ದೇಶ- ವಿದೇಶ

ಬುಲ್ಡೋಜರ್‌ ಸಂಸ್ಕೃತಿ ನಮ್ಮದಲ್ಲ ಬಿಜೆಪಿ ಸರ್ಕಾರದ್ದು: ಮೋದಿ ಹೇಳಿಕೆಗೆ ʻಇಂಡಿಯಾʼ ಖಂಡನೆ

ಮುಂಬೈ: ಕಾಂಗ್ರೆಸ್‌ ಹಾಗೂ ಸಮಾಜವಾದಿ ಪಕ್ಷಗಳು ಅಧಿಕಾರಕ್ಕೆ ಬಂದರೆ ರಾಮಮಂದಿರಕ್ಕೆ ಬುಲ್ಡೋಜರ್‌ ಬಿಡುತ್ತಾರೆ ಎನ್ನುವ ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆಯನ್ನು ಇಂಡಿಯಾ ಕೂಟದ ನಾಯಕರು ಶನಿವಾರ(ಮೇ.18) ತೀವ್ರವಾಗಿ ಖಂಡಿಸಿದ್ದಾರೆ.

ಮುಂಬೈನಲ್ಲಿ ಇಂಡಿಯಾ ಒಕ್ಕೂಟದ ನಾಯಕರು ಜಂಟಿ ಪತ್ರಿಕಗೋಷ್ಠಿ ನಡೆಸಿ ಮೋದಿ ಹೇಳಿಕೆಯನ್ನು ಖಾರವಾಗಿ ಪ್ರಶ್ನಿಸಿದರು.

ನಾವು ಎಂದೂ ಯಾರ ಮೇಲೆಯೂ ಬುಲ್ಡೋಜರ್‌ ಪ್ರಯೋಗಿಸಿಲ್ಲ. ಬುಲ್ಡೋಜರ್‌ ಸಂಸ್ಕೃತಿ ಇರುವುದು ಅವರ ಸರ್ಕಾರದಲ್ಲೇ. ಮೋದಿಗೆ ಸುಳ್ಳು ಹೇಳುವ ಚಾಳಿ ಇದೆ. ಕಾಂಗ್ರೆಸ್‌ ಎಂದೂ ಮಾಡದ ಕೆಲಸಗಳ ಬಗ್ಗೆ ಮಾತನಾಡಿ ಜನರನ್ನು ಪ್ರಜೋದಿಸುತ್ತಾರೆ ಎವರೊಬ್ಬ ಸುಳ್ಳುಗಾರ ಎಂದು ಖರ್ಗೆ ವಾಗ್ದಾಳಿ ಮಾಡಿದರು.

ಮೋದಿ ಜನರನ್ನು ಪ್ರಜೋದಿಸಲು ಅಂತಹ ಹೇಳಿಕೆ ನೀಡಿದ್ದಾರೆ. ಚುನಾವಣೆ ಆಯೋಗವು ಮೋದಿ ವಿರುದ್ಧ ಕ್ರಮ ಜರುಗಿಸಬೇಕು. ನಾವು ಎಲ್ಲರನ್ನು ರಕ್ಷಿಸುತ್ತೇವೆ. ಸಂವಿಧಾನದ ಪ್ರಕಾರ ಕೆಲಸ ನಿರ್ವಹಿಸುತ್ತಿದ್ದೇವೆ ಎಂದರು.

ಮೋದಿ ಹಾಗೂ ಬಿಜೆಪಿ ಎಲ್ಲೇ ಹೋದರು ವಿಭಜನೆ ಮಾಡುವ ಬಗ್ಗೆಯೇ ಚಿಂತಿಸಿ ಸಮಾಜವನ್ನು ಒಡೆಯುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಇಂಡಿಯಾ ಕೂಟವು ಅಯೋಧ್ಯ ರಾಮಮಂದಿರದ ನಿರ್ಮಾಣವನ್ನು ಪೂರ್ಣಗೊಳಿಸುತ್ತದೆ. ಜೊತೆಗೆ ಎಲ್ಲ ಧರ್ಮಗಳ ಪ್ರರ್ಥನಾ ಮಂದಿರಗಳನ್ನೂ ರಕ್ಷಿಸುವುದು ಸರ್ಕಾರದ ಜವಾಬ್ದಾರಿಗಳು ಎಂದು ಇಂಡಿಯಾ ಒಕ್ಕೂಟದ ನಾಯಕರು ಪ್ರತಿಪಾದಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಶಿವಸೇನಾ ಅಧ್ಯಕ್ಷ ಉದ್ಧವ್‌ ಠಾಕ್ರೆ, ಎನ್‌ಸಿಪಿ ಮುಖ್ಯಸ್ಥ ಶರದ್‌ ಪವಾರ್‌ ಸೇರಿದಂತೆ ಇನ್ನಿತರರು ಇದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಸರ್ಕಾರಿ ಶಾಲಾ ಮಕ್ಕಳಿಗೆ ಕಳಪೆ ಶೂ ವಿತರಣೆ: ರಾಜ್ಯ ಸರ್ಕಾರದ ವಿರುದ್ಧ ಶೇ.40 ಕಮಿಷನ್ ಆರೋಪ ಮಾಡಿದ ಆರ್.‌ಅಶೋಕ್‌

