ನಾಗ್ಪುರ: ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರ ನಾಗ್ಪುರದಲ್ಲಿರುವ ನಿವಾಸಕ್ಕೆ ಬಾಂಬ್ ಬೆದರಿಕೆ ಕರೆ ಬಂದಿದೆ.
ಈ ಬಗ್ಗೆ ಪೊಲೀಸ್ ನಿಯಂತ್ರಣ ಕೊಠಡಿಗೆ ಇಂದು ಬೆಳಿಗ್ಗೆಯೇ ಬೆದರಿಕೆ ಕರೆ ಬಂದಿದ್ದು, ವಾರ್ಧಾ ರಸ್ತೆಯಲ್ಲಿರುವ ಗಡ್ಕರಿ ಅವರ ಮನೆಯನ್ನು ಸ್ಫೋಟಿಸಲಾಗುವುದು ಎಂದು ಕರೆ ಮಾಡಿದ ವ್ಯಕ್ತಿಯೊಬ್ಬ ಎಚ್ಚರಿಕೆ ನೀಡಿದ್ದಾನೆ.
ಪೊಲೀಸರು ತಕ್ಷಣ ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡಿದರು. ಈ ಮಾಹಿತಿಯನ್ನು ಪ್ರತಾಪ್ ನಗರ ಪೊಲೀಸರಿಗೆ ರವಾನೆ ಮಾಡಲಾಗಿದ್ದು, ಅವರು ಅಪರಿಚಿತ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
ಮಾಹಿತಿಯ ಪ್ರಕಾರ ನಾಗ್ಪುರದಲ್ಲಿರುವ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಸುರಕ್ಷಿತವಾಗಿದ್ದಾರೆ. ಅಧಿಕಾರಿಗಳು ಅಗತ್ಯವಿರುವ ಎಲ್ಲಾ ಮುನ್ನೆಚ್ಚರಿಕೆಗಳನ್ನು ತೆಗೆದುಕೊಂಡಿದ್ದಾರೆ. ಬೆದರಿಕೆಯ ಮೂಲವನ್ನು ಪತ್ತೆಹಚ್ಚಲು ಮುಂದಾಗಿದ್ದು, ಸದ್ಯ ಸಚಿವರ ನಿವಾಸಕ್ಕೆ ಭದ್ರತೆ ಹೆಚ್ಚಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.





