Mysore
22
overcast clouds

Social Media

ಸೋಮವಾರ, 31 ಆಗಸ್ಟ್ 2026
Light
Dark

ಚಾಲಕನಿಗೆ ಹೃದಯಾಘಾತವಾಗಿ ಬಸ್‌ ಅಪಘಾತ 9 ಮಂದಿ ಸಾವು

ಗುಜರಾತ್: ಕಳೆದ ದಿನ ತಡರಾತ್ರಿ ಗುಜರಾತ್ನ ನವಸಾರಿ ಜಿಲ್ಲೆಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಈ ಘಟನೆಯಲ್ಲಿ 9 ಮಂದಿ ಸಾವನ್ನಪ್ಪಿದ್ದು 28 ಜನರು ಗಾಯಗೊಂಡಿದ್ದಾರೆ. ಸೂರತ್ನಿಂದ ಪ್ರಮುಖ್ ಸ್ವಾಮಿ ಮಹಾರಾಜ್ ಶತಾಬ್ದಿ ಮಹೋತ್ಸವ ಕಾರ್ಯಕ್ರಮ ಮುಗಿಸಿ ವಾಪಸ್ಸಾಗುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ.
ಬಸ್ ಚಾಲಕನಿಗೆ ಮಾರ್ಗ ಮಧ್ಯೆ ಹೃದಯಾಘಾತವಾಗಿದೆ. ಇದೇ ವೇಳೆ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಸಾಗುತ್ತಿದ್ದ ಟೊಯೊಟಾ ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಕಾರಿನಲ್ಲಿದ್ದ ಎಲ್ಲರೂ ಸಾವನ್ನಪ್ಪಿದ್ದಾರೆ. ಇನ್ನು ಬಸ್‌ನಲ್ಲಿದ್ದ 28 ಜನರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಸದ್ಯ 11 ಜನರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತದಿಂದ ಹೆದ್ದಾರಿಯಲ್ಲಿ ವಾಹನ ಸಂಚಾರ ಅಸ್ತವ್ಯಸ್ತವಾಗಿದ್ದು, ಪೊಲೀಸರು ಆಗಮಿಸಿ ಕಾರ್ಯಾಚರಣೆ ಕೈಗೊಂಡು ಪರಿಸ್ಥಿತಿ ನಿಯಂತ್ರಣಕ್ಕೆ ತಂದಿದ್ದಾರೆ.

ಫಾರ್ಚುನರ್ ಕಾರಿಗೆ ಬಸ್ ಡಿಕ್ಕಿ ಹೊಡೆದಿದೆ. ಬಸ್ ನಿಯಂತ್ರಣ ತಪ್ಪಿ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಒಂಬತ್ತು ಜನರ ಪ್ರಾಣ ಪಕ್ಷಿ ಹಾರಿಹೋಗಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!