ದೇಶ- ವಿದೇಶ

ಅಮರನಾಥ ಯಾತ್ರಾರ್ಥಿಗಳಿದ್ದ ಬಸ್‌ ಅಪಘಾತ: 36 ಜನರಿಗೆ ಗಾಯ

ಶ್ರೀನಗರ: ಜಮ್ಮು-ಕಾಶ್ಮೀರದ ರಾಂಬನ್‌ ಜಿಲ್ಲೆಯ ಚಂದರ್ಕೋಟ್‌ ಲ್ಯಾಂಗರ್‌ ಸ್ಥಳದಲ್ಲಿ ಅಮರನಾಥ ಯಾತ್ರೆಯ ಪಹಲ್ಗಾಮ್‌ ಬೆಂಗಾವಲಿನ ಕೊನೆಯ ವಾಹನವು ನಿಯಂತ್ರಣ ತಪ್ಪಿ ಸಿಲುಕಿಕೊಂಡಿದ್ದ ವಾಹನಗಳಿಗೆ ಡಿಕ್ಕಿ ಹೊಡೆದ ಪರಿಣಾಮ 36 ಯಾತ್ರಿಕರು ಗಾಯಗೊಂಡಿದ್ದಾರೆ.

ಅಪಘಾತದಲಲಿ ಯಾತ್ರಾ ಬೆಂಗಾವಲಿನ ಭಾಗವಾಗಿರುವ ನಾಲ್ಕು ಬಸ್‌ಗಳು ಹಾನಿಗೊಳಗಾಗಿವೆ. ಪಹಲ್ಗಾಮ್‌ ಬೆಂಗಾವಲಿನ ಕೊನೆಯ ವಾಹನವು ನಿಯಂತ್ರಣ ತಪ್ಪಿ ಚಂದರ್ಕೋಟ್‌ ಲ್ಯಾಂಗರ್‌ ಸ್ಥಳದಲ್ಲಿ ಸಿಕ್ಕಿಬಿದ್ದ ವಾಹನಗಳಿಗೆ ಡಿಕ್ಕಿ ಹೊಡೆದು 4 ವಾಹನಗಳಿಗೆ ಹಾನಿಯಾಗಿದ್ದು, 36 ಯಾತ್ರಿಕರಿಗೆ ಸಣ್ಣಪುಟ್ಟ ಗಾಯಗಳಾಗಿದೆ.

ಗಾಯಾಳುಗಳನ್ನು ಶ್ರೀನಗರ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.

ಆಂದೋಲನ ಡೆಸ್ಕ್

Recent Posts

ಗುಂಡ್ಲುಪೇಟೆ: ಗಾಳಿ ಮಳೆಗೆ ಜಗಲಿ ಕಟ್ಟೆಯ ಬುಗರಿ ಮರ ಬಿದ್ದು ಮನೆ ಜಖಂ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು  ಗುಂಡ್ಲುಪೇಟೆ: ಗಾಳಿ ಮಳೆಗೆ ಜಗಲಿ ಕಟ್ಟೆಯ ಬುಗರಿ ಮರ ಬಿದ್ದು ಮನೆ ಜಖಂಗೊಂಡಿರುವ…

7 hours ago

ಗುಂಡ್ಲುಪೇಟೆ: ಮದ್ದೂರು ವಲಯದಲ್ಲಿ ಮೃತ ಹುಲಿ ಕಳೇಬರ ಪತ್ತೆ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ‌ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ವಲಯದ ಮಾರಿಗುಡಿ ಬೀಟ್…

7 hours ago

ಭಾರತದಲ್ಲಿ ಕಚ್ಚಾ ತೈಲ ಸಾಕಷ್ಟು ಲಭ್ಯವಿದೆ: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ದೇಶದಲ್ಲಿ ಕಚ್ಚಾ ತೈಲ ಸಾಕಷ್ಟು ಲಭ್ಯವಿದೆ. ಭಾರತವು ಕಚ್ಚಾ ತೈಲಕ್ಕಾಗಿ ಸಾಕಷ್ಟು ಸಂಗ್ರಹಣಾ ಸೌಲಭ್ಯಗಳು ಮತ್ತು ವಿಶ್ವಾಸಾರ್ಹ ಪೂರೈಕೆ…

10 hours ago

ರಸ್ತೆ ಅಪಘಾತಗಳನ್ನು ತಡೆಗಟ್ಟಲು ಅಗತ್ಯ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ

ಮೈಸೂರು: ರಸ್ತೆ ಅಪಘಾತದಿಂದ ಹಲವರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಆದ್ದರಿಂದ ರಸ್ತೆ ಅಪಘಾತಗಳನ್ನು ತಡೆಗಟ್ಟಲು ಕ್ರಮ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ…

10 hours ago

ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ಅನುದಾನ ಒದಗಿಸಿ: ಎಂಎಲ್‌ಸಿ ಕೆ.ಶಿವಕುಮಾರ್‌ ಆಗ್ರಹ

ಬೆಂಗಳೂರು: ಮೈಸೂರು ನಗರ ಸೇರಿದಂತೆ ರಾಜ್ಯದಲ್ಲಿರುವ ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ಹೆಚ್ಚಿನ ಅನುದಾನ ಒದಗಿಸಬೇಕೆಂದು ಎಂಎಲ್‌ಸಿ ಕೆ.ಶಿವಕುಮಾರ್‌ ಒತ್ತಾಯಿಸಿದ್ದಾರೆ. ಈ…

10 hours ago

ಮಹೇಶ್‌ ಶೆಟ್ಟಿ ತಿಮರೋಡಿ ಗಡಿಪಾರು ಆದೇಶಕ್ಕೆ ಹೈಕೋರ್ಟ್‌ ಮಧ್ಯಂತರ ತಡೆ

ಬೆಂಗಳೂರು: ಮಹೇಶ್‌ ಶೆಟ್ಟಿ ತಿಮರೋಡಿ ಗಡಿಪಾರು ಮಾಡಿ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್‌ ಮಧ್ಯಂತರ ತಡೆಯಾಜ್ಞೆ ನೀಡಿದೆ. ತಿಮರೋಡಿ ಅವರನ್ನು ದಕ್ಷಿಣ…

11 hours ago