಣಗೊಳಿಸಿದರು.
ಸುಪ್ರೀಂ ಕೋರ್ಟ್‌ಗೆ ಹಾಜರಾದ ಅನುಭವವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರು ಅವರು, ಇದು ಸಂತೋಷ ಮತ್ತು ದುಖಃ ಎರಡನ್ನು ತರುವ ಕ್ಷಣವಾಗಿದೆ. ನಾನು ಇಲ್ಲಿದ್ದೇನೆ ಎಂದು ಹೆಮ್ಮೆಪಡುತ್ತೇನೆ. ಆದರೆ, ನಾನು ಮೊದಲಿಗಳಾಗಿದ್ದರೆ ಎಷ್ಟು ಚೆನ್ನಾಗಿರುತ್ತಿತ್ತು ಎಂದು ನನಗೆ ಅನಿಸುತ್ತಿದೆ ಎಂದು ಬರೆದುಕೊಂಡಿದ್ದಾರೆ.
ಬೆಂಗಳೂರು: ನಾವು ಮುಂದಿನ ದಿನಗಳಲ್ಲಿ ಅಧಿಕಾರಕ್ಕೆ ಬಂದರೆ ಎಚ್.ಡಿ.ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡುತ್ತೇವೆ ಎಂದು ವಿಜಯೇಂದ್ರ ಹಾಗೂ ಆರ್.ಅಶೋಕ್ ಹೇಳಲಿ…
ಬೆಂಗಳೂರು: ಮನರೇಗಾ ಯೋಜನೆಯ ಹೆಸರನ್ನು ವಿಬಿ ಜೀ ರಾಮ್ ಜೀ ಎಂದು ಬದಲಾವಣೆ ಮಾಡಿದ ಕೇಂದ್ರ ಸರ್ಕಾರದ ನಡೆ ವಿರುದ್ಧ…
ಮೈಸೂರು: ವಿಧಾನಮಂಡಲ ಜಂಟಿ ಅಧಿವೇಶನದ ದಿನದಂದು ರಾಜ್ಯಪಾಲರ ವಿರುದ್ಧ ರಾಜ್ಯ ಕಾಂಗ್ರೆಸ್ ಸರ್ಕಾರ ನಡೆದುಕೊಂಡ ಕ್ರಮ ಕರ್ನಾಟಕದ ಇತಿಹಾಸದಲ್ಲೇ ನಡೆದ…
ಮ್ಯಾನ್ಮಾರ್ ಗಡಿಯಲ್ಲಿ ಭಾರತೀಯ ಸೇನೆ ನಡೆಸಿದ ಅತ್ಯಂತ ಸಾಹಸಮಯ ಕೋವರ್ಟ್ ಆಪರೇಷನ್ ವಿವರಗಳು ಈಗ ಬೆಳಕಿಗೆ ಬಂದಿವೆ. ಕಳೆದ ವರ್ಷ…
ಡಾಕಾ: ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದೂ ವ್ಯಕ್ತಿಯನ್ನು ಜೀವಂತವಾಗಿ ಸುಟ್ಟು ಹಾಕಲಾಗಿದೆ. ಕುಟುಂಬವು ಇದನ್ನು ಯೋಜಿತ ಕೊಲೆ ಎಂದು ಆರೋಪಿಸಿದೆ. ಬಾಂಗ್ಲಾದೇಶದ…
ಮೈಸೂರು: ಕೌಟುಂಬಿಕ ಕಲಹದಿಂದ ಬೇಸತ್ತು ಇಬ್ಬರು ಮಕ್ಕಳನ್ನು ತಾಯಿ ಹತ್ಯೆ ಮಾಡಿ, ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರು…