ದೇಶ- ವಿದೇಶ

ಕೇರಳ ಸಿಎಂ ಪಿಣರಾಯಿ ವಿಜಯನ್‌ ನಿವಾಸಕ್ಕೆ ಬಾಂಬ್‌ ಬೆದರಿಕೆ

ತಿರುವನಂತಪುರಂ: ಕೇರಳ ಸಿಎಂ ಪಿಣರಾಯಿ ವಿಜಯನ್‌ ಅವರ ನಿವಾಸಕ್ಕೆ ದುಷ್ಕರ್ಮಿಗಳು ಬಾಂಬ್‌ ಬೆದರಿಕೆ ಹಾಕಿದ್ದಾರೆ.

ಪಿಣರಾಯಿ ವಿಜಯನ್‌ ಅಧಿಕೃತ ನಿವಾಸ ಕ್ಲಿಪ್‌ ಪೌಸ್‌ ಮೇಲೆ ಬಾಂಬ್‌ ದಾಳಿ ನಡೆಸುವುದಾಗಿ ಬೆದರಿಕೆ ಬಂದಿದ್ದು, ಪರಿಶೀಲನೆ ನಡೆಸಲಾಗಿದೆ.

ತಂಪನೂರು ಪೊಲೀಸ್‌ ಠಾಣೆಗೆ ಇ-ಮೇಲ್‌ ಮೂಲಕ ಸಂದೇಶ ರವಾನಿಸಿ ಸಿಎಂ ಪಿಣರಾಯಿ ವಿಜಯನ್‌ ನಿವಾಸದ ಮೇಲೆ ಬಾಂಬ್‌ ಇಡುವುದಾಗಿ ಬೆದರಿಕೆ ಹಾಕಲಾಗಿದೆ.

ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು, ಬಾಂಬ್‌ ಪತ್ತೆದಳ, ಬಾಂಬ್‌ ನಿಷ್ಕ್ರಿಯ ದಳದೊಂದಿಗೆ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಆದರೆ ಮನೆಯಲ್ಲಿ ಯಾವುದೇ ಸ್ಫೋಟಕ ವಸ್ತುಗಳು ಪತ್ತೆಯಾಗಿಲ್ಲ. ಅಲ್ಲದೇ ಇದೊಂದು ಹುಸಿ ಬಾಂಬ್‌ ಕರೆ ಎಂದು ದೃಢಪಟ್ಟಿದೆ.

ಬಾಂಬ್‌ ಬೆದರಿಕೆ ಹಾಕಿರುವ ಆರೋಪಿಗ ಪತ್ತೆಗಾಗಿ ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಗುಂಡ್ಲುಪೇಟೆ | ದನಗಾಹಿ ಮೇಲೆ ಹುಲಿ ದಾಳಿ ; ಪ್ರಾಣಾಪಾಯದಿಂದ ಪಾರು

ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…

27 seconds ago

ಏಕತಾ ಮಾಲ್‌ ನಿರ್ಮಾಣಕ್ಕೆ ಹೈಕೋರ್ಟ್ ತಡೆ‌

ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…

4 mins ago

ದ್ವೇಷ ಭಾಷಣಕ್ಕೆ ಕಡಿವಾಣ | ಗರಿಷ್ಟ 10 ವರ್ಷ ಶಿಕ್ಷೆ, ವಿಧಾನಸಭೆಯಲ್ಲಿ ಮಸೂದೆ ಮಂಡನೆ, BJP ವಿರೋಧ

ಬೆಳಗಾವಿ : ದ್ವೇಷ ಭಾಷಣಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕಟ್ಟು ನಿಟ್ಟಿನ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದ್ದು, ಈ…

14 mins ago

ಮೈವಿವಿಯಲ್ಲಿ ಫ್ರೆಂಚ್‌ ಭಾಷೆ ವಿಭಾಗ ಪುನರಾಂಭಿಸಲು ಚರ್ಚೆ

ಮೈಸೂರು : ಮೈಸೂರು ವಿಶ್ವವಿದ್ಯಾನಿಲಯಕ್ಕೆ ಫ್ರಾನ್ಸ್ ದೇಶದ ರಾಯಭಾರಿಗಳ ನಿಯೋಗ ಭೇಟಿ ನೀಡಿ ಫ್ರೆಂಚ್ ಭಾಷೆ ವಿಭಾಗವನ್ನು ಮರು ಆರಂಭಿಸುವ…

37 mins ago

ʼಗ್ಯಾರಂಟಿʼ ಜನರ ಬದುಕಿನ ಆಧಾರ

ಬೆಳಗಾವಿ(ಸುವರ್ಣ ವಿಧಾನ ಸೌಧ) : ಗ್ಯಾರಂಟಿ ಯೋಜನೆಗಳ ಮೂಲಕ ನಾಗರಿಕರಿಗೆ ನೇರವಾಗಿ ಹಣ ವರ್ಗಾವಣೆಯಿಂದ ಅವರ ಆರ್ಥಿಕ ಬದುಕು ಬಹಳಷ್ಟು…

56 mins ago

ಪತ್ರಿಕೋದ್ಯಮ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ

ಮೈಸೂರು : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ 2025-26ನೇ ಸಾಲಿನ ಎಸ್.ಸಿ.ಎಸ್.ಪಿ ಮತ್ತು ಟಿ.ಎಸ್.ಪಿ ಯೋಜನೆಯಡಿ ಪರಿಶಿಷ್ಟ…

1 hour ago