Thalapathy Vijay is the Chief Ministerial Candidate for TVK Party
ಚೆನ್ನೈ : ತಮಿಳುನಾಡಿನ ಖ್ಯಾತ ನಟ ಕಮ್ ರಾಜಕಾರಣಿ ದಳಪತಿ ವಿಜಯ್ ನಿವಾಸಕ್ಕೆ ಬಾಂಬ್ ಬೆದರಿಕೆ ಕರೆ ಬಂದಿದೆ.
ಕರೂರು ಕಾಲ್ತುಳಿತ ಸಂಭವಿಸಿದ ಕೆಲ ದಿನಗಳ ಬಳಿಕ ನಟ-ರಾಜಕಾರಣಿ ಮತ್ತು ತಮಿಳಗ ವೆಟ್ರಿ ಕಳಗಂ (ಟಿವಿಕೆ) ಮುಖ್ಯಸ್ಥ ವಿಜಯ್ ಅವರ ಚೆನ್ನೈ ನಿವಾಸಕ್ಕೆ ಬಾಂಬ್ ಬೆದರಿಕೆ ಕರೆ ಬಂದಿದೆ. ಕರೂರ್ ಜಿಲ್ಲೆಯಲ್ಲಿ ನಡೆದ ಟಿವಿಕೆ ರ‍್ಯಾಲಿಯಲ್ಲಿ ನಡೆದ ಕಾಲ್ತುಳಿತದಲ್ಲಿ ೪೦ಕ್ಕೂ ಹೆಚ್ಚು ಜನರು ಸಾವನ್ನಪ್ಪಿ, ಹಲವರು ಗಾಯಗೊಂಡ ನಂತರ ವಿಜಯ್ ವಿರುದ್ಧ ಟೀಕೆಗಳು ಕೇಳಿಬರುತ್ತಿರುವ ನಡುವೆಯೇ ಈ ಕರೆ ಬಂದಿರುವುದು ವಿಶೇಷವಾಗಿದೆ.
ಮುನ್ನೆಚ್ಚರಿಕೆ ಕ್ರಮವಾಗಿ ವಿಜಯ್ ಅವರ ನೀಲಂಕರೈ ನಿವಾಸದ ಸುತ್ತ ಭದ್ರತೆಯನ್ನು ಬಲಪಡಿಸಲಾಗಿದೆ. ಯಾವುದೇ ಸ್ಛೋಟಕಗಳು ಪತ್ತೆಯಾಗಿಲ್ಲ, ಮತ್ತು ಅಧಿಕಾರಿಗಳು ಕರೆ ಸುಳ್ಳು ಎಂದು ದೃಢಪಡಿಸಿದ್ದಾರೆ. ಈ ಕರೆಯ ಮೂಲವನ್ನು ಪತ್ತೆಹಚ್ಚಲು ಮತ್ತು ವ್ಯಕ್ತಿ ಅಥವಾ ಗುಂಪನ್ನು ಗುರುತಿಸಲು ಪೊಲೀಸರು ತನಿಖೆಯನ್ನು ಪ್ರಾರಂಭಿಸಿದ್ದಾರೆ.
ಇದನ್ನೂ ಓದಿ:-20 ಮಕ್ಕಳ ಸಾವಿಗೆ ಕಾರಣವಾದ ಕೋಲ್ಡ್ರಿಫ್ ಸಿರಪ್ : ಕಂಪೆನಿ ಮಾಲೀಕನ ಬಂಧನ
ವಿಜಯ್ ಅವರ ಮನೆಯನ್ನು ಗುರಿಯಾಗಿಸಿಕೊಂಡು ಬಂದಿರುವ ಬಾಂಬ್ ಬೆದರಿಕೆಗೂ ಮೊದಲು ಕಳೆದ ಎರಡು ವಾರಗಳಿಂದ ಪ್ರಮುಖ ಸಂಸ್ಥೆಗಳು ಮತ್ತು ವ್ಯಕ್ತಿಗಳಿಗೆ ವ್ಯಾಪಕ ಬೆದರಿಕೆಗಳು ಬಂದಿವೆ. ಒಂದು ವಾರದ ಹಿಂದೆ, ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರಿಗೆ ಬಾಂಬ್ ಬೆದರಿಕೆ ಬಂದಿರುವುದಾಗಿ ವರದಿಯಾಗಿತ್ತು.
