Mysore
24
broken clouds

Social Media

ಬುಧವಾರ, 29 ಏಪ್ರಿಲ 2026
Light
Dark

ಇರಾನ್‌ ಅಣ್ವಸ್ತ್ರ ಹೊಂದಲು ಬ್ರಿಟನ್‌ ರಾಜ ಚಾರ್ಲ್‌ ಬಯಸುವುದಿಲ್ಲ : ಡೊನಾಲ್ಡ್‌ ಟ್ರಂಪ್‌

ವಾಷಿಂಗ್ಟನ್ : ಇರಾನ್ ಅಣ್ವಸ್ತ್ರ ಹೊಂದಲು ಬ್ರಿಟನ್ ರಾಜ ಮೂರನೇ ಚಾರ್ಲ್ಸ್ ಬಯಸುವುದಿಲ್ಲ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.‌

ಶ್ವೇತಭವನದಲ್ಲಿ ಚಾರ್ಲ್ಸ್ ಅವರೊಂದಿಗೆ ಔತಣಕೂಟದಲ್ಲಿ ಭಾಗವಹಿಸಿ ಮಾತನಾಡಿದ ಟ್ರಂಪ್, ನಾವು ಪಶ್ಚಿಮ ಏಷ್ಯಾದಲ್ಲಿ ಅತ್ಯುತ್ತಮ ಕೆಲಸ ಮಾಡುತ್ತಿದ್ದೇವೆ ಎಂದಿದ್ದಾರೆ.

ನಾವು ನಿರ್ದಿಷ್ಟ ಎದುರಾಳಿಯನ್ನು ಸೋಲಿಸಿದ್ದೇವೆ. ಆ ವೈರಿಯನ್ನು ಎಂದಿಗೂ ಬಿಡುವುದಿಲ್ಲ. ನನಗಿಂತಲೂ ಹೆಚ್ಚಾಗಿ ಚಾರ್ಲ್ಸ್ ಅವರೇ ಅದನ್ನು ಒಪ್ಪುತ್ತಾರೆ. ಇರಾನ್ ಅಣ್ವಸ್ತ್ರ ಹೊಂದಲು ಎಂದಿಗೂ ಬಿಡುವುದಿಲ್ಲ’ ಎಂದು ಹೇಳಿದ್ದಾರೆ.

ಇದಕ್ಕೂ ಮೊದಲು ಭಾಷಣ ನಡೆಸಿದ್ದ ಚಾರ್ಲ್ಸ್, ಇರಾನ್ ಯುದ್ಧವನ್ನು ನೇರವಾಗಿ ಉಲ್ಲೇಖ ಮಾಡಲಿಲ್ಲ. ಆದರೆ ಟ್ರಂಪ್ ಅವರ ನ್ಯಾಟೊ ಟೀಕೆ ಕುರಿತು ಪ್ರತಿಪಾದಿಸಿದರು. ಅಲ್ಲದೆ ರಷ್ಯಾ ವಿರುದ್ಧದ ಯುದ್ಧದಲ್ಲಿ ಉಕ್ರೇನ್‌ಗೆ ಅಮೆರಿಕ ನೀಡುವ ಸಹಾಯದ ಪ್ರಾಮುಖ್ಯತೆ ಕುರಿತು ಒತ್ತಿ ಹೇಳಿದರು. ಇರಾನ್ ಯುದ್ಧ ಸೇರಿದಂತೆ ಹಲವು ವಿಚಾರಗಳಲ್ಲಿ ಅಮೆರಿಕ ಮತ್ತು ಬ್ರಿಟನ್‌ ಸರ್ಕಾರದ ನಡುವೆ ಇತ್ತೀಚೆಗೆ ಭಿನ್ನಾಭಿಪ್ರಾಯ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಚಾರ್ಲ್ಸ್‌ ಭೇಟಿ ಮಹತ್ವ ಪಡೆದುಕೊಂಡಿದೆ. ಇರಾನ್ ಯುದ್ಧದ ಸಂದರ್ಭದಲ್ಲಿ ನ್ಯಾಟೊದಿಂದ ಬೆಂಬಲ ಸಿಗದಿರುವುದು ಟ್ರಂಪ್ ಆಕ್ರೋಶಕ್ಕೆ ಕಾರಣವಾಗಿತ್ತು. ಅಲ್ಲದೆ ಬ್ರಿಟನ್ ಪ್ರಧಾನಿ ಕೀರ್‌ ಸ್ಟಾರ್ಮರ್ ವಿರುದ್ಧ ವಾಗ್ದಾಳಿ ನಡೆಸಿದ್ದರು.

ಬ್ರಿಟನ್ ರಾಜ ಮೂರನೇ ಚಾರ್ಲ್ಸ್ ನಾಲ್ಕು ದಿನಗಳ ಅಮೆರಿಕ ಪ್ರವಾಸದಲ್ಲಿದ್ದಾರೆ. ಅಮೆರಿಕದ 250ನೇ ವರ್ಷಾಚರಣೆಯಲ್ಲಿ ಭಾಗಿಯಾಗುವ ಹಾಗೂ ಉಭಯ ದೇಶಗಳ ನಡುವಿನ ಸಂಬಂಧವನ್ನು ವೃದ್ಧಿಗೊಳಿಸುವ ನಿಟ್ಟಿನಲ್ಲಿ ಪ್ರವಾಸ ಕೈಗೊಂಡಿದ್ದಾರೆ.

Tags:
error: Content is protected !!