ನವದೆಹಲಿ: ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಡಿದ್ದ ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಮತಗಳ್ಳತನದ ಆರೋಪವನ್ನು ಸ್ವತಃ ಬ್ರೆಜಿಲಿಯನ್ ಮಾಡೆಲ್ ಅಲ್ಲಗೆಳೆದಿದ್ದಾರೆ.
ಹರಿಯಾಣ ಚುನಾವಣೆಯಲ್ಲಿ ಭಾರೀ ಅಕ್ರಮ ನಡೆದಿದೆ. ಬ್ರೆಜಿಲ್ ರೂಪದರ್ಶಿ 22 ಕಡೆ ಮತ ಚಲಾಯಿಸಿದ್ದಾರೆ ಎಂದು ಸುದ್ದಿಗೋಷ್ಠಿ ನಡೆಸಿ ರಾಹುಲ್ ಗಾಂಧಿ ಗಂಭೀರ ಆರೋಪ ಮಾಡಿದ್ದರು. ಈ ಆರೋಪದ ಬಗ್ಗೆ ಬ್ರೆಜಿಲ್ ಮಾಡೆಲ್ ಲಾರಿಸಾ ಪ್ರತಿಕ್ರಿಯೆ ನೀಡಿ ರಾಹುಲ್ ಆರೋಪವನ್ನು ಸಾರಾಸಗಟಾಗಿ ನಿರಾಕರಿಸಿದ್ದಾರೆ.
ಇದನ್ನು ಓದಿ: ಮತಗಳ್ಳತನ | ರಾಹುಲ್ ಆರೋಪ ನಿರಾಕರಿಸಿದ ಕೇಂದ್ರ ಚುನಾವಣಾ ಆಯೋಗ
ರಾಹುಲ್ ನನ್ನ ಹಳೆಯ ಫೋಟೋ ಬಳಸಿ ಸೀಮಾ ಮತ್ತು ಸರಸ್ವತಿ ಎಂದು ಕರೆಯುತ್ತಿದ್ದಾರೆ. ನಾನು ಬ್ರೆಜಿಲಿಯನ್ ಇದು ರಾಜಕೀಯ ನಾಟಕದಂತೆ ಕಾಣುತ್ತಿದೆ. ಮಾಧ್ಯಮಗಳು ನನ್ನನ್ನು ಸಂಪರ್ಕಿಸಲು ಪ್ರಯತ್ನಿಸುತ್ತಿವೆ ಎಂದು ಅವರು ತಿಳಿಸಿದ್ದಾರೆ.
ಭಾರತದ ಚುನಾವಣೆಯಲ್ಲಿ ತನ್ನ ಹೆಸರು ಕೇಳಿಬಂದಿರುವುದಕ್ಕೆ ಲಾರಿಸಾ ಅಚ್ಚರಿ ವ್ಯಕ್ತಪಡಿಸಿದ್ದಾರೆ. ಈ ಫೋಟೊ ನನ್ನ ಆರಂಭಿಕ ಮಾಡೆಲಿಂಗ್ ದಿನಗಳ ಹಳೆಯ ಸ್ಟಾಕ್ ಫೋಟೊ. ನಾನೀಗ ಮಾಡೆಲ್ ಅಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ನಾನು ಎಂದಿಗೂ ಭಾರತಕ್ಕೆ ಹೋಗಿಲ್ಲ. ನಾನು ಬ್ರೆಜಿಲಿಯನ್ ಡಿಜಿಟಲ್ ಇನ್‍ಫ್ಲುಯೆನ್ಸರ್ ಮತ್ತು ಕೇಶ ವಿನ್ಯಾಸಕಿ. ನಾನು ಭಾರತೀಯ ಜನರನ್ನು ಪ್ರೀತಿಸುತ್ತೇನೆ ಎಂದು ತಿಳಿಸಿದ್ದಾರೆ.
ಪ್ರಶಾಂತ್ ಎನ್ ಮಲ್ಲಿಕ್ ಮೈಸೂರು: ಸುತ್ತೂರು ಜಾತ್ರೆ ವೇಳೆ ರಾತ್ರಿ ಗದ್ದೆಯಲ್ಲಿ ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪರಿಣಾಮ…
ಸಿದ್ದಾಪುರ: ವಿರಾಜಪೇಟೆ ರಸ್ತೆಯಲ್ಲಿರುವ ಎಸ್‌ವೈಎಸ್ ಕಾಫಿ ಅಂಗಡಿಯಲ್ಲಿ ನಡೆದ ನಗದು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದಾಪುರ ಪೊಲೀಸರು ಕೇರಳ ಮೂಲದ…
ಮಹಾದೇಶ್ ಎಂ ಗೌಡ ಹನೂರು: ತಾಲ್ಲೂಕಿನ ಕೆವಿಎನ್ ದೊಡ್ಡಿ ಗ್ರಾಮದ ಜಮೀನೊಂದರಲ್ಲಿ ಕಾಡಾನೆ ಲಗ್ಗೆ ಇಟ್ಟು ಅಪಾರ ಪ್ರಮಾಣದ ಬೆಳೆ…
ಬೆಂಗಳೂರು: ಕಾಲ್ತುಳಿತ ಪ್ರಕರಣದಿಂದಾಗಿ ಈ ಬಾರಿಯ ಬಹು ನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಪಂದ್ಯಗಳು ನಡುವುದೇ ಡೋಲಾಯಮಾನ ಸ್ಥಿತಿಯಲ್ಲಿರುವಾಗಲೇ ಉದ್ಘಾಟನಾ…
ಬೆಂಗಳೂರು: ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್ ಮುಖಂಡ ರಾಜೀವ್‌ಗೌಡಗೆ ಹೈಕೋರ್ಟ್ ತೀವ್ರ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ಪ್ರಮುಖ ಆರೋಪಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆ ಊಟ…