ಹೊಸದಿಲ್ಲಿ : ಮೆಕ್ಕಾದಿಂದ ಮದೀನಾಗೆ ಭಾರತೀಯ ಉಮ್ರಾ ಯಾತ್ರಿಕರನ್ನು ಕರೆದೊಯ್ಯುತ್ತಿದ್ದ ಬಸ್ಸೊಂದು ಡೀಸೆಲ್ ಟ್ಯಾಂಕರ್‌ಗೆ ಡಿಕ್ಕಿ ಹೊಡೆದ ಪರಿಣಾಮ, ಸುಮಾರು 42 ಮಂದಿ ಭಾರತೀಯ ಯಾತ್ರಿಕರು ಸಾವನ್ನಪ್ಪಿರುವ ದುರಂತವೊಂದು ಸಂಭವಿಸಿದೆ.
ಸೋಮವಾರ ಬೆಳಗಿನ ಜಾವ ಮೆಕ್ಕಾದಿಂದ ಮದೀನಾಗೆ ಭಕ್ತರನ್ನು ಕರೆದೊಯ್ಯಲಾಗುತ್ತಿತ್ತು. ದುರಂತದ ಸಮಯದಲ್ಲಿ ಸುಮಾರು 20 ಮಹಿಳೆಯರು ಮತ್ತು 11 ಮಕ್ಕಳು ಬಸ್ಸಿನಲ್ಲಿದ್ದರು.
ಈ ವೇಳೆ ಬಸ್ ಡೀಸೆಲ್ ಟ್ಯಾಂಕರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಹೊತ್ತಿಕೊಂಡಿದೆ. ಪರಿಣಾಮ ಬಸ್ಸಿನಲ್ಲಿದ್ದ 42 ಭಾರತೀಯ ಉಮ್ರಾ ಯಾತ್ರಿಕರು ಸಜೀವ ದಹನವಾಗಿದ್ದಾರೆಂದು ತಿಳಿದುಬಂದಿದೆ. ಪ್ರಾಥಮಿಕ ವರದಿಗಳ ಪ್ರಕಾರ, ಮುಫ್ರಿಹತ್ ಎಂದು ಗುರುತಿಸಲಾದ ಸ್ಥಳದಲ್ಲಿ ಭಾರತೀಯ ಕಾಲಮಾನ ಬೆಳಗಿನ ಜಾವ 1.30 ರ ಸುಮಾರಿಗೆ ಈ ಘಟನೆ ಸಂಭವಿಸಿದೆ ಎಂದು ವರದಿಗಳು ತಿಳಿಸಿವೆ.
ಇದನ್ನು ಓದಿ: ಲಾರಿ-ಟಿ.ಟಿ ವಾಹನ ನಡುವೆ ಅಪಘಾತ : 12ಕ್ಕೂ ಹೆಚ್ಚು ಮಂದಿಗೆ ಗಾಯ
ಸ್ಥಳದಲ್ಲಿ ತುರ್ತು ಕಾರ್ಯಾಚರಣೆಗಳು ನಡೆಯುತ್ತಿದ್ದು, ಹಜ್ ಮತ್ತು ಉಮ್ರಾ ಸಚಿವಾಲಯ ಹಾಗು ಪ್ರಯಾಣ ಸಂಸ್ಥೆ ಅಪಘಾತವನ್ನು ದೃಢಪಡಿಸಿರುವುದಾಗಿ ಸುದ್ದಿ ಸಂಸ್ಥೆಯೊಂದು ವರದಿ ಮಾಡಿದೆ. ಸ್ಥಳೀಯ ಮೂಲಗಳು 42 ಸಾವುಗಳನ್ನು ವರದಿ ಮಾಡಿದ್ದರೂ, ಅಧಿಕಾರಿಗಳು ಇನ್ನೂ ನಿಖರ ಸಾವುನೋವುಗಳ ಸಂಖ್ಯೆ ಮತ್ತು ಬದುಕುಳಿದವರ ಸ್ಥಿತಿಯನ್ನು ಪರಿಶೀಲಿಸುತ್ತಿದ್ದಾರೆ.
ಘಟನೆಯಲ್ಲಿ ಓರ್ವ ಯುವಕ ಮಾತ್ರ ಬದುಕುಳಿದಿದ್ದು, ಆತನನ್ನು 25 ವರ್ಷದ ಅಬ್ದುಲ್ ಶುಹೈಬ್ ಮೊಹಮ್ಮದ್ ಎಂದು ಗುರುತಿಸಲಾಗಿದೆ. ಘಟನೆಯ ಸಂದರ್ಭದಲ್ಲಿ ಯಾತ್ರಿಕರೆಲ್ಲರೂ ನಿದ್ರೆಯಲ್ಲಿದ್ದದ್ದರಿಂದ ಭಾರೀ ಅವಘಡ ಸಂಭವಿಸಿದೆ ಎನ್ನಲಾಗಿದೆ.
ಯಾತ್ರಿಕರಿಗೆ ಉಮ್ರಾ ವೀಸಾ ಮತ್ತು ಪ್ರಯಾಣದ ವ್ಯವಸ್ಥೆ ಮಾಡಿದ್ದ ಏಜೆನ್ಸಿಗಳು ಮುಂದಿನ ಎಲ್ಲ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಹಜ್ ಮತ್ತು ಉಮ್ರಾ ಸಚಿವಾಲಯದ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದಾರೆ.
ಇದನ್ನು ಓದಿ: ನೀರಿನ ಘಟಕಕ್ಕೆ ಗುದ್ದಿದ ಬೊಲೆರೋ ವಾಹನ : ತಪ್ಪಿದ ಅನಾಹುತ ; ಘಟಕ ಜಖಂ
ಸಿಎಂ ರೇವಂತ್ ರೆಡ್ಡಿ ಸಂತಾಪ
ಮೃತರೆಲ್ಲರೂ ಹೈದರಾಬಾದ್ ಮೂಲದವರೆಂದು ಹೇಳಲಾಗುತ್ತಿದ್ದು, ಘಟನೆಗೆ ಮುಖ್ಯಮಂತ್ರಿ ರೇವಂತ್ ರೆಡ್ಡಿಯವರು ಆಘಾತ ವ್ಯಕ್ತಪಡಿಸಿದ್ದಾರೆ.
ತೆಲಂಗಾಣ ನಿವಾಸಿಗಳ ಸಂಖ್ಯೆ ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ಸಂಗ್ರಹಿಸುವಂತೆ ಮುಖ್ಯಮಂತ್ರಿಗಳು ಮುಖ್ಯ ಕಾರ್ಯದರ್ಶಿ ಮತ್ತು ಡಿಜಿಪಿಗೆ ಸೂಚನೆ ನೀಡಿದ್ದಾರೆ.
ಕೇಂದ್ರ ವಿದೇಶಾಂಗ ಸಚಿವಾಲಯ ಮತ್ತು ಸೌದಿ ರಾಯಭಾರ ಕಚೇರಿಯ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ, ಅಗತ್ಯ ಪರಿಹಾರ ಕ್ರಮಗಳನ್ನು ವಿಳಂಬವಿಲ್ಲದೆ ಪ್ರಾರಂಭಿಸುವಂತೆ ಸೂಚಿಸಿದ್ದಾರೆ.
ಸಿಎಂ ಸೂಚನೆ ಬೆನ್ನಲ್ಲೇ ಮುಖ್ಯ ಕಾರ್ಯದರ್ಶಿ ಕೆ.ರಾಮಕೃಷ್ಣ ರಾವ್ ಅವರು ದೆಹಲಿಯಲ್ಲಿ ಸಮನ್ವಯ ಕಾರ್ಯದರ್ಶಿ ಗೌರವ್ ಉಪ್ಪಲ್ ಅವರೊಂದಿಗೆ ಮಾತುಕತೆ ನಡೆಸಿದ್ದು, ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡಲು ಮತ್ತು ಕುಟುಂಬಗಳಿಗೆ ಮಾಹಿತಿ ನೀಡಲು ನಿಯಂತ್ರಣ ಕೊಠಡಿಯನ್ನು ಸ್ಥಾಪಿಸಿದ್ದಾರೆ.
ಓವೈಸಿ ಸಂತಾಪ
ಘಟನೆಯಲ್ಲಿ ಮೃತಪಟ್ಟವರ ಕುಟುಂಬಕ್ಕೆ ಅಸಾದುದ್ದೀನ್ ಓವೈಸಿ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.
ಹೈದರಾಬಾದ್ ಮೂಲದ ಎರಡು ಪ್ರಯಾಣ ಏಜೆನ್ಸಿಗಳನ್ನು ಸಂಪರ್ಕಿಸಿ ಪ್ರಯಾಣಿಕರ ಮಾಹಿತಿಯನ್ನು ರಿಯಾದ್ ರಾಯಭಾರ ಕಚೇರಿಯೊಂದಿಗೆ ಹಂಚಿಕೊಂಡಿದ್ದೇನೆ. ರಿಯಾದ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯ ಅಧಿಕಾರಿ ಅಬು ಮಾಥೇನ್ ಜಾರ್ಜ್ ಅವರೊಂದಿಗೆ ಮಾತಕತೆ ನಡೆಸಲಾಗಿದೆ. ಅವರು ಸ್ಥಳೀಯ ಅಧಿಕಾರಿಗಳಿಂದ ಮಾಹಿತಿಯನ್ನು ಸಂಗ್ರಹಿಸುತ್ತಿದ್ದಾರೆಂದು ಹೇಳಿದ್ದಾರೆ.
ಮೃತದೇಹಗಳನ್ನು ಭಾರತಕ್ಕೆ ತರುವಂತೆ ಮತ್ತು ಗಾಯಗೊಂಡವರಿಗೆ ಸೂಕ್ತ ವೈದ್ಯಕೀಯ ಚಿಕಿತ್ಸೆ ದೊರೆಯುವಂತೆ ನೋಡಿಕೊಳ್ಳುವಂತೆ ಕೇಂದ್ರ ಸರ್ಕಾರ, ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರಿಗೆ ಮನವಿ ಮಾಡುತ್ತೇನೆಂದು ತಿಳಿಸಿದ್ದಾರೆ.
