Mysore
23
broken clouds

Social Media

ಮಂಗಳವಾರ, 25 ಆಗಸ್ಟ್ 2026
Light
Dark

ವಿಯೆಟ್ನಾಂ ದ್ವೀಪದಲ್ಲಿ 32 ಭಾರತೀಯ ಪ್ರವಾಸಿಗರಿದ್ದ ಬೋಟ್‌ ಮುಳುಗಡೆ: 15 ಮಂದಿ ಸಾವು

ಹನೋಯ್:‌ ವಿಯೆಟ್ನಾಂ ಫು ಕ್ವಾಕ್‌ ದ್ವೀಪದ ಬಳಿ 32 ಮಂದಿ ಭಾರತೀಯ ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ಸ್ಪೀಡ್‌ ಬೋಟ್‌ ಮುಳುಗಡೆಯಾಗಿದ್ದು, ಕನಿಷ್ಠ 15 ಮಂದಿ ಸಾವನ್ನಪ್ಪಿದ್ದಾರೆ.

ಘಟನೆ ಬಳಿಕ ಸ್ಥಳೀಯ ಅಧಿಕಾರಿಗಳು ವ್ಯಾಪಕ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

ಘಟನೆಯಲ್ಲಿ 32 ಭಾರತೀಯರ ಪೈಕಿ 15 ಮಂದಿ ಸಾವನ್ನಪ್ಪಿದ್ದಾರೆ. ವಿಯೆಟ್ನಾಂ ಅಧಿಕಾರಿಗಳು ಈವರೆಗೆ ಯಾವುದೇ ಜೀವಹಾನಿಯನ್ನು ದೃಢಪಡಿಸಿಲ್ಲ. ಒಟ್ಟಿನಲ್ಲಿ ಭಾರತೀಯರಿದ್ದ ಬೋಟ್‌ ಮುಳುಗಡೆಯಾಗಿರುವ ವಿಡಿಯೋಗಳು ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿವೆ.

Tags:
error: Content is protected !!