ಮುಂಬೈ: ಬಾಲಿವುಡ್ ನಟ ಸೈಫ್ ಅಲಿ ಖಾನ್ ಮೇಲೆ ಚಾಕು ಇರಿದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಪೊಲೀಸರು ನಾಲ್ವರು ಶಂಕಿತರನ್ನು ಬಂಧಿಸಿದ್ದಾರೆ.
ಮುಂಬೈನ ಬಾಂದ್ರಾದಲ್ಲಿ ಸೈಫ್ ಅಲಿ ಖಾನ್ ಮೇಲೆ ತಡರಾತ್ರಿ 2 ಗಂಟೆಯ ಸಮಯದಲ್ಲಿ ದಾಳಿ ನಡೆದಿದ್ದು, ದರೋಡೆಗೆ ಬಂದಿದ್ದ ಕಿಡಿಗೇಡಿಗಳಿಂದ ಈ ಕೃತ್ಯ ಜರುಗಿದೆ.
ಸದ್ಯ ನಟನಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಪತ್ನಿ ಕರೀನಾ ಕಪೂರ್ ಹಾಗೂ ಇಬ್ಬರು ಮಕ್ಕಳು ಸೇಫ್ ಆಗಿದ್ದಾರೆ ಎಂದು ಹೇಳಲಾಗುತ್ತಿದೆ.
ಇನ್ನು ಘಟನೆ ನಡೆಯುತ್ತಿದ್ದಂತೆ ಸೈಫ್ ಅಲಿ ಖಾನ್ ನಿವಾಸಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಮುಂಬೈ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇನ್ನು ಪ್ರಕರಣ ಸಂಬಂಧ ನಟ ಸೈಫ್ ಅಲಿ ಖಾನ್ ಮೇಲೆ ದಾಳಿ ನಡೆಸಿರುವ ಆರೋಪದ ಮೇಲೆ ನಾಲ್ವರು ಶಂಕಿತರನ್ನು ಮುಂಬೈ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಕ್ರೈಂ ಬ್ರ್ಯಾಂಚ್ ಪೊಲೀಸರು ತನಿಖೆ ಚುರುಕುಗೊಳಿಸಿದ್ದು, ಪ್ರಕರಣದ ಹೆಚ್ಚಿನ ಮಾಹಿತಿ ಹೊರಬರಬೇಕಿದೆ.
ಮೈಸೂರು : ಮೈಸೂರು ಅರಮನೆ ಮುಂಭಾಗ ನಿನ್ನೆ ಸಂಜೆ ನಡೆದಿದ್ದ ಹೀಲಿಯಂ ಸ್ಫೋಟ ಪ್ರಕರಣದಲ್ಲಿ ಸಾವಿನ ಸಂಖ್ಯೆ ಇದೀಗ ಮೂರಕ್ಕೆ…
ಮೈಸೂರು : ಹುಬ್ಬಳ್ಳಿಯಲ್ಲಿ ನಡೆದ ಮರ್ಯಾದಗೇಡು ಹತ್ಯೆ ವಿರೋಧಿಸಿ ಮತ್ತು ಮರ್ಯಾದೆಗೇಡು ಹತ್ಯೆ ತಡೆಗೆ ಕಠಿಣ ಕಾಯಿದೆ ರೂಪಿಸಬೇಕು ಎಂದು…
ಮೈಸೂರು : ಇಲ್ಲಿನ ಕೆ.ಆರ್. ಆಸ್ಪತ್ರೆಯ ಶೆಡ್ ನಲ್ಲಿ ಬೆಂಕಿ ಕಾಣಿಸಿಕೊಂಡು ಆಸ್ಪತ್ರೆಯ ಹಾಸಿಗೆಗಳು ಬೆಂಕಿಗಾಹುತಿಯಾಗಿವೆ. ಆಸ್ಪತ್ರೆಯ ಚೆಲುವಾಂಬ ವಾರ್ಡ್…
ಬೆಂಗಳೂರು : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುರಿತಂತೆ ಪ್ರಶ್ನೆಗಳು ಉದ್ಭವಿಸಿರುವ ಸಂದರ್ಭದಲ್ಲಿ, ಹೊಸ ವರ್ಷಾಚರಣೆಯ ವೇಳೆ ಯಾವುದೇ ಅವಘಡ ನಡೆಯದಂತೆ…
ಮೈಸೂರು : ಮೈಸೂರಿನ ವಿಶ್ವ ವಿಖ್ಯಾತ ಅರಮನೆ ಸಮೀಪ ಸಂಭವಿಸಿದ್ದ ಹೀಲಿಯಂ ಗ್ಯಾಸ್ ಸಿಲೆಂಡರ್ ಸ್ಫೋಟ ದುರಂತದಲ್ಲಿ ಸಾವಿನ ಸಂಖ್ಯೆ…
ತಿರುವನಂತಪುರಂ : ಬಿಜೆಪಿಯಿಂದ ಮೊದಲ ಬಾರಿಗೆ ತಿರುವನಂತಪುರಂ ನಗರ ಮೇಯರ್ ಆಗಿ ಆಯ್ಕೆಯಾಗುವ ಮೂಲಕ ವಿ.ವಿ.ರಾಜೇಶ್ ಇತಿಹಾಸ ನಿರ್ಮಿಸಿದ್ದಾರೆ. 49…