ದೇಶ- ವಿದೇಶ

ಮತಗಳ್ಳತನ ಆರೋಪ ಅಲ್ಲಗೆಳೆದ ಬ್ರೆಜಿಲಿಯನ್‌ ಮಾಡೆಲ್‌: ಏನ್‌ ಹೇಳಿದ್ದಾರೆ ಗೊತ್ತಾ?

ನವದೆಹಲಿ: ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‍ ಗಾಂಧಿ ಅವರು ಮಾಡಿದ್ದ ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಮತಗಳ್ಳತನದ ಆರೋಪವನ್ನು ಸ್ವತಃ ಬ್ರೆಜಿಲಿಯನ್ ಮಾಡೆಲ್‍ ಅಲ್ಲಗೆಳೆದಿದ್ದಾರೆ.

ಹರಿಯಾಣ ಚುನಾವಣೆಯಲ್ಲಿ ಭಾರೀ ಅಕ್ರಮ ನಡೆದಿದೆ. ಬ್ರೆಜಿಲ್ ರೂಪದರ್ಶಿ 22 ಕಡೆ ಮತ ಚಲಾಯಿಸಿದ್ದಾರೆ ಎಂದು ಸುದ್ದಿಗೋಷ್ಠಿ ನಡೆಸಿ ರಾಹುಲ್ ಗಾಂಧಿ ಗಂಭೀರ ಆರೋಪ ಮಾಡಿದ್ದರು. ಈ ಆರೋಪದ ಬಗ್ಗೆ ಬ್ರೆಜಿಲ್ ಮಾಡೆಲ್ ಲಾರಿಸಾ ಪ್ರತಿಕ್ರಿಯೆ ನೀಡಿ ರಾಹುಲ್ ಆರೋಪವನ್ನು ಸಾರಾಸಗಟಾಗಿ ನಿರಾಕರಿಸಿದ್ದಾರೆ.

ಇದನ್ನು ಓದಿ: ಮತಗಳ್ಳತನ | ರಾಹುಲ್‌ ಆರೋಪ ನಿರಾಕರಿಸಿದ ಕೇಂದ್ರ ಚುನಾವಣಾ ಆಯೋಗ

ರಾಹುಲ್ ನನ್ನ ಹಳೆಯ ಫೋಟೋ ಬಳಸಿ ಸೀಮಾ ಮತ್ತು ಸರಸ್ವತಿ ಎಂದು ಕರೆಯುತ್ತಿದ್ದಾರೆ. ನಾನು ಬ್ರೆಜಿಲಿಯನ್ ಇದು ರಾಜಕೀಯ ನಾಟಕದಂತೆ ಕಾಣುತ್ತಿದೆ. ಮಾಧ್ಯಮಗಳು ನನ್ನನ್ನು ಸಂಪರ್ಕಿಸಲು ಪ್ರಯತ್ನಿಸುತ್ತಿವೆ ಎಂದು ಅವರು ತಿಳಿಸಿದ್ದಾರೆ.

ಭಾರತದ ಚುನಾವಣೆಯಲ್ಲಿ ತನ್ನ ಹೆಸರು ಕೇಳಿಬಂದಿರುವುದಕ್ಕೆ ಲಾರಿಸಾ ಅಚ್ಚರಿ ವ್ಯಕ್ತಪಡಿಸಿದ್ದಾರೆ. ಈ ಫೋಟೊ ನನ್ನ ಆರಂಭಿಕ ಮಾಡೆಲಿಂಗ್ ದಿನಗಳ ಹಳೆಯ ಸ್ಟಾಕ್ ಫೋಟೊ. ನಾನೀಗ ಮಾಡೆಲ್ ಅಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ನಾನು ಎಂದಿಗೂ ಭಾರತಕ್ಕೆ ಹೋಗಿಲ್ಲ. ನಾನು ಬ್ರೆಜಿಲಿಯನ್ ಡಿಜಿಟಲ್ ಇನ್‍ಫ್ಲುಯೆನ್ಸರ್ ಮತ್ತು ಕೇಶ ವಿನ್ಯಾಸಕಿ. ನಾನು ಭಾರತೀಯ ಜನರನ್ನು ಪ್ರೀತಿಸುತ್ತೇನೆ ಎಂದು ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಅಕ್ರಮ ಕೇರಳ ಲಾಟರಿ ಮಾರಾಟ: ಓರ್ವ ಬಂಧನ

