ವಾಷಿಂಗ್ಟನ್: ಇರಾನ್ ಪರಮಾಣು ಒಪ್ಪಂದಕ್ಕೆ ಸಹಿ ಹಾಕಿದಿದ್ದರೆ ಬಾಂಬ್ ದಾಳಿ ಮಾಡುತ್ತೇವೆ ಎಂದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಚ್ಚರಿಕೆ ನೀಡಿದ್ದಾರೆ.
ಇರಾನ್ ತನ್ನ ಪರಮಾಣು ಕಾರ್ಯಕ್ರಮದ ಕುರಿತು ವಾಷಿಂಗ್ಟನ್‌ನೊಂದಿಗೆ ಒಪ್ಪಂದಕ್ಕೆ ಬರದಿದ್ದರೆ ಬಾಂಬ್ ದಾಳಿ ಮತ್ತು ಎರಡು ಪಟ್ಟು ಸುಂಕಗಳನ್ನು ವಿಧಿಸುವುದಾಗಿ ಟ್ರಂಪ್ ಬೆದರಿಕೆ ಹಾಕಿದ್ದಾರೆ.
ಅವರು ಒಪ್ಪಂದ ಮಾಡಿಕೊಳ್ಳದಿದ್ದರೆ ಬಾಂಬ್ ದಾಳಿ ನಡೆಯುತ್ತದೆ. ಒಂದು ವೇಳೆ ಅವರು ಒಪ್ಪಂದ ಮಾಡಿಕೊಳ್ಳದಿದ್ದರೆ ನಾಲ್ಕು ವರ್ಷಗಳ ಹಿಂದೆ ಮಾಡಿದಂತೆ ನಾನು ಅವರ ಮೇಲೆ ಎರಡು ಪಟ್ಟು ಸುಂಕಗಳನ್ನು ವಿಧಿಸುವ ಅವಕಾಶವಿದೆ ಎಂದು ತಿಳಿಸಿದ್ದಾರೆ.





