ಲಂಡನ್ : ಇರಾನ್ ಸಂಘರ್ಷದಿಂದಾಗಿ ಪ್ರಪಂಚದ ತೈಲ ಸರಬರಾಜಿನಲ್ಲಿ ಉಂಟಾಗಿರುವ ತೀವ್ರ ಆರ್ಥಿಕ ಪರಿಣಾಮಗಳ ನಡುವೆ ಹೊರ್ಮುಜ್ ಜಲಸಂಧಿಯನ್ನು ಮುಕ್ತಗೊಳಿಸುವುದಕ್ಕಾಗಿ ಅಂತರರಾಷ್ಟ್ರೀಯ ಭದ್ರತಾ ಸಮ್ಮೇಳನವನ್ನು ಆಯೋಜಿಸುವುದಕ್ಕೆ ಬ್ರಿಟನ್ ಮುಂದೆ ಬಂದಿದೆ.
ಬ್ರಿಟನ್ ಪ್ರಧಾನಿ ಕೀರ್ ಸ್ಟಾರ್ಮರ್ ಅವರು ಈ ಕುರಿತು 35ಕ್ಕೂ ಹೆಚ್ಚು ರಾಷ್ಟ್ರಗಳ ಜೊತೆ ಸಭೆ ನಡೆಸುವುದಾಗಿ ಘೋಷಿಸಿದ್ದಾರೆ.
ಇರಾನ್-ಇಸ್ರೇಲ್-ಅಮೆರಿಕಾ ಸಂಘರ್ಷದಿಂದಾಗಿ ಹೊರ್ಮುಜ್ ಜಲಸಂಧಿಯು ಇರಾನ್ ಪಡೆಗಳಿಂದ ಮುಚ್ಚಲ್ಪಟ್ಟಿದೆ. ಪ್ರಪಂಚದ ಸುಮಾರು ಒಂದು ಐದನೇ ಒಂದು ಭಾಗದ ತೈಲ ಸಾಗಣೆಯು ಈ ಜಲಸಂಧಿಯ ಮೂಲಕ ನಡೆಯುತ್ತದೆ. ಇದರ ಮುಚ್ಚುವಿಕೆಯು ಜಾಗತಿಕ ತೈಲ ಬೆಲೆಗಳಲ್ಲಿ ಏರಿಕೆ ಮತ್ತು ಆರ್ಥಿಕ ಅಸ್ಥಿರತೆಗೆ ಕಾರಣವಾಗಿದೆ.
“ವಾಸ್ತವಿಕ ಮತ್ತು ಸಾಮೂಹಿಕ ಯೋಜನೆ” ರೂಪಿಸುವ ಉದ್ದೇಶದೊಂದಿಗೆ ಅಂತರರಾಷ್ಟ್ರೀಯ ಭದ್ರತಾ ಸಮ್ಮೇಳನವನ್ನು ಬ್ರಿಟನ್ ಆಯೋಜಿಸುವುದಕ್ಕೆ ಮುಂದಾಗಿದೆ. ಈ ಸಮ್ಮೇಳನವು ಲಂಡನ್‌ನಲ್ಲಿ ನಡೆಯಲಿದೆ.
ಈ ಕುರಿತು ಮಾತನಾಡಿರುವ ಬ್ರಿಟನ್ ಪ್ರಧಾನಿ ಕಿಯರ್ ಸ್ಟಾರ್ಮರ್, ಹೊರ್ಮುಜ್ ಜಲಸಂಧಿಯನ್ನು ಹೇಗೆ ತೆರೆಯಬೇಕಂಬ ಕುರಿತಂತೆ ಚರ್ಚಿಸಲು ಈ ವಾರ 35 ದೇಶಗಳ ಸಭೆ ಕರೆಯಲಾಗುವುದು. ಜತೆಗೆ ಸಾಗರದಲ್ಲಿ ಸಿಲುಕಿರುವ ಹಡಗುಗಳು ಮತ್ತು ನಾವಿಕರ ಸುರಕ್ಷತೆ ಹಾಗೂ ಜಲಸಂಧಿಯ ಸಂಚಾರ ಸ್ವಾತಂತ್ರ್ಯವನ್ನ ಮರುಸ್ಥಾಪಿಸಲು ಸಾಧ್ಯವಿರು ರಾಜತಾಂತ್ರಿಕ ಸಮಾಲೋಚನೆ ನಡೆಸಲಿದ್ದೇವೆ ಎಂದಿದ್ದಾರೆ.
ಇದೇ ವೇಳೆ ಅಮೆರಿಕ ಮತ್ತು ಇರಾನ್ ನಡುವಿನ ಯುದ್ದದಲ್ಲಿ ಪಾಲ್ಗೊಳ್ಳುವುದಿಲ್ಲ ಎಂದ ಅವರು, ಬ್ರಿಟನ್ ಜನತೆಯ ಹಿತದೃಷ್ಟಿಯಿಂದ ಕಾರ್ಯೋನ್ಮುಖವಾಗುವುದಾಗಿ ಹೇಳಿದ್ದಾರೆ.
ಜಲಸಂಧಿ ಕುರಿತಾಗಿ 35 ದೇಶಗಳ ಸಭೆಯನ್ನು ವಿದೇಶಾಂಗ ಕಾರ್ಯದರ್ಶಿ ವೆಟ್ಟೆ ಕೂಪರ್ ಮುನ್ನಡೆಸಲಿದ್ದಾರೆ. ನೌಕಾಮಾರ್ಗದ ಭದ್ರತೆ ಬಗ್ಗೆಯೂ ಚರ್ಚಿಸಲಾಗುವುದು ಎಂದಿದ್ದಾರೆ.
ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…
ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…
ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…
ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…
ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…