ನವದೆಹಲಿ: ಕೇಂದ್ರ ಸರ್ಕಾರಕ್ಕೆ ಹೆಚ್ಚು ತೆರಿಗೆ ನೀಡುವ ರಾಜ್ಯಗಳಿಗೆ ಕೇಂದ್ರ ಬಜೆಟ್‌ನಿಂದ ಅನ್ಯಾಯವಾಗಿದೆ. ಇಷ್ಟು ನಿರಾಶೆ, ನಿರ್ಲಕ್ಷ್ಯ ಮಾಡುತ್ತಾರೆ ಎಂದು ಅಂದುಕೊಂಡಿರಲಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಕೇಂದ್ರ ಬಜೆಟ್ ಬಗ್ಗೆ ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತೆರಿಗೆ ಕಟ್ಟುವ ಎರಡನೇ ಅತಿದೊಡ್ಡ ರಾಜ್ಯ ನಮ್ಮದು. ಐಟಿ ರಫ್ತಿನಲ್ಲಿ ನಾವೇ ಮುಂದಿದ್ದೇವೆ. ಆದರೂ ನಮಗೆ ಈ ಬಜೆಟ್‌ನಲ್ಲಿ ಸ್ವಲ್ಪವೂ ಅನುಕೂಲ ಆಗಿಲ್ಲ ಎಂದು ಕಿಡಿಕಾರಿದರು.
ಬಜೆಟ್ ಪೂರ್ವ ಸಭೆಯಲ್ಲಿ ಪ್ರಧಾನಮಂತ್ರಿಗಳಿಗೆ, ಹಣಕಾಸು ಸಚಿವರಿಗೆ ರಾಜ್ಯಕ್ಕೆ ಅನುದಾನಕ್ಕಾಗಿ ಮನವಿ ಮಾಡಿದ್ದೇವು. ಆದರೆ ಏನು ಪ್ರಯೋಜನವಾಗಿಲ್ಲ. ತೆರಿಗೆ ವಿನಾಯಿತಿ ದೊಡ್ಡ ವಿಷಯ ಅಲ್ಲ. ಎಷ್ಟು ಜನ ಟ್ಯಾಕ್ಸ್ ಕಟ್ಟೋರು ಇದ್ದಾರೆ. ಬೆಲೆ ಏರಿಕೆ ಜಾಸ್ತಿ ಆಗಿದೆ. ಈ ಬಜೆಟ್‌ನಿಂದ ದೊಡ್ಡ ಪ್ರಯೋಜನ ಏನಿಲ್ಲ ಎಂದು ಹೇಳಿದರು.
ಬಜೆಟ್‌ನ ಪ್ರತಿಯೊಂದು ಲೈನ್ ಓದಿದೆ. ಬಜೆಟ್ ಓದಬೇಕು ಓದಿದ್ದಾರೆ. ಬೇರೆ ರಾಜ್ಯಗಳ ಸುದ್ದಿ ಬೇಡ, ಕರ್ನಾಟಕ ರಾಜ್ಯಕ್ಕೆ 5,000 ಕೋಟಿ ರೂ. ನೀಡುತ್ತೇವೆ ಎಂದರು ಕೊಟ್ಟರಾ? ಹಾಗೆಯೇ ಇತರೆ ರಾಜ್ಯಗಳಿಗೂ ಆಗಬಹುದು ಎಂದು ವಾಗ್ದಾಳಿ ನಡೆಸಿದರು.
ಬೆಂಗಳೂರು: ಕೃಷಿ ಕ್ಷೇತ್ರದಲ್ಲಿನ ಹೊಸ ಬದಲಾವಣೆಗಳು ಪ್ರತಿ ರೈತರನ್ನೂ ತಲುಪಬೇಕು. ಈ ದಿಸೆಯಲ್ಲಿ ಎಫ್‌ಕೆಸಿಸಿಐನ ಪ್ರಯತ್ನ ಉತ್ತಮವಾಗಿದೆ ಎಂದು ಮುಖ್ಯಮಂತ್ರಿ…
ಬೆಂಗಳೂರು: ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ) ಬರೆಯುವ ವೇಳೆ ವಿದ್ಯಾರ್ಥಿನಿ ಮೂಗಿಗೆ ಟೇಪ್ ಹಾಕಿದ ಪ್ರಕರಣ ಮಾಸುವ ಮುನ್ನವೇ ಐವರು ವಿದ್ಯಾರ್ಥಿಗಳ…
ಹಾಸನ: ಜಿಲ್ಲೆಯ ಹೊಳೆನರಸೀಪುರ ವ್ಯಾಪ್ತಿಯಲ್ಲಿ ನಡೆದ ದೇವಾಲಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರು ಭಾವುಕರಾಗಿ ಕಣ್ಣೀರು…
ಹುಬ್ಬಳ್ಳಿ: ಮೇ.20ರೊಳಗೆ ರಾಜ್ಯ ಸಚಿವ ಸಂಪುಟ ವಿಸ್ತರಣೆ ಆಗಬಹುದು ಎಂದು ವಿಧಾನಪರಿಷತ್ ಕಾಂಗ್ರೆಸ್ ಮುಖ್ಯ ಸಚೇತಕ ಸಲೀಂ ಅಹಮ್ಮದ್ ತಿಳಿಸಿದ್ದಾರೆ.…
ಬೆಂಗಳೂರು: ಪೂರ್ವ ಮುಂಗಾರು ಮಳೆ ವಾಡಿಕೆಗಿಂತ ಕಡಿಮೆಯಾದ ಪರಿಣಾಮ ಬೇಸಿಗೆಯ ಸುಡುಬಿಸಿಲು ರಾಜ್ಯದಲ್ಲಿ ಒಂದೆಡೆ ಹೆಚ್ಚಾಗುತ್ತಿದ್ದರೆ ಮತ್ತೊಂದೆಡೆ ಜಲಾಶಯಗಳ ನೀರು…
ಬೆಂಗಳೂರು: ಕಳೆದ ಹಲವು ದಿನಗಳಿಂದ ತೀವ್ರ ಆನಾರೋಗ್ಯಕ್ಕೆ ತುತ್ತಾಗಿರುವ ಯೋಜನೆ ಮತ್ತು ಸಾಂಖಿಕ ಇಲಾಖೆ ಸಚಿವ ಡಿ.ಸುಧಾಕರ್ ಅವರ ಆರೋಗ್ಯ…