Mysore
30
clear sky

Social Media

ಸೋಮವಾರ, 08 ಡಿಸೆಂಬರ್ 2025
Light
Dark

ಆಫ್ಘಾನಿಸ್ತಾನದಲ್ಲಿ ವಲಸಿಗರನ್ನು ಹೊತ್ತೊಯ್ಯುತ್ತಿದ್ದ ಬಸ್ ಬೆಂಕಿಗಾಹುತಿ: 71 ಮಂದಿ ಸುಟ್ಟು ಕರಕಲು

bus burnt

ಆಫ್ಘಾನಿಸ್ತಾನ: ಆಫ್ಘಾನಿಸ್ತಾನದಲ್ಲಿ ವಲಸಿಗರನ್ನು ಹೊತ್ತೊಯ್ಯುತ್ತಿದ್ದ ಬಸ್ ಬೆಂಕಿಗಾಹುತಿಯಾಗಿದ್ದು, ಘಟನೆಯಲ್ಲಿ 71 ಮಂದಿ ಸುಟ್ಟು ಕರಕಲಾಗಿದ್ದಾರೆ ಎಂದು ವರದಿಯಾಗಿದೆ.

ಆಫ್ಘಾನಿಸ್ತಾನದ ಪಶ್ಚಿಮ ಹೆರಾತ್ ಪ್ರಾಂತ್ಯದಲ್ಲಿ ಪ್ರಯಾಣಿಕರ ಬಸ್ ಟ್ರಕ್ ಮತ್ತು ಬೈಕ್‍ಗೆ ಡಿಕ್ಕಿ ಹೊಡೆದ ನಂತರ ಬಸ್‍ಗೆ ಬೆಂಕಿ ಹೊತ್ತಿಕೊಂಡಿತ್ತು. ನೋಡ ನೋಡುತ್ತಲೇ 17 ಮಕ್ಕಳು ಸೇರಿದಂತೆ ಕನಿಷ್ಠ 71 ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸರ್ಕಾರದ ವಕ್ತಾರ ಅಹ್ಮದುಲ್ಲಾ ಮುತ್ತಕಿ ಪೋಸ್ಟ್ ಮಾಡಿದ್ದು, ಸಾವಿನ ಸಂಖ್ಯೆಯನ್ನು ದೃಢಪಡಿಸಿದ್ದಾರೆ. ಇದು ಇತ್ತೀಚಿನ ದಿನಗಳಲ್ಲಿ ಸಂಭವಿಸಿದ ಅತ್ಯಂತ ಭೀಕರ ಅಪಘಾತ ಎಂದು ಹೇಳಿದ್ದಾರೆ.

ಮೃತರಲ್ಲಿ ಹೆಚ್ಚಿನವರು ಬಸ್‍ನಲ್ಲಿ ಪ್ರಯಾಣಿಸುತ್ತಿದ್ದರು. ಟ್ರಕ್‍ನಲ್ಲಿ ಇಬ್ಬರು ಮತ್ತು ಬೈಕ್‍ನಲ್ಲಿ ಇಬ್ಬರು ಇದ್ದರು. ಆಫ್ಘಾನಿಸ್ತಾನದಲ್ಲಿ ರಸ್ತೆ ಅಪಘಾತಗಳಿಗೆ ಕಾರಣಗಳು ಆಫ್ಘಾನಿಸ್ತಾನದಲ್ಲಿ ಸಂಚಾರ ಅಪಘಾತಗಳು ಸಾಮಾನ್ಯ. ದಶಕಗಳ ಸಂಘರ್ಷ, ಕೆಟ್ಟ ರಸ್ತೆಗಳು, ಹೆದ್ದಾರಿಗಳಲ್ಲಿ ಅಪಾಯಕಾರಿ ಚಾಲನೆ ಮತ್ತು ನಿಯಮಗಳನ್ನು ನಿರ್ಲಕ್ಷಿಸುವುದು ಸೇರಿದಂತೆ ರಸ್ತೆ ಅಪಘಾತಗಳಿಗೆ ಹಲವು ಕಾರಣಗಳಿವೆ.

Tags:
error: Content is protected !!