ಇದನ್ನು ಓದಿ: ಅಪಘಾತ | ಬೈಕ್ ಸವಾರ ಸಾವು, ಪಾದಚಾರಿ ಗಂಭೀರ
ಸಂಸದೀಯ ವ್ಯವಹಾರ ಮತ್ತು ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ಪ್ರತಿಕ್ರಿಯಿಸಿ, ಸೌದಿ ಅರೇಬಿಯಾದ ಮದೀನಾ-ಮೆಕ್ಕಾ ಹೆದ್ದಾರಿಯಲ್ಲಿ ಸಂಭವಿಸಿದ ಬಸ್ ಅಪಘಾತದಲ್ಲಿ ಭಾರತೀಯ ಯಾತ್ರಿಕರ ಸಾವು ಸಂಭವಿಸಿರುವುದು ಆಘಾತ ಹಾಗೂ ತೀವ್ರ ದುಃಖ ತಂದಿದೆ.
ನಮ್ಮ ರಾಯಭಾರ ಕಚೇರಿ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದೇವೆ, ಹೆಚ್ಚಿನ ವಿವರಗಳನ್ನು ಸಂಗ್ರಹಿಸಲಾಗುತ್ತಿದ್ದು, ಸಾಧ್ಯವಿರುವ ಎಲ್ಲಾ ರೀತಿಯ ನೆರವುಗಳನ್ನು ಒದಗಿಸಲಾಗುತ್ತಿದೆ. ದುಃಖಿತ ಕುಟುಂಬಗಳಿಗೆ ನನ್ನ ಸಂತಾಪಗಳು ಎಂದು ಹೇಳಿದ್ದಾರೆ.
ಸಹಾಯವಾಣಿಯ ಸಂಪರ್ಕ ವಿವರಗಳು ಕೆಳಕಂಡಂತಿವೆ:
8002440003 (ಟೋಲ್ ಫ್ರೀ)
0122614093
0126614276
0556122301 (ವಾಟ್ಸಾಪ್)
ಮಂಡ್ಯ: ಜಿಲ್ಲೆಯಲ್ಲಿ ಅಭಿವೃದ್ಧಿ ಪರ್ವ ಆರಂಭವಾಗಿದೆ. ನಾನು ಕೊಟ್ಟ ಮಾತಿನಂತೆ ನುಡಿದಂತೆ ನಡೆಯುತ್ತಿದ್ದೇನೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿಗೆ ತಿಳಿಸಿದ್ದಾರೆ.…
ಮೈಸೂರು: ಕೆಲವು ಕಡೆ ಊಟದ ವಿಚಾರಕ್ಕಾಗಿಯೇ ಪ್ರವಾಸಿಗರು ಹೋಟೆಲ್ ರೂಂ ಬುಕ್ಕಿಂಗ್ ಕ್ಯಾನ್ಸಲ್ ಮಾಡಿಕೊಂಡಿದ್ದಾರೆ ಎಂದು ಹೋಟೆಲ್ ಮಾಲೀಕರ ಸಂಘದ…
ಚೆನ್ನೈ: ಟಿವಿಕೆ ಪಕ್ಷ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಸೇರಲಿದೆ ಎಂಬ ಸುದ್ದಿಗಳು ಕೇಳಿಬರುತ್ತಿರುವ ಬೆನ್ನಲ್ಲೇ ಟಿವಿಕೆ ಈಗ ಸ್ಪಷ್ಟನೆ…
ಬೆಂಗಳೂರು: ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಮಾಜಿ ಅಧ್ಯಕ್ಷ ಜೈರಾಜ್ ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ. ತುಮಕೂರು ಜಿಲ್ಲೆಯ ಗುಬ್ಬಿ ಮೂದವರಾಗಿದ್ದ…
ಚಾಮರಾಜನಗರ: ಜಿಲ್ಲೆಯಲ್ಲಿ ಮಾನವ ಮತ್ತು ವನ್ಯಜೀವಿಗಳ ನಡುವಿನ ಸಂಘರ್ಷ ತಾರಕಕ್ಕೇರಿದೆ. ಚಿರತೆ ಮತ್ತು ಆನೆಗಳ ದಾಳಿಯ ಬೆನ್ನಲ್ಲೇ, ಈಗ ಹುಲಿರಾಯನ…
ಹುಣಸೂರು: ಕೂಲಿ ಕಾರ್ಮಿಕನ ಮೇಲೆ ಚಿರತೆ ದಾಳಿ ನಡೆಸಿ ತೀವ್ರವಾಗಿ ಗಾಯಗೊಳಿಸಿರುವ ಘಟನೆ ತಾಲ್ಲೂಕಿನ ಹನಗೋಡು ಹೋಬಳಿಯ ಕಣಗಾಲು ಗ್ರಾಮದ…