ತಮಿಳುನಾಡು ರಾಜ್ಯಪಾಲ ಆರ್.ಎನ್. ರವಿ, ಡಿಎಂಕೆ ಸಂಸದೆ ಕನಿಮೋಳಿ, ನಟಿ ತ್ರಿಶಾ, ಹಾಸ್ಯನಟ ಮತ್ತು ನಟ ಎಸ್.ವಿ. ಶೇಖರ್, ಹಿಂದೂ ಪತ್ರಿಕಾಲಯ ಹಾಗೆಯೇ ಕಮಲಾಲಯದಲ್ಲಿರುವ ಭಾರತೀಯ ಜನತಾ ಪಕ್ಷದ (ಬಿಜೆಪಿ) ಪ್ರಧಾನ ಕಚೇರಿಗಳಿಗೂ ಹುಸಿ ಬಾಂಬ್ ಬೆದರಿಕೆ ಕರೆಗಳು ಬಂದಿದ್ದವು.
ಬೆಳಗಾವಿ : ರಾಜ್ಯದಲ್ಲಿ ಹಣ ವಸೂಲಿಗಾಗಿ ಅನಗತ್ಯವಾಗಿ ಸಿಜೇರಿಯನ್ ಹೆರಿಗೆ ಮಾಡುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕೆ.ಪಿ.ಎಂ.ಇ. ನಿಯಮದಂತೆ ಕ್ರಮ…
ಚಿಕ್ಕಮಗಳೂರು : ಅತ್ಯಂತ ಪರಿಸರ ಸೂಕ್ಷ ಸ್ಥಳಗಳನ್ನು ಹೊಂದಿರುವ ಚಿಕ್ಕಮಗಳೂರು ಜಿಲ್ಲೆಯಲ್ಲಿ ಪರಿಸರದ ಮೇಲೆ ಆಗುವ ದುಷ್ಪರಿಣಾಮಗಳನ್ನು ಗಣನೆಗೆ ತೆಗೆದುಕೊಳ್ಳದೆ…
ಹೊಸದಿಲ್ಲಿ : ಲೋಕಸಭೆಯಲ್ಲಿ ವಂದೇ ಮಾತರಂ ಗೀತೆ ಕುರಿತ ಚರ್ಚೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಭಾಷಣವು ಇತಿಹಾಸವನ್ನು…
ಬೆಳಗಾವಿ : ರಾಜ್ಯದಲ್ಲಿ ಸರ್ಕಾರಿ ಶಾಲೆಗಳಲ್ಲಿ ಒಂದೇ ಒಂದು ಮಗುವಿದ್ದರೂ ಕೂಡ ಯಾವುದೇ ಕಾರಣಕ್ಕೂ ಕನ್ನಡ ಮಾಧ್ಯಮ ಶಾಲೆಗಳನ್ನು ಮುಚ್ಚುವುದಿಲ್ಲ…
ಬೆಳಗಾವಿ : ಡಿನ್ನರ್ ಬ್ರೇಕ್‌ಫಾಸ್ಟ್ ಬಳಿಕವೂ ತಂದೆಯ ಪರ ಪುತ್ರ ಯತೀಂದ್ರ ಬ್ಯಾಟಿಂಗ್ ಮಾಡುವುದನ್ನು ಮುಂದುವರಿಸಿದ್ದಾರೆ. ಸಿದ್ದರಾಮಯ್ಯ ಪೂರ್ಣ ಅವಧಿಯವರೆಗೆ…
ಹೊಸದಿಲ್ಲಿ : ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕರ್ನಾಟಕ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆಪ್ತ, ಕಾಂಗ್ರೆಸ್ ಮುಖಂಡ ಇನಾಯತ್ ಅಲಿಗೆ ದೆಹಲಿ…