ನವದೆಹಲಿ: ಭಾರತ ಮತ್ತು ಪಾಕಿಸ್ತಾನದ ಗಡಿಯಲ್ಲಿ ಆಕಸ್ಮಿಕವಾಗಿ ಗಡಿ ದಾಟಿದ ಭಾರತದ ಬಿಎಸ್‌ಎಫ್ ಯೋಧನನ್ನು ಪಾಕಿಸ್ತಾನ ಬಂಧಿಸಿದೆ.
ಪಂಜಾಬ್ ಗಡಿಯನ್ನು ಆಕಸ್ಮಿಕವಾಗಿ ದಾಟಿದ ನಂತರ ಗಡಿ ಭದ್ರತಾ ಪಡೆ ಯೋಧನನ್ನು ಪಾಕಿಸ್ತಾನ ರೇಂಜರ್‌ಗಳು ಬಂಧಿಸಿದ್ದಾರೆ.
ಅವರ ಬಿಡುಗಡೆಗಾಗಿ ಎರಡೂ ದೇಶಗಳ ಸೇನಾ ಪಡೆಗಳ ನಡುವೆ ಮಾತುಕತೆ ನಡೆಯುತ್ತಿದ್ದು, ಶೀಘ್ರದಲ್ಲೇ ಬಿಡುಗಡೆ ಮಾಡುವಂತೆ ಭಾರತ ಆಗ್ರಹಿಸಿದೆ.
ಬುಧವಾರ ಕರ್ತವ್ಯದಲ್ಲಿರುವಾಗ ಪಂಜಾಬ್‌ನ ಫಿರೋಜ್‌ಪುರದಲ್ಲಿ ಅಂತರಾಷ್ಟ್ರೀಯ ಗಡಿಯನ್ನು ಆಕಸ್ಮಿಕವಾಗಿ ದಾಟಿದ ನಂತರ ಗಡಿ ಭದ್ರತಾ ಪಡೆ ಜವಾನನನ್ನು ಪಾಕಿಸ್ತಾನಿ ರೇಂಜರ್‌ಗಳು ಬಂಧಿಸಿದ್ದಾರೆ.
ಸೈನಿಕನ ಸುರಕ್ಷಿತ ವಾಪಸಾತಿಯನ್ನು ಖಚಿತಪಡಿಸಿಕೊಳ್ಳಲು ಸಭೆ ಕರೆಯಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.





