Mysore
24
broken clouds

Social Media

ಮಂಗಳವಾರ, 23 ಡಿಸೆಂಬರ್ 2025
Light
Dark

ಬಡ ಮತ್ತು ಮಧ್ಯಮ ವರ್ಗದ ಜನರಿಗೆ ಪೂರಕವಾದ ಬಜೆಟ್: ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ

ನವದೆಹಲಿ: ಭಾರತ ಮೂರನೇ ಅತಿದೊಡ್ಡ ಆರ್ಥಿಕ ರಾಷ್ಟ್ರಕ್ಕೆ ಈ ಬಜೆಟ್‌ ಸ್ಫೂರ್ತಿದಾಯಕ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಸಂತಸ ವ್ಯಕ್ತಪಡಿಸಿದ್ದಾರೆ.

ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಂದು ಮಂಡಿಸಿದ ಕೇಂದ್ರ ಬಜೆಟ್‌ ಬಗ್ಗೆ ದೆಹಲಿಯಲ್ಲಿ ಮಾತನಾಡಿದ ಅವರು, ದೇಶದ ಆರ್ಥಿಕ ಪ್ರಗತಿಯ ಮುನ್ನೋಟಕ್ಕೆ ಆಶಾದಾಯಕ ಬಜೆಟ್‌ ಆಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಆಶಯದಂತೆ ದೇಶದ ಬಡ ಮತ್ತು ಮಧ್ಯಮ ವರ್ಗದವರನ್ನು ಆರ್ಥಿಕವಾಗಿ ಸಶಕ್ತಗೊಳಿಸುವ ನಿಟ್ಟಿನಲ್ಲಿ ಪೂರಕವಾಗಿ ಪ್ರಸಕ್ತ ಸಾಲಿನ ಬಜೆಟ್‌ ಮಂಡಿಸಲಾಗಿದೆ ಎಂದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಪ್ರಧಾನಿ ಮೋದಿ ಅವರು ನಾಯಕತ್ವ ಹಾಗೂ ಆಡಳಿತದಿಂದ ಭಾರತ ಆರ್ಥಿಕವಾಗಿ ಪ್ರಗತಿ ಸಾಧಿಸುತ್ತಿದೆ.

ಎನ್‌ಡಿಎ ಸರ್ಕಾರ ತನ್ನ ಮೂರನೇ ಅವಧಿಯಲ್ಲಿ ಬಡ ಮತ್ತು ಮಧ್ಯಮ ವರ್ಗದವರನ್ನು ಆರ್ಥಿಕವಾಗಿ ಸಶಕ್ತಗೊಳಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಿರಿಸಿ ಅಭೂತಪೂರ್ವ ಬಜೆಟ್‌ ಮಂಡಿಸಲಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು.

Tags:
error: Content is protected !!