ಲಂಡನ್: ಸಾಮಾಜಿಕ ಮಾಧ್ಯಮದ ವೀಡಿಯೋವನ್ನು ಚಿತ್ರೀಕರಿಸುತ್ತಿದ್ದ ಸಂದರ್ಭ ಚಲಿಸುತ್ತಿದ್ದ ಕಾರಿನಲ್ಲಿ ಸೀಟ್‌ಬೆಲ್ಟ್ ಧರಿಸದಿದ್ದಕ್ಕೆ ಬ್ರಿಟನ್ ಪ್ರಧಾನಿ ರಿಷಿ ಸುನಾಕ್‌ಗೆ ದಂಡ ವಿಧಿಸಲಾಗಿದೆ.
ಚಲಿಸುತ್ತಿದ್ದ ಕಾರಿನಲ್ಲಿಮಸೀಟ್ ಬೆಲ್ಟ್ ಧರಿಸದಿದ್ದಕ್ಕೆ ರಿಷಿ ಸುನಾಕ್ ಅವರಿಗೆ 100 ಪೌಂಡ್ (ಸುಮಾರು 10 ಸಾವಿರ ರೂ.) ದಂಡವನ್ನು ವಿಧಿಸಲಾಗಿದೆ ಎಂದು ಲಂಕಾಶೈರ್ ಪೊಲೀಸರು ತಿಳಿಸಿದ್ದಾರೆ.
ಲಂಕಾಶೈರ್‌ನಲ್ಲಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬರು ಸೀಟ್‌ಬೆಲ್ಟ್ ಧರಿಸದೇ ಇರುವ ವೀಡಿಯೋವೊಂದು ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರವಾಗಿದೆ. ಬಳಿಕ ನಾವು ಶುಕ್ರವಾರ ಲಂಡನ್‌ನ 42 ವರ್ಷದ ವ್ಯಕ್ತಿಗೆ ಷರತ್ತುಬದ್ಧವಾಗಿ ದಂಡ ವಿಧಿಸಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಓದಿಕೊಳ್ಳುವ ಟೈಂನಲ್ಲಿ ವಾರ್ಡನ್‍ನಿಂದ ಲೈಟ್ಸ್ ಆಫ್ – ಮೊಬೈಲ್ ಟಾರ್ಚ್‍ನಲ್ಲೇ ವಿದ್ಯಾರ್ಥಿನಿಯರಿಂದ ವಿದ್ಯಾಭ್ಯಾಸ
ಗುರುವಾರ ಸುನಾಕ್ ಇಂಗ್ಲೆಂಡ್‌ನ ವಾಯುವ್ಯ ಭಾಗದಲ್ಲಿ ಪ್ರಯಾಣ ಮಾಡುತ್ತಿದ್ದಾಗ ವೀಡಿಯೋವೊಂದನ್ನು ಚಿತ್ರೀಕರಿಸಲು ಸೀಟ್‌ಬೆಲ್ಟ್ ಅನ್ನು ತೆಗೆದಿದ್ದಾರೆ. ತಮ್ಮ ತಪ್ಪಿಗೆ ಅವರು ಬಳಿಕ ಕ್ಷಮೆಯನ್ನೂ ಯಾಚಿಸಿದ್ದಾರೆ. ಅವರು ಎಲ್ಲರಿಗೂ ಸೀಟ್‌ಬೆಲ್ಟ್ ಹಾಕಬೇಕು ಎಂಬುದನ್ನೇ ಹೇಳುತ್ತಾರೆ ಎಂದು ಸುನಾಕ್ ಅವರ ವಕ್ತಾರರು ತಿಳಿಸಿದ್ದಾರೆ.
ವರದಿಗಳ ಪ್ರಕಾರ, ಸುನಾಕ್ ದೇಶದಾದ್ಯಂತ 100 ಕ್ಕೂ ಹೆಚ್ಚು ಯೋಜನೆಗಳಿಗೆ ಹಣ ನೀಡಲು ತನ್ನ ಸರ್ಕಾರದ ಹೊಸ ಲೆವೆಲಿಂಗ್ ಅಪ್ ಫಂಡ್ ಪ್ರಕಟಣೆಗಳನ್ನು ಪ್ರಚಾರ ಮಾಡಲು ಚಲಿಸುವ ಕಾರಿನ ಹಿಂದಿನ ಸೀಟಿನಲ್ಲಿ ಕುಳಿತು ವೀಡಿಯೋವನ್ನು ಚಿತ್ರೀಕರಿಸಿದ್ದಾರೆ. ಅವರು ಕ್ಯಾಮೆರಾವನ್ನು ನೋಡುತ್ತಾ ಮಾತನಾಡುತ್ತಿದ್ದರೆ, ಕಾರಿನ ಹಿಂದುಗಡೆಯಿಂದ ಪೋಲೀಸ್ ಬೈಕ್‌ಗಳು ಅವರ ಕಾರಿಗೆ ಬೆಂಗಾವಲು ಮಾಡುವುದು ಕಾಣಿಸಿಕೊಂಡಿದೆ.
ಮೈಸೂರು: ಅಪಾರ್ಟ್‌ಮೆಂಟ್‌ವೊಂದರಲ್ಲಿ ಬಣ್ಣ ಹೊಡೆಯುವ ವೇಳೆ ಕಾಲು ಜಾರಿ ಕೆಳಗೆ ಬಿದ್ದು ಕಾರ್ಮಿಕನೋರ್ವ ಮೃತಪಟ್ಟಿರುವ ಘಟನೆ ಮೈಸೂರಿನ ದಿವಾನ್ಸ್ ರಸ್ತೆಯಲ್ಲಿರುವ…
ಮಹಾದೇಶ್ ಎಂ ಗೌಡ ಹನೂರು: ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಬೆಟ್ಟಕ್ಕೆ ಸಂಜೆ 6 ಗಂಟೆಯಿಂದ ಬೆಳಗಿನ ಜಾವ 6…
ಬೆಂಗಳೂರು: ವಿಧಾನಮಂಡಲ ಜಂಟಿ ಅಧಿವೇಶನ ಎರಡನೇ ದಿನಕ್ಕೆ ಕಾಲಿಟ್ಟಿದ್ದು, ಇಂದು ಆಡಳಿತ ಪಕ್ಷ ಹಾಗೂ ವಿರೋಧ ಪಕ್ಷದ ನಡುವೆ ತೀವ್ರ…
ಬೆಂಗಳೂರು: ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗಳಿಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ರಾಮಲಿಂಗಾರೆಡ್ಡಿ ಪ್ರತಿಕ್ರಿಯೆ ನೀಡಿದ್ದಾರೆ. ಈ…
ಮೈಸೂರು: ರಾಜ್ಯದ ಉಭಯ ಸದನದಲ್ಲಿ ನಿನ್ನೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಸರ್ಕಾರದ ಭಾಷಣವನ್ನು ಮೊಟಕುಗೊಳಿಸಿ ಹೊರ ನಡೆದ ನಡೆಯನ್ನು…
ಬೆಂಗಳೂರು: ರಾಜ್ಯದಲ್ಲಿ ಸರ್ಕಾರ ಬೈಕ್ ಟ್ಯಾಕ್ಸಿಗಳಿಗೆ ಲೈಸೆನ್ಸ್ ನಿರಾಕರಿಸುವಂತಿಲ್ಲ ಎಂದು ಹೈಕೋರ್ಟ ತೀರ್ಪು ನೀಡಿದೆ. ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ವಿಭು…