ಬೆಂಗಳೂರು: ಸರ್ಕಾರಿ ಶಾಲಾ ಮಕ್ಕಳಿಗೆ ವಿತರಿಸಲಾಗಿರುವ ಶೂಗಳ ಗುಣಮಟ್ಟ ಕಳಪೆಯಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ವಿಚಾರವಾಗಿ ರಾಜ್ಯ ಸರ್ಕಾರದ…

58 mins ago

ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಂಡ ಸರ್ಕಾರ

ಬೆಂಗಳೂರು: ಹಬ್ಬಗಳ ಸೀಸನ್ ಸಮೀಪಿಸುತ್ತಿದ್ದಂತೆ ರಾಜ್ಯ ಸರ್ಕಾರ ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಕಠಿಣ ಕ್ರಮಗಳನ್ನು ಕೈಗೊಂಡಿದ್ದು, ಪಿಒಪಿ ಗಣೇಶ ಮೂರ್ತಿಗಳ…

1 hour ago

ರಾಜ್ಯದಲ್ಲಿ ಕೈಕೊಟ್ಟ ಮುಂಗಾರು: ಸಂಕಷ್ಟದತ್ತ ಕೃಷಿ ವಲಯ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಕೃಷಿ ವಲಯ ಮತ್ತೊಂದು ಗಂಭೀರ ಸಂಕಷ್ಟದತ್ತ ಸಾಗುತ್ತಿದೆ. ಸತತ ಮೂರು ವಾರಗಳಿಂದ…

1 hour ago

ಮಳೆ ಕೈಕೊಟ್ಟಿದ್ದಕ್ಕೆ ರಾಜ್ಯದಲ್ಲಿ ತಾಪಮಾನ ಏರಿಕೆ – ಮಳೆಗಾಲದಲ್ಲೇ ಬೇಸಿಗೆಯಂತಹ ಬಿಸಿಲು

ಬೆಂಗಳೂರು: ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿರುವ ಬೆನ್ನಲ್ಲೇ ತಾಪಮಾನ ಏರಿಕೆಯಾಗಿದ್ದು, ಸೆಪ್ಟೆಂಬರ್ ತಿಂಗಳಲ್ಲೂ ಬೇಸಿಗೆಯಂತಹ ಬಿಸಿಲಿನ ವಾತಾವರಣ ಕಂಡುಬರುತ್ತಿದೆ. ಸಾಮಾನ್ಯವಾಗಿ…

2 hours ago

SIR ನೋಟಿಸ್: ವಿಚಾರಣೆಗೆ ತೆರಳುವಾಗ ಈ ದಾಖಲೆಗಳು ನಿಮ್ಮ ಬಳಿ ಇರಲಿ

ಬೆಂಗಳೂರು: SIR ನೋಟಿಸ್‌ಗಳ ವಿಚಾರಣೆ ಅಧಿಕೃತವಾಗಿ ಆರಂಭವಾಗಿದೆ. ವಿಚಾರಣೆಗೆ ಹಾಜರಾಗುವ ವೇಳೆ ಅಗತ್ಯ ದಾಖಲೆಗಳನ್ನು ಕಡ್ಡಾಯವಾಗಿ ಕೊಂಡೊಯ್ಯುವುದು ಮುಖ್ಯವಾಗಿದೆ. ನಿಮ್ಮ…

4 hours ago

ದಸರಾ ಚಿತ್ರೋತ್ಸವ ರದ್ದಾಗದಿರಲಿ

ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…

9 hours ago