ನವದೆಹಲಿ: ಬ್ರಿಟನ್ ನೂತನ ಪ್ರಧಾನಿ ಕೀರ್ ಸ್ಟಾರ್ಮರ್ ಅವರೊಂದಿಗೆ ಪ್ರಧಾನಿ ಮೋದಿ ಇಂದು ದೂರವಾಣಿಯಲ್ಲಿ ಮಾತುಕತೆ ನಡೆಸಿದ್ದು, ಉಭಯ ರಾಷ್ಟ್ರಗಳ ನಾಯಕರು ಭಾರತ-ಯುಕೆ ಮುಕ್ತ ವ್ಯಾಪಾರ ಒಪ್ಪಂದವನ್ನು ಆದಷ್ಟು ಬೇಗ ಮುಗಿಸುವ ಕಾರ್ಯದತ್ತ ಪರಸ್ಪರ ಒಪ್ಪಿಕೊಂಡಿದ್ದಾರೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.
ಬ್ರಿಟನ್ ಚುನಾವಣೆಯಲ್ಲಿ ಕೀರ್ ಸ್ಟಾರ್ಮರ್ ಅವರ ಲೇಬರ್ ಪಾರ್ಟಿಯು ಜಯಭೇರಿ ಸಾಧಿಸಿದ್ದು, ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ. ಉಭಯ ನಾಯಕರು ಭಾರತ ಮತ್ತು ಯುಕೆ ನಡುವಿನ ಐತಿಹಾಸಿಕ ಸಂಬಂಧಗಳನ್ನು ನೆನಪಿಸಿಕೊಂಡಿದ್ದಾರೆ. ಎರಡೂ ದೇಶಗಳ ನಡುವಿನ ಸಮಗ್ರ ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ಹೆಚ್ಚಿಸಲು ತಮ್ಮ ಬದ್ಧತೆಯನ್ನು ಪುನರುಚ್ಚರಿಸಿದ್ದಾರೆ.
ಯುಕೆಯ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ಅಭಿವೃದ್ಧಿಯಲ್ಲಿ ಭಾರತೀಯ ಸಮುದಾಯದ ಸಕಾರಾತ್ಮಕ ಕೊಡುಗೆಗಳನ್ನು ಮುಂದುವರಿಸಲು ಒಪ್ಪಿಕೊಂಡಿದ್ದಾರೆ. ಉಭಯ ನಾಯಕರು ಸಂಪರ್ಕದಲ್ಲಿರಲು ಸಮ್ಮತಿಸಿದ್ದರಿಂದ ಭಾರತಕ್ಕೆ ಆರಂಭಿಕ ಭೇಟಿಗಾಗಿ ಸ್ಟಾರ್ಮರ್‌ಗೆ ಮೋದಿ ಆಹ್ವಾನವನ್ನೂ ನೀಡಿದ್ದಾರೆ ಎಂದು ಹೇಳಿಕೆ ತಿಳಿಸಿದೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಸ್ಟಾರ್ಮರ್ ಅವರೊಂದಿಗೆ ಮಾತನಾಡಿದ್ದು ಸಂತೋಷವಾಗಿದೆ. ಯುಕೆ ಪ್ರಧಾನಿಯಾಗಿ ಆಯ್ಕೆಯಾಗಿದ್ದಕ್ಕೆ ಅವರನ್ನು ಅಭಿನಂದಿಸಿದ್ದೇನೆ. ನಮ್ಮ ಜನರ ಪ್ರಗತಿ ಸಮೃದ್ಧಿ ಮತ್ತು ಜಾಗತಿಕ ಒಳಿತಿಗಾಗಿ ಸಮಗ್ರ ಕಾರ್ಯತಂತ್ರದ ಪಾಲುದಾರಿಕೆ ಮತ್ತು ದೃಢವಾದ ಭಾರತ-ಯುಕೆ ಆರ್ಥಿಕ ಸಂಬಂಧಗಳನ್ನು ಮತ್ತಷ್ಟು ಬಲಗೊಳಿಸಲು ನಾವು ಬದ್ಧರಾಗಿದ್ದೇವೆ ಎಂದು ತಿಳಿಸಿದ್ದಾರೆ.
ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…
ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…
ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…
ಮಂಡ್ಯ: ಮನ್ಮುಲ್ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…
ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…
ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…