ಗುಂಡ್ಲುಪೇಟೆ: ಅಕ್ರಮವಾಗಿ ಕೇರಳ ಲಾಟರಿ ಟಿಕೆಟ್‌ಗಳನ್ನು ಮಾರಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬರನ್ನು ಗುಂಡ್ಲುಪೇಟೆ ಠಾಣೆ ಪೊಲೀಸರು ಬಂಧಿಸಿ, ಲಾಟರಿ ಟೆಕೆಟ್‌ಗಳನ್ನು ವಶಕ್ಕೆ…

2 hours ago

ಮೈಸೂರಿನ ಜೆಕೆ ಮೈದಾನದಲ್ಲಿ ಶ್ವಾನಗಳ ಕಲರವ: ಗಮನ ಸೆಳೆದ ವೈವಿಧ್ಯಮಯ ತಳಿಗಳು

ಮೈಸೂರು: ಇಲ್ಲಿನ ಜೆಕೆ ಮೈದಾನದಲ್ಲಿ ಆಯೋಜಿಸಿರುವ ಶ್ವಾನ ಪ್ರದರ್ಶನವು ಶ್ವಾನಪ್ರಿಯರ ಗಮನ ಸೆಳೆಯುತ್ತಿದೆ. ಪ್ರದರ್ಶನದಲ್ಲಿ 50ಕ್ಕೂ ಹೆಚ್ಚು ತಳಿಗಳ ಸಾವಿರಕ್ಕೂ…

2 hours ago

ಹವಾಮಾನ ವೈಪರೀತ್ಯಕ್ಕೆ ದಸರಾ ಏರ್ ಶೋ ಮೊಟಕು: ಪ್ರೇಕ್ಷಕರಿಗೆ ನಿರಾಸೆ

ಮೈಸೂರು: ದಸರಾದ ಏರ್ ಶೋ ವೀಕ್ಷಿಸಲು ಕಾತುರದಿಂದ ಕಾಯುತ್ತಿದ್ದ ಸಾವಿರಾರು ಪ್ರೇಕ್ಷಕರಿಗೆ ಹವಾಮಾನ ವೈಪರೀತ್ಯ ನಿರಾಸೆ ಉಂಟುಮಾಡಿದೆ. ಭಾರತೀಯ ವಾಯುಪಡೆಯ…

3 hours ago

ಓದುಗರ ಪತ್ರ: ಹೆಚ್‌ಡಿಕೆಯವರೇ, ಟೀಕೆ ಮಾಡುವಾಗ ಎಚ್ಚರಿಕೆ ಇರಬೇಕಲ್ಲವೇ?

ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಯವರು ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ಪತ್ರಿಕಾಗೋಷ್ಠಿಯಲ್ಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಏಕವಚನ…

4 hours ago

ಓದುಗರ ಪತ್ರ: ಶಾಸಕ ಜಿ.ಟಿ.ದೇವೇಗೌಡರ ನಡೆ ಶ್ಲಾಘನಿಯ

ಮೈಸೂರಿನ ಕಳಸ್ಥವಾಡಿ ಸಮೀಪದ ವಿರಿಜ ನಾಲೆ ಸಮೀಪ ಇತ್ತೀಚೆಗೆ ನಡೆದ ಅವಘಡದಲ್ಲಿ ತೊಂದರೆಗೊಳಗಾದ ಕಬ್ಬು ಸಾಗಿಸುತ್ತಿದ್ದ ಚಂದ್ರು ಎಂಬ ರೈತನ…

4 hours ago

ಓದುಗರ ಪತ್ರ: ದನಗಳ ಪ್ರದರ್ಶನಕ್ಕೆ ಬಂದ ರೈತರೂ ಪ್ರತಿಭಟಿಸಬೇಕಾಯಿತಲ್ಲ…

ರೈತ ದಸರಾ ಅಂಗವಾಗಿ ಮೈಸೂರಿನ ಕುಕ್ಕರಹಳ್ಳಿಯ ಬೋಽಸತ್ವ ಹಾಸ್ಟೆಲ್ ಮುಂಭಾಗದಲ್ಲಿ ಏರ್ಪಡಿಸಲಾಗಿದ್ದ ಹಳ್ಳಿಕಾರ್ ತಳಿಯ ಜೋಡಿ ದನಗಳ ಪ್ರದರ್ಶನವನ್ನು ಗಮನಿಸಿದರೆ…

4 hours ago